More

    ಮತದಾನ ಬಹಿಷ್ಕಾರ ನಿರ್ಧಾರದಿಂದ ಹಿಂದೆ ಸರಿಯಲ್ಲ

    ಹನೂರು: ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಭೇಟಿ ನೀಡಿ ಅಗತ್ಯ ಭರವಸೆ ನೀಡಿದರೂ ಮಹದೇಶ್ವರ ಬೆಟ್ಟದ ತಪ್ಪಲಿನ ತೊಳಸಿಕೆರೆ ಗ್ರಾಮಸ್ಥರು ಅಗತ್ಯ ಮೂಲಸೌಕರ್ಯ ಒದಗಿಸದ ಪರಿಣಾಮ ಲೋಕಸಭೆ ಚುನಾವಣೆಯ ಮತದಾನ ಬಹಿಷ್ಕರಿಸುವುದಾಗಿ ದೃಢ ನಿರ್ಧಾರ ಕೈಗೊಂಡಿದ್ದಾರೆ.

    ಮ.ಬೆಟ್ಟದ ತಪ್ಪಲಿನ ತೊಳಸಿಕೆರೆ, ಇಂಡಿಗನತ್ತ, ಮೆದಗಾಣೆ, ಮೆಂದಾರೆ ಸೇರಿದಂತೆ ಈ ಭಾಗದ ಇನ್ನಿತರ ಕಾಡಂಚಿನ ಜನರು ರಸ್ತೆ ನಿರ್ಮಾಣ, ವಿದ್ಯುತ್, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲ ಸೌಕರ್ಯ ಒದಗಿಸುವಂತೆ ಆಯಾ ಗ್ರಾಮಗಳಲ್ಲಿ ಕಳೆದ ವಾರದಿಂದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಲೋಕಸಭೆ ಚುನಾವಣೆ ಮತದಾನ ಬಹಿಷ್ಕರಿಸುವುದಾಗಿ ಮ.ಬೆಟ್ಟದಲ್ಲಿ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಇಂಡಿಗನತ್ತ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮಸ್ಥರ ಸಮಸ್ಯೆ ಆಲಿಸಿ ಅಗತ್ಯ ಭರವಸೆ ನೀಡಿದ್ದರು.

    ಆದರೆ ಈ ಹಿಂದೆ ವಿಧಾನಸಭಾ ಚುನಾವಣೆ ಮತದಾನ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದ ವೇಳೆ ಅಧಿಕಾರಿಗಳು ನೀಡಿದ್ದ ಭರವಸೆ ಇಂದಿಗೂ ಈಡೇರಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನೀಡಿದ ಭರವಸೆಯ ಮೇಲೆ ನಂಬಿಕೆ ಇಲ್ಲದ ತೊಳಸಿಕೆರೆ ಗ್ರಾಮಸ್ಥರು, ಬುಧವಾರ ಒಂದೆಡೆ ಸೇರಿ ಲೋಕಸಭೆಗೂ ಮುನ್ನ ರಸ್ತೆ, ವಿದ್ಯುತ್ ಹಾಗೂ ಕುಡಿಯುವ ನೀರು ಒದಗಿಸಬೇಕು. ಇಲ್ಲವಾದಲ್ಲಿ ಯಾವುದೇ ಕಾರಣಕ್ಕೂ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸುವುದಿಲ್ಲ ಎಂದು ನಿರ್ಧರಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts