More

    ಸರ್ಕಾರದ ನಿರ್ಧಾರಕ್ಕೆ ಸಂತಸ

    ಸಕಲೇಶಪುರ: ಜಗಜ್ಯೋತಿ ಬಸವಣ್ಣ ಅವರನ್ನು ಸರ್ಕಾರ ಸಾಂಸ್ಕೃತಿಕ ರಾಯಭಾರಿಯನ್ನಾಗಿ ಘೋಷಿಸಿರುವುದಕ್ಕೆ ಮಲೆನಾಡು ವೀರಶೈವ ಸಮಾಜದ ಅಧ್ಯಕ್ಷ ಎಚ್.ಎನ್.ದೇವರಾಜ್ ಸಂತಸ ವ್ಯಕ್ತಪಡಿಸಿದರು.

    ಬಸವಣ್ಣನವರು 12ನೇ ಶತಮಾನದಲ್ಲೇ ಸಮ ಸಮಾಜದ ಕನಸು ಕಂಡು, ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಪರಿಕಲ್ಪನೆ ಹುಟ್ಟುಹಾಕಿದ್ದರು. ಇವರ ತತ್ವ, ಸಿದ್ಧಾಂತಗಳು ಇಂದಿಗೂ ಅನ್ವಯವಾಗುತ್ತಿದೆ. ಇಂತಹ ಮಹನೀಯರ ಭಾವಚಿತ್ರವನ್ನು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಹಾಕುವಂತೆ ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಘೋಷಿಸಿದ್ದರು. ಮತ್ತೊಮ್ಮೆ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಅವರು ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಬಸವಣ್ಣ ಅವರನ್ನು ಸಾಂಸ್ಕೃತಿಕ ರಾಯಭಾರಿಯನ್ನಾಗಿ ಘೋಷಿಸಿದ್ದಾರೆ. ಇದು ವೀರಶೈವ-ಲಿಂಗಾಯತ ಸಮಾಜ ಸಂತಸಗೊಳ್ಳುವಂತೆ ಮಾಡಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

    ಮಲೆನಾಡು ವೀರಶೈವ ಸಮಾಜದ ಕಾರ್ಯದರ್ಶಿ ಮೂಗಲಿ ಧರ್ಮರಾಜ್, ಮುಖಂಡರಾದ ಯಡೇಹಳ್ಳಿ ಆರ್.ಮಂಜುನಾಥ್, ಬ್ಯಾಕರವಳ್ಳಿ ವಿಜಯಕುಮಾರ್, ಹೆಬ್ಬಸಾಲೆ ಶಂಭುಲಿಂಗಪ್ಪ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts