25.9 C
Bengaluru
Wednesday, January 22, 2020

ಮೇಧಾವಿಗಳೆಲ್ಲ ಗ್ರಾಮೀಣ ಮೂಲದವರೆ

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಹರಪನಹಳ್ಳಿ: ದೇಶದಲ್ಲಿ ಅತ್ಯುನ್ನತ ಹುದ್ದೆಯಲ್ಲಿರುವ ಮೇಧಾವಿಗಳೆಲ್ಲರೂ ಗ್ರಾಮೀಣ ಮೂಲದವರು ಎಂದು ಜಿಪಂ ಸದಸ್ಯ ಎಚ್.ಬಿ. ಪರಶುರಾಮಪ್ಪ ಹೇಳಿದರು.

ತಾಲೂಕಿನ ನೀಲಗುಂದ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಏರ್ಪಡಿಸಿದ್ದ ನೀಲಗುಂದ ಕ್ಲಸ್ಟರ್ ಮಟ್ಟದ ಮಕ್ಕಳ ವಿಜ್ಞಾನ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೈನಂದಿನ ಜೀವನದಲ್ಲಿ ವಿಜ್ಞಾನ ಬಹುಮುಖ್ಯ ಪಾತ್ರ ವಹಿಸಿದೆ. ವಿಜ್ಞಾನ ಮತ್ತು ತಂತ್ರಜ್ಞಾನದ ಸಹಾಯದಿಂದ ಅಸಾಧ್ಯವಾದುದನ್ನು ಸಾಧ್ಯವಾಗಿಸಬಹುದಾಗಿದೆ ಎಂದರು.

ತಾಪಂ ಸದಸ್ಯ ಎಚ್. ಚಂದ್ರಪ್ಪ ಮಾತನಾಡಿ, ವಿಜ್ಞಾನ ಎಷ್ಟೇ ಮುಂದುವರಿದರೂ ಹಳ್ಳಿಗಳಲ್ಲಿ ಈಗಲೂ ಮೂಢನಂಬಿಕೆ, ಹಳೇ ಆಚರಣೆಗಳು ಜೀವಂತ ಇವೆ. ಸರ್ಕಾರ ಜನರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವ ಕಾರ್ಯಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದರು.

ಬಿಜಿವಿಎಸ್ ಕಾರ್ಯದರ್ಶಿ ಕಲಿವೀರ ಕಲ್ಮನಿ ಮಾತನಾಡಿ, ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡು ಹೊಸ ಆವಿಷ್ಕಾರಕ್ಕೆ ನಾಂದಿ ಹಾಡಬೇಕು ಎಂದರು.

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಪದ್ಮಲತಾ ಮಾತನಾಡಿ, ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳಲ್ಲಿ 634 ಕ್ಲಸ್ಟರ್‌ನಲ್ಲಿ ಸರ್ಕಾರ ಮತ್ತು ಬಿಜಿವಿಎಸ್, ಶಿಕ್ಷಣ ಇಲಾಖೆಯಿಂದ ಮಕ್ಕಳ ವಿಜ್ಞಾನ ಹಬ್ಬ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ಬಿಇಒ ಎಸ್.ಎಂ. ವೀರಭದ್ರಯ್ಯ ಮಾತನಾಡಿ, ಪ್ರತಿ ಶಾಲೆಯೂ ನಿಗದಿತ ಅವಧಿಯಲ್ಲಿ ಆರಂಭವಾಗಿ ಅಂತ್ಯಗೊಳ್ಳುವುದರಿಂದ ಶೈಕ್ಷಣಿಕ ಗುರಿ ತಲುಪಬಹುದಾಗಿದೆ ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ. ಅಂಜಿನಪ್ಪ, ಬಿಆರ್‌ಸಿ ಗಿರಜ್ಜಿ ಮಂಜುನಾಥ, ಎಸ್‌ಡಿಎಂಸಿ ಅಧ್ಯಕ್ಷ ಬಿ. ಶ್ರೀನಿವಾಸ, ಗ್ರಾಪಂ ಅಧ್ಯಕ್ಷೆ ಲೀಲಾವತಿ, ಮುಖ್ಯೋಪಾಧ್ಯಾಯರಾದ ಟೀಕ್ಯಾನಾಯ್ಕಾ ಇತರರಿದ್ದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯಿತಿ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ಕಾರ್ಯಕ್ರಮ ಆಯೋಜಿಸಿದ್ದವು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...