More

    ಸಂತ ಸೇವಾಲಾಲ್ರ ಜಯಂತ್ಯುತ್ಸವ

    ಚಾಮರಾಜನಗರ: ತಾಲೂಕಿನ ಕೋಳಿಪಾಳ್ಯ ಗ್ರಾಮದಲ್ಲಿ ಬುಡಕಟ್ಟು ಲಂಬಾಣಿ ಸಮುದಾಯದಿಂದ ಸಂತ ಸೇವಾಲಾಲ್ ಮಹಾರಾಜರ 281ನೇ ಜಯಂತ್ಯುತ್ಸವವನ್ನು ಆಚರಿಸಲಾಯಿತು.

    ಗ್ರಾಮದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು. ಬಳಿಕ ಸೇವಾಲಾಲ್ರ ಭಾವಚಿತ್ರವನ್ನು ಹೂಗಳಿಂದ ಶೃಂಗರಿಸಿ ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.

    ಮಹಾರಾಷ್ಟ್ರದ ಅಂತಾರಾಷ್ಟ್ರೀಯ ಗೋರ್ ಸೀಕ್‌ವಾಡಿ ಭೋದಕರಾದ ಅರುಣ್ ದಿಗಂಬರ್ ಚೌಹಾಣ್ ಮಾತನಾಡಿ, ಸಂತ ಸೇವಾಲಾಲ್ ಮಹಾರಾಜರು ಜನಾಂಗದ ಏಳಿಗೆಗಾಗಿ ಶ್ರಮಿಸಿದ್ದಾರೆ. ಶೈಕ್ಷಣಿಕವಾಗಿ ಮುಂದುವರಿಯಲು ಶ್ರಮಿಸಿದ್ದಾರೆ. ಇವರ ಜಯಂತಿಯನ್ನು ಈ ಬಾರಿ ಗಡಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಆಚರಿಸಲಾಗುತ್ತಿದ್ದು, ಮುಂದಿನ ವರ್ಷ ಜಿಲ್ಲಾ ಕೇಂದ್ರದಲ್ಲಿ ಆಚರಿಸಲಾಗುತ್ತದೆ. ಇವರ ಆದರ್ಶಗಳನ್ನು ಪಾಲಿಸುವುದರ ಜೊತೆಗೆ ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆದುಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಮನವಿ ಮಾಡಿದರು.

    ಬುಡಕಟ್ಟು ಜನಾಂಗದ ಮುಖಂಡರು, ಯಜಮಾನರು, ಪುರುಷರು, ಮಹಿಳೆಯರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts