More

    ಹಿರೇಕೆರಿ ಅಭಿವೃದ್ಧಿಗೆ ಕ್ರಿಯಾಯೋಜನೆ – ಶಾಸಕ ಜಿ.ಕರುಣಾಕರರೆಡ್ಡಿ ಮಾಹಿತಿ

    ಹರಪನಹಳ್ಳಿ: ಪಟ್ಟಣದ ಹಿರೇಕೆರಿಯನ್ನು ಮಾದರಿಯಾಗಿ ಅಭಿವೃದ್ಧಿಗೊಳಿಸಲು ಈಗಾಗಲೇ ಕ್ರಿಯಾಯೋಜನೆ ತಯಾರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕ ಜಿ.ಕರುಣಾಕರರೆಡ್ಡಿ ಹೇಳಿದರು.

    ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದರು. ಕೆರೆಗಳಿಗೆ ನೀರು ತುಂಬಿಸುವ ಕುರಿತು ಕೆಲಸ ಪ್ರಗತಿಯಲ್ಲಿದೆ. ಕೆಲವು ಭಾಗದ ರೈತರಿಂದ ಸಮಸ್ಯೆಯಾಗಿದ್ದು, ಆದಷ್ಟು ಬೇಗ ಸಮಸ್ಯೆ ಬಗೆಹರಿಸಿ ಕಾಮಗಾರಿ ಪೂರ್ಣಗೊಳಿಸಲಾಗುವುದು. ಸಚಿವನಾಗಿದ್ದಾಗ ತಾಲೂಕಿನ 60 ಕೆರೆಗಳಿಗೆ ನೀರು ತುಂಬಿಸುವ ಬಗ್ಗೆ ಪ್ರಸ್ತಾವನೆ ಕಳಿಸಲಾಗಿತ್ತು. ಆದರೆ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ತಾಲೂಕಿನ 50 ಕೆರೆಗಳಿಗೆ ಮಾತ್ರ ಸೀಮಿತಗೊಳಿಸಿ, 10 ಕೆರೆಗಳನ್ನು ಕೈಬಿಡಲಾಗಿತ್ತು. ಈ ಬಗ್ಗೆ ಕೆಲವು ರೈತರು ತಮ್ಮ ಕೆರೆಗಳಿಗೂ ನೀರು ತುಂಬಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಉಳಿದ 10 ಕೆರೆಗಳಿಗೆ ನೀರು ತುಂಬಿಸಲು ಕ್ರಮವಹಿಸಲಾಗುವುದು. ಹರಪನಹಳ್ಳಿ ಪಟ್ಟಣದಲ್ಲಿ 2ನೇ ಹಂತದ ಕುಡಿಯುವ ನೀರಿನ ಯೋಜನೆ ಅನುಷ್ಟಾನಗೊಳಿಸಲು ಹಿರೇಕೆರಿಯಲ್ಲಿ ನದಿ ನೀರು ಸಂಗ್ರಹಿಸಿ ಕ್ರಮವಹಿಸಲು ಚಿಂತನೆ ಮಾಡಲಾಗುವುದು ಎಂದರು.

    ರಾಗಿ ಖರೀದಿ ಕೇಂದ್ರ ಆರಂಭಿಸುವಂತೆ ಸಾಕಷ್ಟು ರೈತರಿಂದ ಬೇಡಿಕೆ ಇದ್ದು, ಈಗಾಗಲೇ ಖರೀದಿ ಕೇಂದ್ರ ಆರಂಭ ಮಾಡಲು ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳ ಬಳಿ ಮಾತನಾಡಿದು,್ದ ಕೂಡಲೇ ಆರಂಭ ಮಾಡಲಾಗುವುದು ಎಂದರು.

    ಬಿಜೆಪಿ ಮಂಡಲ ಅಧ್ಯಕ್ಷ ಸತ್ತೂರು ಹಾಲೇಶ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಬಾಗಳಿ ಕೊಟ್ರೇಶಪ್ಪ, ತಾಂಡಾ ಅಭಿವೃದ್ಧಿ ನಿಗಮ ನಿರ್ದೇಶಕ ಎಸ್.ಪಿ.ಲಿಂಬ್ಯನಾಯ್ಕ, ಮುಖಂಡರಾದ ಎಂ.ಪಿ.ನಾಯ್ಕ, ಸಣ್ಣ ಹಾಲಪ್ಪ, ಆರ್.ಲೋಕೇಶ್, ಮಲ್ಲೇಶ್, ಭಂಗಿ ಚಂದ್ರಪ್ಪ, ಯುಪಿ ನಾಗರಾಜ, ರಾಘವೇಂದ್ರಶೆಟ್ಟಿ, ಮಂಜು ನಾಯ್ಕ, ಡಿವೈಎಸ್‌ಪಿ ಹಾಲಮೂರ್ತಿರಾವ್, ಅರುಣಕುಮಾರ, ಮಂಜುಳಾ, ಅಭಿವೃದ್ಧಿ ನಿಗಮದ ಅಧಿಕಾರಿಗಳಿದ್ದರು.

    ಬೋರ್‌ವೆಲ್ ಪಂಪ್, ಮೋಟರ್ ವಿತರಣೆ: ಹರಪನಹಳ್ಳಿಯ ಬಾಬು ಜಗಜೀವನರಾಮ್ ಭವನದಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಹಾಗೂ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮಗಳಿಂದ ಆಯ್ಕೆಯಾದ 31 ಫಲಾನುಭವಿಗಳಿಗೆ ಕೊಳವೆಬಾವಿ ಪಂಪ್, ಮೋಟರ್ ಸೇರಿ ಇತರೆ ಪೂರಕ ಸಾಮಗ್ರಿಗಳನ್ನು ಶಾಸಕ ಜಿ.ಕರುಣಾಕರರೆಡ್ಡಿ ವಿತರಿಸಿದರು.

    ಸಂಪುಟ ವಿಸ್ತರಣೆ ಅಥವಾ ಮರು ರಚನೆ ಸಂದರ್ಭ ನಾನು ಒಬ್ಬ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಆ ನಿಟ್ಟಿನಲ್ಲಿ ನನ್ನ ಪ್ರಯತ್ನವಿದೆ. ಪಂಚ ರಾಜ್ಯಗಳ ಚುನಾವಣೆ ಮುಗಿದ ನಂತರ ಸಚಿವ ಸಂಪುಟ ವಿಸ್ತರಣೆಯಾಗಬಹುದು.
    | ಜಿ.ಕರುಣಾಕರರೆಡ್ಡಿ, ಹರಪನಹಳ್ಳಿ ಶಾಸಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts