More

    ಮತಗಟ್ಟೆ ಧ್ವಂಸ ಪ್ರಕರಣದ ಮತ್ತೊಬ್ಬ ಆರೋಪಿ ಬಂಧನ

    ಹನೂರು: ತಾಲೂಕಿನ ಇಂಡಿಗನತ್ತ ಮತಗಟ್ಟೆ ಧ್ವಂಸ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೊಬ್ಬ ವ್ಯಕ್ತಿಯನ್ನು ಮಲೆಮಹದೇಶ್ವರ ಬೆಟ್ಟದ ಪೊಲೀಸರು ಗುರುವಾರ ಬಂಧಿಸಿದ್ದಾರೆ.

    ಇಂಡಿಗನತ್ತ ಗ್ರಾಮದ ವೀರಣ್ಣ (29) ಬಂಧಿತ ಆರೋಪಿ. ಗ್ರಾಮದಲ್ಲಿ ನಡೆದ ಮತಗಟ್ಟೆ ಧ್ವಂಸ ಪ್ರಕರಣದಲ್ಲಿ 3 ಪ್ರತ್ಯೇಕ ದೂರು ದಾಖಲಾಗಿದ್ದು, ಪೊಲೀಸರು ಬಂಧಿಸಿದ್ದ 46 ಜನರು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಆದರೆ ಘಟನೆಯಲ್ಲಿ ಭಾಗಿಯಾಗಿ ದೂರು ದಾಖಲಾಗಿದ್ದ ಇನ್ನು 6 ಮಂದಿ ಗ್ರಾಮವನ್ನೇ ತೊರೆದು ತಲೆಮರೆಸಿಕೊಂಡಿದ್ದರು. ಇವರ ಬಂಧನಕ್ಕಾಗಿ ಪೊಲೀಸರು ನಿಗಾ ವಹಿಸಿದ್ದರು.

    ವೀರಣ್ಣ ಅವರು ಗ್ರಾಮಕ್ಕೆ ಆಗಮಿಸಿದ ಖಚಿತ ಮಾಹಿತಿ ಮೇರೆಗೆ ಇನ್ಸ್‌ಪೆಕ್ಟರ್ ಜಗದೀಶ್ ಅವರು ಡಿವೈಎಸ್ಪಿ ಅವರ ಮಾರ್ಗದರ್ಶನದಲ್ಲಿ ಮಧ್ಯಾಹ್ನ 3 ಗಂಟೆಯಲ್ಲಿ ಗ್ರಾಮಕ್ಕೆ ತೆರಳಿ ಬಂಧಿಸಿ, ವಿಚಾರಣೆಗೊಳಪಿಸಿದ ಬಳಿಕ ನ್ಯಾಯಾಂಗ ಬಂಧನಕ್ಕೆ ನೀಡಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts