More

    ಬೂದುಬಾಳು ಗ್ರಾಮದಲ್ಲಿ ವೆಂಕಟರಮಣಸ್ವಾಮಿ ಜಾತ್ರೆ

    ಹನೂರು: ಸಮೀಪದ ಬೂದುಬಾಳು ಗ್ರಾಮದ ಶ್ರೀ ಗುಡಿಹಟ್ಟಿ ವೆಂಕಟರಮಣಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಮಂಗಳವಾರ ರಾತ್ರಿ ಪಲ್ಲಕ್ಕಿ ಉತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.

    ಉತ್ಸವದ ಹಿನ್ನೆಲೆಯಲ್ಲಿ ರಾತ್ರಿ ದೇಗುಲದಲ್ಲಿ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ದೇಗುಲದ ಮುಂಭಾಗದಲ್ಲಿ ವಿವಿಧ ಪುಷ್ಪ ಹಾಗೂ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುವಂತೆ ಸಿಂಗರಿಸಿದ್ದ ಪಲ್ಲಕ್ಕಿಯಲ್ಲಿ ಸ್ವಾಮಿಯ ಮೂರ್ತಿ ಕೂರಿಸಲಾಯಿತು. ದೇಗುಲದ ಧರ್ಮಾಧಿಕಾರಿ ನೇತೃತ್ವ, ಭಕ್ತರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ರಾತ್ರಿ 10ಕ್ಕೆ ಉತ್ಸವಕ್ಕೆ ಚಾಲನೆ ನೀಡಲಾಯಿತು. ಗ್ರಾಮದ ಪ್ರಮುಖ ರಸ್ತೆ ಸೇರಿದಂತೆ ಪ್ರಾಥಮಿಕ ಶಾಲೆ, ಕೆರೆ ಏರಿಯ ಮೂಲಕ ಛತ್ರಿ ಚಾಮರ ಹಾಗೂ ಮಂಗಳ ವಾದ್ಯದೊಂದಿಗೆ ಮೆರವಣಿಗೆ ಹೊರಟು, ಹೊರವಲಯದಲ್ಲಿರುವ ದೇವರಗುಡಿಯ ಮಂಟಪದವರೆಗೂ ಉತ್ಸವ ನೆರವೇರಿಸಲಾಯಿತು. ಬಳಿಕ ಮಂಟಪದಲ್ಲಿ ಸ್ವಾಮಿಯ ಮೂರ್ತಿಯನ್ನು ಕೂರಿಸಿ ಸಾಂಪ್ರದಾಯಿಕವಾಗಿ ಪೂಜಾ ಕೈಂಕರ್ಯ ನೆರವೇರಿಸಲಾಯಿತು. ಬಳಿಕ ಉತ್ಸವ ಮೂರ್ತಿಯನ್ನು ದೇಗುಲಕ್ಕೆ ಕರೆ ತರಲಾಯಿತು.

    ಮೆರವಣಿಗೆಯಲ್ಲಿ ದಾರಿಯುದ್ದಕ್ಕೂ ತಮಟೆಯ ತಾಳಕ್ಕೆ ಯುವಕರು ಕುಣಿದು ಕುಪ್ಪಳಿಸಿದರಲ್ಲದೆ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಭಕ್ತರು ವೆಂಕಟರಮಣಸ್ವಾಮಿ ಗೋವಿಂದ… ಗೋವಿಂದಾ…ಎಂಬ ಜಯಘೋಷಗಳನ್ನು ಮೊಳಗಿಸುವುದರ ಮೂಲಕ ಸ್ವಾಮಿಯ ಕೃಪೆಗೆ ಪಾತ್ರರಾದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts