More

  ಹೊಸ ಟ್ರಾನ್ಸ್‌ಫಾರ್ಮರ್ ಕಂಬ ಅಳವಡಿಕೆ

  ಹನೂರು; ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದಲ್ಲಿ ಶಿಥಿಲಗೊಂಡಿದ್ದ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಕಂಬವನ್ನು ಸೋಮವಾರ ಸೆಸ್ಕ್ ಇಲಾಖೆಯ ಸಿಬ್ಬಂದಿ ತೆರವುಗೊಳಿಸಿ ಹೊಸ ಕಂಬ ಅಳವಡಿಸಿದರು.

  ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಂಭಾಗದಲ್ಲಿ 11 ಕೆ.ವಿ.ಸಾಮರ್ಥ್ಯದ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಕಂಬವಿದ್ದು, ಕಳೆದ 2 ವರ್ಷದಿಂದ ಶಿಥಿಲಗೊಂಡಿತ್ತು. ಇದರಿಂದ ಶಾಲೆಯ ಮಕ್ಕಳು ಸಂಚರಿಸಲು ಭಯ ಪಡುವ ಸ್ಥಿತಿ ಎದುರಾಗಿದ್ದು, ಪಾಲಕರಲ್ಲಿ ಆತಂಕ ಮನೆ ಮಾಡಿತ್ತು. ವಿದ್ಯುತ್ ಕಂಬವನ್ನು ತೆರವುಗೊಳಿಸಿ ಬೇರೆಡೆ ಹೊಸ ಕಂಬವನ್ನು ಅಳವಡಿಸುವಂತೆ ಗ್ರಾಮಸ್ಥರು ಗ್ರಾಪಂ ಹಾಗೂ ಸೆಸ್ಕ್ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ಡಿ.8ರಂದು ವಿಜಯವಾಣಿಯಲ್ಲಿ ವರದಿ ಪ್ರಕಟವಾಗಿತ್ತು. ಸೋಮವಾರ ಸೆಸ್ಕ್ ಇಲಾಖೆಯ ಅಧಿಕಾರಿಗಳು ಕಂಬವನ್ನು ತೆರೆವುಗೊಳಿಸಿ ಹೊಸ ಕಂಬವನ್ನು ಅಳವಡಿಸಿದ್ದಾರೆ. ಇದರಿಂದ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟರು.

  See also  ಅನುದಾನ ದುರ್ಬಳಕೆಗೆ ವಿ.ಮುತ್ತಯ್ಯ ಖಂಡನೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts