More

    ಮಹಿಳೆಯರಿಗೆ ಕಿರುಕುಳ ನೀಡಿದರೆ ಕಾನೂನು ಕ್ರಮ

    ಹರಪನಹಳ್ಳಿ: ಮಹಿಳೆಯರು ಅಕ್ಷರವಂತರಾದರೆ ಆರ್ಥಿಕವಾಗಿ ಸಬಲರಾಗಲು ಸಾಧ್ಯ ಎಂದು ಹಲುವಾಗಲು ಠಾಣೆ ಪಿಎಸ್‌ಐ ನಾಗರತ್ನಾ ಹೇಳಿದರು.

    ತಾಲೂಕಿನ ತೆಲಿಗಿ ಗ್ರಾಮದ ಜಡೇಸ್ವಾಮಿಗಳ ಮಠದ ಆವರಣದಲ್ಲಿ ಶನಿವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಏರ್ಪಡಿಸಿದ್ದ ಮಹಿಳಾ ಜ್ಞಾನ ವಿಕಾಸ ಮತ್ತು ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯಲ್ಲಿ ಮಾತನಾಡಿದರು.

    ಕೌಟುಂಬಿಕ ದೌರ್ಜನ್ಯ, ಮಹಿಳೆಯರ ಮೇಲೆ ಅನುಮಾನಪಟ್ಟು ಮಾನಸಿಕ ಕಿರುಕುಳ ನೀಡಿದರೆ ಕಾನೂನಿನಡಿ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದರು.

    ತೆಲಿಗಿ ಹೋಬಳಿ ಕಸಾಪ ಅಧ್ಯಕ್ಷ ಕೆ.ಎಸ್.ವೀರಭದ್ರಪ್ಪ ಮಾತನಾಡಿ, ಹೆತ್ತವರು ಮಕ್ಕಳಿಗೆ ಶಿಕ್ಷಣ ಕೊಡಿಸುವುದರ ಜತೆಗೆ ಸಂಸ್ಕಾರ ಕಲಿಸಬೇಕು ಎಂದರು. ಜನಜಾಗೃತಿ ವೇದಿಕೆ ಜಿಲ್ಲಾ ಸಮಿತಿ ಸದಸ್ಯ ಎಸ್.ಪಿ.ಲಿಂಬ್ಯಾನಾಯ್ಕ, ಯೋಜನೆಯ ಜಿಲ್ಲಾ ನಿರ್ದೇಶಕ ಎಸ್.ಜನಾರ್ದನ ಮಾತನಾಡಿದರು.

    ಒಕ್ಕೂಟದ ಅಧ್ಯಕ್ಷೆ ವೈ.ನಾಗವೇಣಿ ಅಧ್ಯಕ್ಷತೆ ವಹಿಸಿದ್ದರು. ಕೆ.ಎಸ್.ವೀರಭದ್ರಪ್ಪ, ಗ್ರಾಪಂ ಅಧ್ಯಕ್ಷೆ ಕಪ್ಪೇರ ರೇಖಮ್ಮ ಕೆ.ಗಣೇಶ, ಕ್ಷೇತ್ರ ಯೋಜನಾಧಿಕಾರಿ ಸುಬ್ರಹ್ಮಣ್ಯ, ಕವಿತಾ, ನೇತ್ರಾ, ಮಂಜುನಾಥ, ಕವಿತಮ್ಮ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts