More

    ಧಾರ್ಮಿಕ ನಂಬಿಕೆ ಕಾರ್ಯಕ್ರಮಗಳ ಅರಿವು ಮೂಡಿಸಿ, ಸಂಪನ್ಮೂಲ ವ್ಯಕ್ತಿ

    ಹನುಮಸಾಗರ: ತಂತ್ರಜ್ಞಾನ ಬೆಳೆದಂತೆ ಧಾರ್ಮಿಕ ನಂಬಿಕೆ ಹಾಗೂ ಆಚರಣೆಗಳು ಕಡಿಮೆಯಾಗುತ್ತಿವೆ ಎಂದು ಸಂಪನ್ಮೂಲ ವ್ಯಕ್ತಿ ರಾಮಚಂದ್ರ ಬಡಿಗೇರ ಅಭಿಪ್ರಾಯಪಟ್ಟರು.

    ಹನುಮನಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಭಾನುವಾರ ಹಮ್ಮಿಕೊಂಡಿದ್ದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಇದನ್ನೂ ಓದಿ: ಧಾರ್ಮಿಕ ಕಾರ್ಯಕ್ರಮಗಳ ಅರಿವು ಮೂಡಿಸಿ

    ಮೊಬೈಲ್ ದಾಸರಾಗುತ್ತಿರುವ ಮಕ್ಕಳಿಗೆ ಇಂತಹ ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಬೇಕಿದೆ. ಕೆಟ್ಟ ವಿಚಾರಗಳಿಂದ ದೂರ ಉಳಿದು, ಉತ್ತಮ ಚಿಂತನೆಯಲ್ಲಿ ತೊಡಗಿದಾಗ ಮಾತ್ರ ಧಾರ್ಮಿಕತೆಯಲ್ಲಿ ಮನಸ್ಸು ಕೇಂದ್ರೀಕರಿಸಲು ಸಾಧ್ಯ. ಧರ್ಮದ ದಾರಿಯಲ್ಲಿ ನಡೆದಾಗ ಭಗವಂತನ ಅನುಗ್ರಹವಾಗುತ್ತದೆ ಎಂದರು.

    ಗದಗ ಬೃಹನ್ಮಠದ ಅಭಿನವ ಪಂಚಾಕ್ಷರ ಶಿವಾಚಾರ್ಯರು, ಯೋಜನೆಯ ಜಿಲ್ಲಾ ನಿರ್ದೇಶಕ ಸದಾನಂದ ಬಂಗೇರ, ಗ್ರಾಪಂ ಅಧ್ಯಕ್ಷೆ ಶಾಂತವ್ವ ಲೆಂಕಪ್ಪ ಸಾಂತಗೇರಿ, ತಾಲೂಕು ಯೋಜನಾಧಿಕಾರಿ ಶೇಖರ ನಾಯಕ, ವಲಯ ಮೇಲ್ವಿಚಾರಕರಾದ ಮಹೇಶ ಜಕ್ಕಲಿ, ನವೀನ, ಯರಿಸ್ವಾಮಿ, ತಾಪಂ ಮಾಜಿ ಸದಸ್ಯ ಅಂದಪ್ಪ ತಳವಾರ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಂಜುನಾಥ ಮುಷ್ಟಿಗೇರಿ, ಮುಖ್ಯಶಿಕ್ಷಕರಾದ ರುದ್ರಮ್ಮ ಬಿರಾದಾರ, ಹನಮಂತಪ್ಪ ಮಾಲಗಿತ್ತಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts