ನಟ ಧನುಷ್​ ಅಭಿಮಾನಿಗಳಿಗೆ ಇಲ್ಲಿದೆ ಸಂತಸದ ಸುದ್ದಿ!

dhanush
Published on

ಆಂಧ್ರಪ್ರದೇಶ: ಟಾಲಿವುಡ್ ಸ್ಟಾರ್ ನಟ ಧನುಷ್ (Actor Dhanush) ಅಭಿನಯದ ಕ್ಯಾಪ್ಟನ್ ಮಿಲ್ಲರ್ (Captain Miller) ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಮತ್ತು ಟೀಸರ್ ಯಾವಾಗ? ಎಂದು ಪ್ರಶ್ನಿಸುತ್ತಿದ್ದ ಅಭಿಮಾನಿಗಳಿಗೆ​​ ಇದೀಗ ಚಿತ್ರತಂಡ ಅಧಿಕೃತ ಮಾಹಿತಿಯನ್ನು ಪ್ರಕಟಿಸಿದೆ.

ಧನುಷ್ ಅವರು ಪ್ರಮುಖ ಪಾತ್ರದಲ್ಲಿ ನಟಿಸಿರುವ ಕ್ಯಾಪ್ಟನ್ ಮಿಲ್ಲರ್ ಚಿತ್ರ ಆಕ್ಷನ್-ಡ್ರಾಮಾ ಚಿತ್ರವಾಗಿದ್ದು, ಈ ಚಿತ್ರದ ಬಗ್ಗೆ ಇಲ್ಲಿಯವರೆಗೂ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳದ ಚಿತ್ರತಂಡ ಇದೀಗ ಚಿತ್ರದ ಫಸ್ಟ್ ಲುಕ್ ಪೋಸ್ಟರ್ (First Look Poster) ಅನ್ನು ಇದೇ ಜೂನ್ 30 ರಂದು ಬಿಡುಗಡೆಗೊಳಿಸಲಿದ್ದೇವೆ ಎಂದು ಮಾಹಿತಿ ನೀಡಿದೆ.

ವರದಿಗಳ ಪ್ರಕಾರ ಜುಲೈನಲ್ಲಿ ಟೀಸರ್ ಅನ್ನು ಬಿಡುಗಡೆಗೊಳಿಸಲು ಚಿತ್ರತಂಡ ಚಿಂತಿಸಿದೆ ಎನ್ನಲಾಗಿದೆ. ಅರುಣ್ ಮಾಥೇಶ್ವರನ್ ನಿರ್ದೇಶನದ ಈ ಚಿತ್ರದಲ್ಲಿ ಶಿವರಾಜ್‌ಕುಮಾರ್, ಸಂದೀಪ್ ಕಿಶನ್, ಪ್ರಿಯಾಂಕಾ ಮೋಹನ್, ನಿವೇದಿತಾ ಸತೀಶ್ ಮತ್ತು ಆರ್‌ಆರ್‌ಆರ್ ಖ್ಯಾತಿಯ ಎಡ್ವರ್ಡ್ ಸೋನೆನ್‌ಬ್ಲಿಕ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net