More

    ನರೇಗಾದಲ್ಲಿ ರೈತರಿಗೆ ಸಾಕಷ್ಟು ಅನುಕೂಲ

    ಹರಪನಹಳ್ಳಿ: ರೈತರ ಬದುಕನ್ನು ಹಸನಾಗಿಸಲು ನರೇಗಾದಲ್ಲಿ ಸಾಕಷ್ಟು ಸೌಲಭ್ಯಗಳಿವೆ. ಅವುಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಹಾಯಕ ನಿರ್ದೇಶಕ ಡಿ.ಎನ್.ಹೇಮಾದ್ರಿ ನಾಯ್ಕ ಹೇಳಿದರು.

    ತಾಲೂಕಿನ ನಿಚ್ಚವ್ವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದ್ಯಾಪನಾಯಕನಹಳ್ಳಿಯ ಅಮೃತ ಸರೋವರದಕಟ್ಟೆ ಮೇಲೆ ಶುಕ್ರವಾರ ಗ್ರಾಪಂನಿಂದ ಆಯೋಜಿಸಿದ್ದ ರೈತರ ದಿನಾಚರಣೆ ನಿಮಿತ್ತ ಜಲ ಸಂಜೀವಿನಿ, ರೈತರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

    ನರೇಗಾ ಯೋಜನೆಯ ಡಿಜಿಯೋ, ಉತ್ತಮ ತಂತ್ರಜ್ಞಾನಗಳನ್ನು ಬಳಸಿಕೊಂಡು ನೈಸರ್ಗಿಕ ಸಂಪನ್ಮೂಲ ನಿರ್ವಹಣೆ ಕಾಮಗಾರಿಗಳ ಅನುಷ್ಠಾನ ಮಾಡುವ ಕಾರ್ಯಕ್ರಮವೇ ಜಲ ಸಂಜೀವಿನಿ. ಈ ಯೋಜನೆಯಡಿ ದೂರ ಸಂವೇದಿ ಮತ್ತು ಭೌಗೋಳಿಕ ಮಾಹಿತಿ ವ್ಯವಸ್ಥೆಯ ತಾಂತ್ರಿಕತೆಯನ್ನು ಆಧರಿಸಿ ವೈಜ್ಞಾನಿಕವಾಗಿ ಕ್ರಿಯಾ ಯೋಜನೆ ರೂಪಿಸಲಾಗುತ್ತದೆ. ಆದ್ದರಿಂದ ಈ ಭಾಗದ ರೈತರು ಎಲ್ಲೆಲ್ಲಿ ನೀರಿನ ಸಂರಕ್ಷಣೆ ಆಗಬೇಕಿದೆ ? ಎಷ್ಟೆಷ್ಟು ನೀರಿನ ಬೇಡಿಕೆ ಇದೆ ಎಂಬುದನ್ನು ಸರ್ವೇ ಸಂದರ್ಭದಲ್ಲಿ ಅಗತ್ಯ ಮಾಹಿತಿ ನೀಡಬೇಕಿದೆ ಎಂದು ತಿಳಿಸಿದರು.

    ಸಂವಾದದಲ್ಲಿ ಮಾತನಾಡಿದ ರೈತರು, ಮಳೆಗಾಲದಲ್ಲಿ ತಮ್ಮ ಜಮೀನುಗಳಿಗೆ ಹೆಚ್ಚಿನ ನೀರು ಹರಿದು ಬಂದು ಬೆಳೆಗಳು ನಾಶವಾಗುತ್ತಿವೆ. ಇದರಿಂದ ಆರ್ಥಿಕ ಸಮಸ್ಯೆ ಆಗುತ್ತಿದೆ. ಈ ಬಗ್ಗೆ ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಂಡು ರೈತರ ನೆರವಿಗೆ ಬರಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಎ.ಡಿ. ಹೇಮಾದ್ರಿ ನಾಯ್ಕ, ಎಲ್ಲೆಲ್ಲಿ ನದಿ, ಕೆರೆಗಳು ಒತ್ತುವರಿ ಆಗಿದ್ದರೆ ಈ ರೀತಿಯ ಸಮಸ್ಯೆಗಳು ಕಂಡು ಬರುತ್ತವೆ. ಒಂದು ವೇಳೆ ಒತ್ತುವರಿ ಆಗದೆ ಇಂತಹ ಸಮಸ್ಯೆಗಳು ಸೃಷ್ಟಿಯಾಗಿದ್ದರೆ ಅದಕ್ಕೆ ವೈಜ್ಞಾನಿಕವಾಗಿ ಯೋಜನೆ ತಯಾರಿಸಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ತಿಳಿಸಿದರು.

    ತಾಂತ್ರಿಕ ಸಂಯೋಜಕ ನಾಗರಾಜ ನಾಯ್ಕ, ಐಇಸಿ ಸಂಯೋಜಕ ವಸಿಗೇರಪ್ಪ ಕೆ. ಚಾಗನೂರು ಮಾತನಾಡಿದರು. ಗ್ರಾಪಂ ಪಿಡಿಒ ಮುಕ್ತಾರ್ ಅಲಿ, ಅಧ್ಯಕ್ಷ ಪಿ.ದೇವೇಂದ್ರಪ್ಪ, ಸದಸ್ಯ ರಾಜಪ್ಪ, ಮುಖಂಡರಾದ ನಾಗರಾಜ, ಹನುಮಂತಪ್ಪ, ಮೂರ್ತಿನಾಯ್ಕ, ನರೇಗಾ ಹಾಗೂ ಗ್ರಾಪಂ ಸಿಬ್ಬಂದಿ, ರೈತರು, ಕೂಲಿ ಕಾರ್ಮಿಕರು ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts