ಹನುಮಸಾಗರ: ಕನ್ನಡ ಭಾಷೆ ಬೆಳವಣಿಗೆಗೆ ನಾಡಿನ ಎಲ್ಲರೂ ಶ್ರಮಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಶಾಸಕ ದೊಡ್ಡನಗೌಡ ಎಚ್. ಪಾಟೀಲ್ ಹೇಳಿದರು.
ಸಮೀಪದ ಹೂಲಗೇರಾದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಿಮಿತ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನೆಲ, ಜಲ ಹಾಗೂ ಭಾಷೆಯ ವಿಷಯ ಬಂದಾಗ ಜಾತಿ, ಮತ, ಪಂಥ ಮರೆತು ಎಲ್ಲರೂ ಒಟ್ಟಾಗಬೇಕು. ವೈಯಕ್ತಿಕ ಭಿನ್ನಾಭಿಪ್ರಾಯ ಮರೆತು ಸಮ್ಮೇಳನ ಯಶಸ್ಸಿಗೆ ಶ್ರಮಿಸಬೇಕು ಎಂದರು.
ಕಸಾಪ ಜಿಲ್ಲಾಧ್ಯಕ್ಷ ಶರಣೇಗೌಡ ಪೊಲೀಸ್ ಪಾಟೀಲ್ ಕಸಾಪ ಧ್ವಜಾರೋಹಣ, ಕಸಾಪ ತಾಲೂಕು ಅಧ್ಯಕ್ಷ ಲೆಂಕಪ್ಪ ವಾಲೀಕಾರ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಜಿಪಂ ಮಾಜಿ ಸದಸ್ಯ ಪ್ರಕಾಶ ರಾಠೋಡ, ತಾಪಂ ಮಾಜಿ ಸದಸ್ಯ ಸುರೇಶ ಕುಂಟನಗೌಡ್ರ, ಮುಖಂಡ ಎಂ.ಆರ್. ಪಾಟೀಲ್, ಕಸಾಪ ಜಿಲ್ಲೆ, ತಾಲೂಕು ಹಾಗೂ ಹನುಮಸಾಗರ ಹೋಬಳಿ ಘಟಕದ ಪದಾಧಿಕಾರಿಗಳು, ಮುಖಂಡರು, ವಿವಿಧ ಶಾಲೆಗಳ ಶಿಕ್ಷಕರು ಉಪಸ್ಥಿತರಿದ್ದರು.
ತಡವಾಗಿ ಬಂದ ಶಾಸಕ: ಬೆಳ್ಳಗೆ 7.30ಕ್ಕೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಲು ಬರಬೇಕಿದ್ದ ಶಾಸಕ ದೊಡ್ಡನಗೌಡ ಎಚ್. ಪಾಟೀಲ್, 8.30ಕ್ಕೆ ಬಂದಿದ್ದರಿಂದ ಇವರಿಗಾಗಿ ಆಗಮಿಕರೆಲ್ಲರೂ ಕಾದು ನಿಲ್ಲಬೇಕಾಯಿತು.