ಪೋಷಣ್ ಅಭಿಯಾನಕ್ಕೆ ಸ್ಮಾಟ್ ಫೋನ್ ಸಹಕಾರಿ

ಹನೂರು : ಮಕ್ಕಳು, ಗರ್ಭಿಣಿಯರು, ಬಾಣಂತಿಯರ ನೋಂದಣಿ ಹಾಗೂ ಅಂಗನವಾಡಿಗೆ ಸಂಬಂಧಿಸಿದಂತೆ ಇತರೆ ಮಾಹಿತಿಗಳಿಗೆ ಸ್ಮಾಟ್ ಫೋನ್ ಸಹಕಾರಿಯಾಗಲಿದೆ ಎಂದು ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.
ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದ ಸಭಾಂಗಣದಲ್ಲಿ ಶನಿವಾರ ಮಹಿಳಾ ಮತ್ತು ಕಲ್ಯಾಣ ಇಲಾಖೆಯ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಿಸಿ ಮಾತನಾಡಿದರು. ಅಂಗನವಾಡಿ ಕಾರ್ಯಕರ್ತರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಮಕ್ಕಳ ಶಾಲಾ ಪೂರ್ವ ಶಿಕ್ಷಣ, ಪೌಷ್ಟಿಕತೆ, ಗರ್ಭಿಣಿ ಹಾಗೂ ಬಾಣಂತಿಯರ ಆರೈಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಈ ಹಿಂದೆ ಮಾಹಿತಿಯನ್ನು ಪುಸ್ತಕದಲ್ಲಿ ದಾಖಲೀಕರಣ ಮಾಡಬೇಕಿತ್ತು. ಆದರೆ ಇಂದಿನ ಆಧುನಿಕ ಯುಗದಲ್ಲಿ ಎಲ್ಲವೂ ಡಿಜಿಟಲೀಕರಣಗೊಂಡಿದೆ. ಹಾಗಾಗಿ ಸರ್ಕಾರದ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನ ಗೊಳಿಸಲು ಹಾಗೂ ಅಂಗನವಾಡಿಗಳಲ್ಲಿ ಉತ್ತಮ ಸೇವೆ ಸಲ್ಲಿಸಲು ಸಹಕಾರಿಯಾಗಲಿ ಎಂಬ ಉದ್ದೇಶದಿಂದ ಸರ್ಕಾರ ಕಾರ್ಯಕರ್ತರಿಗೆ ಉಚಿತ ಸ್ಮಾಟ್ ಫೋನ್ ವಿತರಿಸುತ್ತಿದೆ ಎಂದರು. ಪೋಷಣ್ ಅಭಿಯಾನದ ಮೂಲಕ ಮಕ್ಕಳ ಆರೋಗ್ಯ, ಆಹಾರದ ವರದಿ, ಮಕ್ಕಳ ಹಾಗೂ ಗರ್ಭಿಣಿಯರ ಮಾಹಿತಿಯನ್ನು ತಂತ್ರಾಂಶದಲ್ಲಿ ದಾಖಲಿಸಲು ಹಾಗೂ ಕಾರ್ಯಕರ್ತೆಯರ ಚಟುವಟಿಕೆಗಳನ್ನು ಚುರುಕುಗೊಳಿಸಲು ಈ ಸ್ಮಾಟ್ ಫೋನ್ ಸಹಕಾರಿಯಾಗಲಿದೆ. ಆದ್ದರಿಂದ ಪ್ರತಿಯೊಬ್ಬರೂ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.

Share This Article

ಹದ್ದಿನ ಕಣ್ಣಿನಂಥ ದೃಷ್ಟಿ ನಿಮ್ಮದಾಗಬೇಕಾ? ಇವು ನಿಮ್ಮ ಆಹಾರದಲ್ಲಿ ಇವೆಯೇ? ಚೆಕ್​ ಮಾಡಿಕೊಳ್ಳಿ

ಬೆಂಗಳೂರು: ಮಾನವನ ಅಂಗಾಂಗಗಳಲ್ಲಿ ಎಲ್ಲವೂ ಮುಖ್ಯವೇ ಆದರೂ ಕಣ್ಣುಗಳು ಪ್ರಮುಖ ಸ್ಥಾನ ಪಡೆದುಕೊಂಡಿವೆ. ಹೀಗಾಗಿಯೇ ಕಣ್ಣುಗಳು…

ಇವುಗಳನ್ನು ತಲೆದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿದ್ರೆ ಸಾಕು! ಚೆನ್ನಾಗಿ ನಿದ್ದೆ ಜತೆ, ಶ್ರೀಮಂತರಾಗೋದು ಪಕ್ಕಾ!

ಬೆಂಗಳೂರು: ತುರ್ತು ಸಂದರ್ಭಗಳಲ್ಲಿ ಹಣ ಅಥವಾ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.  ಈಗ ಹೇಳಿರುವ ಸರಳ ಪರಿಹಾರಗಳನ್ನು…

ಮನೆಯಲ್ಲಿ ಗುಲಾಬಿ ಗಿಡ ಬೆಳೆಸುತ್ತಿದ್ದೀರಾ? ಈ ವಾಸ್ತು ನಿಯಮಗಳು ಕಡ್ಡಾಯ!

ಬೆಂಗಳೂರು: ಸಾಮಾನ್ಯವಾಗಿ ನಮ್ಮ ಹಿತ್ತಲಿನಲ್ಲಿ ಹಲವು ಬಗೆಯ ಗಿಡಗಳನ್ನು ಬೆಳೆಸುತ್ತೇವೆ. ಗುಲಾಬಿ ಗಿಡಗಳನ್ನು ಇಷ್ಟಪಡದವರೇ ಇಲ್ಲ.…