More

    ಯರಬಳ್ಳಿಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ

    ಹರಪನಹಳ್ಳಿ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಚಿಕೂನ್‌ಗುನ್ಯ ಪತ್ತೆಯಾಗಿದ್ದು, ಜಿಲ್ಲಾ ಆರೋಗ್ಯಧಿಕಾರಿ ಸಲೀಂ ತಾಲೂಕಿನ ತೌಡೂರು ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳಿಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.

    ಹಳ್ಳಿಗಳ ಮನೆಗಳಿಗೆ ತೆರಳಿದ ಡಾ. ಸಲೀಂ, ರೋಗಿಗಳನ್ನು ತಪಾಸಣೆ ಮಾಡಿ, ಮಾತನಾಡಿದರು. ಕೆಲ ಕಡೆ ಚಿಕೂನ್‌ಗುನ್ಯ ಪ್ರಕರಣ ಕಂಡು ಬಂದಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿಗೆ ಸೂಕ್ತ ಸಲಹೆ ನೀಡಿ, ತಾತ್ಕಾಲಿಕ ಆಸ್ಪತ್ರೆ ತೆರೆದು, ಉತ್ತಮ ಚಿಕಿತ್ಸೆ ನೀಡಲು ಆದೇಶ ಮಾಡಿದ್ದೇನೆ ಎಂದರು. ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು. ಪ್ರತಿಯೊಬ್ಬರ ರಕ್ತ ಪರೀಕ್ಷೆ, ಕುಡಿಯುವ ನೀರು ಪರೀಕ್ಷೆ ಮಾಡಲಾಗುವುದು. ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು ಎಂದರು.

    ಚಿಕೂನ್‌ಗುನ್ಯ, ಡೆಂೆ, ಮಲೇರಿಯಾದಂತಹ ರೋಗ ಬರಲು ಸೊಳ್ಳೆಗಲು ಕಾರಣ. ಸ್ವಚ್ಛತೆ ಇಲ್ಲದಿದ್ದರೆ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಮನೆ ಒಳಗೆ ಮತ್ತು ಹೊರಗೆ ಸ್ವಚ್ಛತೆ ಕಾಪಾಡಬೇಕು ಎಂದು ಸಾರ್ವಜನಿಕರಿಗೆ ಸಲಹೆ ನೀಡಿದರು.

    ಅರಸೀಕೆರೆ ಆಸ್ಪತ್ರೆಗೆ ಭೇಟಿ ನೀಡಿ ಡಾ.ಸಲೀಂ, ಸುತ್ತಲಿನ ಹಳ್ಳಿಗಳಿಂದ ಬರುವ ರೋಗಿಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಸೂಕ್ತ ಚಿಕಿತ್ಸೆ ನೀಡಬೇಕು. ಸಾಂಕ್ರಾಮಿಕ ರೋಗಗಳ ಬಗ್ಗೆ ಮುಂಜಾಗ್ರತೆ ವಹಿಸಬೇಕು ಎಂದು ಅಲ್ಲಿನ ವೈದ್ಯಾಧಿಕಾರಿ ಮತ್ತು ಸಿಬ್ಬಂದಿಗೆ ಸಲಹೆ ನೀಡಿದರು.

    ಕ್ಷಯ ಆರೋಗ್ಯಾಧಿಕಾರಿ ಜಗದೀಶ್ ಪಾಟ್ನಾ, ಡಾ. ಶಕುಂತಲಾ, ಪ್ರಮುಖರಾದ ಯರಬಳ್ಳಿ ಮಂಜುನಾಥ್, ನರ್ಸ್‌ಗಳು, ಆಶಾ ಕಾರ್ಯಕರ್ತರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts