More

    ಗುಡ್ಡಕ್ಕೆ ಕಾರು ಡಿಕ್ಕಿಯಾಗಿ ಒಬ್ಬರಿಗೆ ಗಾಯ

    ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟ, ತಾಳುಬೆಟ್ಟ ಮಾರ್ಗಮಧ್ಯೆ ಪೊನ್ನಾಚಿ ಕ್ರಾಸ್ ಸಮೀಪ ಗುರುವಾರ ಚಾಲಕ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿಯಾಗಿ ಒಬ್ಬರು ಗಾಯಗೊಂಡಿದ್ದಾರೆ.

    ಬೆಂಗಳೂರು ಮೂಲದ ಮೂವರು ಮ.ಬೆಟ್ಟಕ್ಕೆ ತೆರಳಿ ಪೂಜೆ ಮುಗಿಸಿಕೊಂಡು ಮಧ್ಯಾಹ್ನ ಸುಮಾರು 1 ಗಂಟೆಯಲ್ಲಿ ಕಾರಿನಲ್ಲಿ ಊರಿಗೆ ತೆರಳುತ್ತಿದ್ದರು. ಈ ವೇಳೆ ಪೊನ್ನಾಚಿ ಕ್ರಾಸ್ ಬಳಿ ಚಾಲಕ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ಒಬ್ಬ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಮ.ಬೆಟ್ಟದ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts