

ಉಡುಪಿ: ನಗರದ ಪರ್ಕಳದಲ್ಲಿ ಅಪ್ರಾಪ್ತ ಬಾಲಕಿಗೆ ಇಬ್ಬರು ಲೈಂಗಿಕ ದೌರ್ಜನ್ಯ ನೀಡಿರುವ ಘಟನೆ ನಡೆದಿದೆ. ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಬಳ್ಳಾರಿ ಮೂಲದ ಶಿವಶಂಕರ್ ಮತ್ತು ಸಚಿನ್ ಬಂಧಿತ ಆರೋಪಿಗಳು. ಶಿವಶಂಕರ್ ಫುಡ್ ಡಿಲೆವರಿ ಕೆಲಸ ಮಾಡುತ್ತಿದ್ದರೆ ಸಚಿನ್ ಕ್ಯಾಂಟೀನ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಇವರಿಬ್ಬರು ಸೇರಿ 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿರುವುದಾಗಿ ಹೇಳಲಾಗಿದೆ. ಮಕ್ಕಳ ಸಹಾಯವಾಣಿ ಕೇಂದ್ರಕ್ಕೆ ಬಂದ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಾಲಕಿಯನ್ನು ಪುನರ್ವಸತಿ ಕೇಂದ್ರಕ್ಕೆ ದಾಖಲಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.