More

    ಹಾರ್ದಿಕ್, ಧವನ್, ಭುವಿ ವಾಪಸ್​; ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪ್ರಕಟ 

    ಅಹಮದಾಬಾದ್: ಬೆನ್ನುನೋವಿಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿ ಕಳೆದ ಆರು ತಿಂಗಳಿಂದ ಕ್ರಿಕೆಟ್​ನಿಂದ ದೂರ ಉಳಿದಿದ್ದ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಗೆ ಭಾರತ ತಂಡಕ್ಕೆ ವಾಪಸಾಗಿದ್ದಾರೆ.

    ಕನ್ನಡಿಗ ಸುನೀಲ್ ಜೋಷಿ ಆಯ್ಕೆ ಸಮಿತಿ ಮುಖ್ಯಸ್ಥರಾಗಿ ಆಯ್ಕೆಗೊಂಡ ಬಳಿಕ ಪ್ರಕಟಿಸಿದ ಮೊದಲ ತಂಡ ಇದಾಗಿದೆ. ಗಾಯದಿಂದ ಚೇತರಿಸಿಕೊಂಡಿರುವ ಅನುಭವಿ ಆಟಗಾರರಾದ ಶಿಖರ್ ಧವನ್ ಹಾಗೂ ವೇಗಿ ಭುವನೇಶ್ವರ್ ಕುಮಾರ್ ಕೂಡ ತಂಡದಲ್ಲಿ ಸ್ಥಾನ ಪಡೆಯಲು ಸಫಲರಾಗಿದ್ದಾರೆ.

    ನ್ಯೂಜಿಲೆಂಡ್ ಪ್ರವಾಸದಲ್ಲಿದ್ದ ವೇಗಿ ಶಾರ್ದೂಲ್ ಠಾಕೂರ್ ಹಾಗೂ ಆಲ್ರೌಂಡರ್ ಶಿವಂ ದುಬೆ ಅವರನ್ನು ತಂಡದಿಂದ ಕೈಬಿಟ್ಟಿದ್ದರೆ, ಅನುಭವಿ ಕೇದಾರ್ ಜಾಧವ್ ಬದಲಿಗೆ ಯುವ ಆಟಗಾರ ಶುಭಮಾನ್ ಗಿಲ್ ತಂಡಕ್ಕೆ ಸೇರಿಕೊಂಡಿದ್ದಾರೆ. ಬೆನ್ನು ನೋವು ಕಾರಣಕ್ಕೆ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ನ್ಯೂಜಿಲೆಂಡ್ ಪ್ರವಾಸಕ್ಕೆ ನಡೆದ ಫಿಟ್ನೆಸ್ ಪರೀಕ್ಷೆಯಲ್ಲಿ ಪಾಂಡ್ಯ ವಿಫಲರಾಗಿದ್ದರು.

    ಮುಂಬೈನಲ್ಲಿ ನಡೆಯುತ್ತಿರುವ ಡಿವೈ ಪಾಟೀಲ್ ಕಾಪೋರೇಟ್ ಟಿ20 ಟೂರ್ನಿಯಲ್ಲಿ ಪಾಂಡ್ಯ ಸ್ಪೋಟಕ ಬ್ಯಾಟಿಂಗ್ ಮೂಲಕ ಲಯ ಕಂಡುಕೊಂಡಿದ್ದಾರೆ. ಆಯ್ಕೆ ಸಮಿತಿ ಮಾಜಿ ಮುಖ್ಯಸ್ಥ ಎಂಎಸ್​ಕೆ ಪ್ರಸಾದ್ ಪಾಂಡ್ಯ ನಿರ್ವಹಣೆಯನ್ನು ವೀಕ್ಷಿಸಿದ್ದರು.

    ಧವನ್ ಇನ್, ಮಯಾಂಕ್ ಔಟ್: ತವರಿನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಸರಣಿ ವೇಳೆ ಗಾಯಗೊಂಡಿದ್ದ ಶಿಖರ್ ಧವನ್ ಲಂಡನ್​ನಲ್ಲಿ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಧವನ್ ಹಾಗೂ ಭುವನೇಶ್ವರ್ ಇಬ್ಬರು ತಂಡಕ್ಕೆ ವಾಪಸಾಗಿದ್ದಾರೆ.

    ಧವನ್ ಆಗಮನದಿಂದಾಗಿ ಕನ್ನಡಿಗ ಮಯಾಂಕ್ ಅಗರ್ವಾಲ್ ತಂಡದಿಂದ ಹೊರಬಿದ್ದಿದ್ದಾರೆ. ನ್ಯೂಜಿಲೆಂಡ್ ಪ್ರವಾಸದ ವೇಳೆ ಆಡಿದ 3 ಏಕದಿನ ಪಂದ್ಯಗಳಲ್ಲೂ ಮಯಾಂಕ್ ವಿಫಲರಾಗಿದ್ದರು. ಆದರೆ, ಪೃಥ್ವಿ ಷಾ ತಮ್ಮ ಸ್ಥಾನ ಉಳಿಸಿಕೊಂಡಿದ್ದು, ಯುವ ಆಟಗಾರನಿಗೆ ಮತ್ತೊಂದು ಅವಕಾಶ ಕಲ್ಪಿಸಲಾಗಿದೆ. 12 ರಂದು ಧರ್ಮಶಾಲಾದಲ್ಲಿ ಮೊದಲ ಏಕದಿನ, 15ರಂದು ಲಖನೌದಲ್ಲಿ 2ನೇ ಹಾಗೂ 18ರಂದು ಕೋಲ್ಕತದಲ್ಲಿ 3ನೇ ಪಂದ್ಯ ನಡೆಯಲಿದೆ.-ಏಜೆನ್ಸೀಸ್

    ಭಾರತ ತಂಡ

    ಶಿಖರ್ ಧವನ್, ಪೃಥ್ವಿ ಷಾ, ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್, ಮನೀಷ್ ಪಾಂಡೆ, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಯಜುವೇಂದ್ರ ಚಾಹಲ್, ಜಸ್​ಪ್ರೀತ್ ಬುಮ್ರಾ, ನವದೀಪ್ ಸೈನಿ, ಕುಲದೀಪ್ ಯಾದವ್, ಶುಭಮಾನ್ ಗಿಲ್.

    ಇಂಡಿಯಾಗೆ ಸ್ಪರ್ಧಾತ್ಮಕ ಸವಾಲು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts