More

    ಶಿವಕುಮಾರ ಶ್ರೀಗಳ 117ನೇ ಜಯಂತಿ ಆಚರಣೆ

    ಹನೂರು: ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಸೋಮವಾರ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ವತಿಯಿಂದ ಶ್ರೀ ಶಿವಕುಮಾರ ಸ್ವಾಮೀಜಿ ಅವರ 117ನೇ ಜಯಂತ್ಯುತ್ಸವವನ್ನು ಆಚರಿಸಲಾಯಿತು.

    ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ಕಣ್ಣೂರು ಬಸವರಾಜಪ್ಪ ಮಾತನಾಡಿ, ಶ್ರೀ ಶಿವಕುಮಾರ ಸ್ವಾಮೀಜಿ ಅವರು ಶಿಕ್ಷಣ ಸಂಸ್ಥೆಯನ್ನು ತೆರೆದು ಯಾವುದೇ ಜಾತಿ ಭೇದವಿಲ್ಲದೆ ಎಲ್ಲ ಮಕ್ಕಳಿಗೂ ಶಿಕ್ಷಣ ನೀಡುವುದರ ಜತೆಗೆ ತ್ರಿವಿಧ ದಾಸೋಹಕ್ಕೆ ಹೆಚ್ಚಿನ ಒತ್ತನ್ನು ನೀಡಿದ್ದರು. 12ನೇ ಶತಮಾನದ ಬಸವಾದಿ ಶರಣರ ತತ್ವಾದರ್ಶಗಳೇ ಅವರಿಗೆ ಉಸಿರಾಗಿತ್ತು. ಈ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದ್ದು, ನಡೆದಾಡುವ ದೇವರು ಎಂದೇ ಪ್ರಸಿದ್ಧರಾಗಿದ್ದರು. ಹಾಗಾಗಿ ಇವರ ಆದರ್ಶಗಳು ಎಲ್ಲರಿಗೂ ಸ್ಫೂರ್ತಿದಾಯಕ ಎಂದು ತಿಳಿಸಿದರು. ಮಹಾಸಭಾದ ಜಿಲ್ಲಾ ಕಾರ್ಯದರ್ಶಿ ಆನಾಪುರ ಉಮೇಶ್, ಮುಖಂಡರಾದ ಮುರುಡೇಶ್ವರಸ್ವಾಮಿ, ಕಣ್ಣೂರು ನಾಗೇಂದ್ರ, ಸಿದ್ದಪ್ಪ, ಲೋಕೇಶ್, ಜಗದೀಶ್, ಕುಮಾರ್, ಜಡೇಸ್ವಾಮಿ, ಶಾಂತಮೂರ್ತಿ ಹಾಗೂ ಇನ್ನಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts