More

    ನಿರ್ಭಯವಾಗಿ ಮತ ಚಲಾಯಿಸಲು ಅರಿವು ಮೂಡಿಸಿ

    ಹನೂರು: ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೆ ನಿಷ್ಪಕ್ಷಪಾತ ಹಾಗೂ ನಿರ್ಭಯವಾಗಿ ಮತ ಚಲಾಯಿಸುವಂತೆ ಮತದಾರರಲ್ಲಿ ಅರಿವು ಮೂಡಿಸಬೇಕು ಎಂದು ಚುನಾವಣೆ ನೋಡಲ್ ಅಧಿಕಾರಿ ಹಾಗೂ ತಾಲೂಕು ಪಂಚಾಯಿತಿ ಇಒ ಉಮೇಶ್ ಸೂಚನೆ ನೀಡಿದರು.

    ಪಟ್ಟಣ ಸಮೀಪದ ಶ್ರೀ ಕಣಿವೆ ಆಂಜನೇಯಸ್ವಾಮಿ ದೇಗುಲದ ಬಳಿ ಶುಕ್ರವಾರ ತಾಲೂಕು ಪಂಚಾಯಿತಿ ಹಾಗೂ ಸ್ವೀಪ್ ಸಮಿತಿ ವತಿಯಿಂದ ಮತದಾರರಲ್ಲಿ ಜಾಗೃತಿ ಮೂಡಿಸುವ ಸಂಬಂಧ ವಿಶೇಷವಾಗಿ ಆಯೋಜಿಸಿದ್ದ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ಮತದಾನ ಪ್ರಮುಖ ಅಸ್ತ್ರ. ಹಾಗೆಯೇ ಪ್ರತಿಯೊಬ್ಬ ಪ್ರಜೆಯ ಹಕ್ಕು. ಇದರ ಆಧಾರದ ಮೇಲೆ ಸರ್ಕಾರ ಆಡಳಿತ ನಡೆಸುತ್ತಿದೆ. ಆದ್ದರಿಂದ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬ ಮತದಾರ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕು ಚಲಾಯಿಸುವಂತೆ ಸ್ವೀಪ್ ಕಾರ್ಯಕ್ರಮದ ಮೂಲಕ ಗ್ರಾಮಗಳ ಜನರಲ್ಲಿ ಅರಿವು ಮೂಡಿಸಬೇಕು. ಯಾವುದೇ ಕಾರಣಕ್ಕೂ ಮತದಾನದಿಂದ ದೂರ ಉಳಿಯದಂತೆ ಮತದಾನದ ಮಹತ್ವ ತಿಳಿಸಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಸ್ವೀಪ್ ಸಿಬ್ಬಂದಿಗೆ ಸೂಚಿಸಿದರು.

    ಸ್ವಚ್ಛತಾ ಕಾರ್ಯ:
    ಮಹದೇಶ್ವರಬೆಟ್ಟದಲ್ಲಿ 5 ದಿನಗಳ ಕಾಲ ಜರುಗಿದ ಮಹಾಶಿವರಾತ್ರಿ ಜಾತ್ರೆಗೆ ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಭಕ್ತರು ಕಾಲ್ನಡಿಗೆಯಲ್ಲಿ ಆಗಮಿಸಿದ್ದು, ಈ ವೇಳೆ ಪ್ಲಾಸ್ಟಿಕ್ ವಸ್ತುಗಳನ್ನು ರಸ್ತೆ ಬದಿ ಬಿಸಾಡಿದ್ದರು. ಈ ಹಿನ್ನೆಲೆಯಲ್ಲಿ ತಾಲೂಕು ಪಂಚಾಯಿತಿ ಹಾಗೂ ಸ್ವೀಪ್ ಸಮಿತಿ ಅಧಿಕಾರಿಗಳು, ನೌಕರರಿಂದ ಶ್ರೀಕಣಿವೆ ಆಂಜನೇಯಸ್ವಾಮಿ ದೇಗುಲದಿಂದ 25 ಕಿ.ಮೀ ಅಂತರದ ತಾಳುಬೆಟ್ಟದವರೆಗೆ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು. ಈ ವೇಳೆ ಮಾರ್ಗಮಧ್ಯದಲ್ಲಿನ ಗ್ರಾಮಗಳಲ್ಲಿ ಮತದಾನದ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಯಿತು. ಸ್ವಚ್ಛತಾ ಕಾರ್ಯದಲ್ಲಿ ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ನೌಕರರು ಸೇರಿದಂತೆ ಸುಮಾರು 250ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ತಾಪಂ ಸಹಾಯಕ ನಿರ್ದೇಶಕ ರವೀಂದ್ರ ಅವರು ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು. ತಾಪಂ ವ್ಯವಸ್ಥಾಪಕ ರಮೇಶ್, ಪಿಡಿಒಗಳಾದ ಸುರೇಶ್, ಮಾದೇಶ್, ನಂಜುಂಡಸ್ವಾಮಿ, ನಂದೀಶ್, ರಾಮು, ದೊರೆಯ, ಸಿದ್ದಪ್ಪ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts