ಕಾಸರಗೋಡು: ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ 14ರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಅರುಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ ಮನೆಯವರ ಜತೆ ಉತ್ತಮ ಸಂಪರ್ಕ ಹೊಂದಿದ್ದ ಆರೋಪಿ, ಪರಿಚಯದ ಸೋಗಿನಲ್ಲಿ ಬಾಲಕಿಗೆ ಕಿರುಕುಳ ನೀಡಿದ್ದನು. ವಿಷಯ ಬಹಿರಂಗಪಡಿಸದಿರುವಂತೆ ಬೆದರಿಕೆಯೊಡ್ಡಿದ್ದ ಹಿನ್ನೆಲೆಯಲ್ಲಿ ಬಾಲಕಿ ಮನೆಯವರಿಗೆ ಮಾಹಿತಿ ನೀಡಿರಲಿಲ್ಲ. ಶಾಲೆಯಲ್ಲಿ ನಡೆಸಲಾದ ಆಪ್ತಸಮಾಲೋಚನೆಯಲ್ಲಿ ಬಾಲಕಿ ತನಗಾದ ನೋವಿನ ಬಗ್ಗೆ ಮಾಹಿತಿ ನೀಡಿದ್ದ ಹಿನ್ನೆಲೆಯಲ್ಲಿ ಸಂಬಂಧಪಟ್ಟವರು ಪೊಲೀಸರಿಗೆ ದೂರು ನೀಡಿದ್ದರು. ಆರೋಪಿ ವಿರುದ್ಧ ಪೋಕ್ಸೋ ಅನ್ವಯ ಪ್ರಕರಣ ದಾಖಲಾಗಿದೆ.
