More

    ವಿಶ್ವಕಪ್​ನಿಂದ ಹಾರ್ದಿಕ್ ಔಟ್; ಈ ನೋವು ಅರಗಿಸಿಕೊಳ್ಳೋಕೆ ಆಗ್ತಿಲ್ಲ: ಪಾಂಡ್ಯ ಭಾವುಕ ನುಡಿ

    ನವದೆಹಲಿ: ಹಾಲಿ ಏಕದಿನ ವಿಶ್ವಕಪ್​ ಋತುವಿನಲ್ಲಿ ಭಾರತ ತಾನಾಡಿರುವ 7 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಭಾನುವಾರ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುವ 8ನೇ ಪಂದ್ಯದಲ್ಲಿ ಗೆದ್ದು ತನ್ನ ಅಜೇಯ ಓಟವನ್ನು ಮುಂದುವರೆಸಲು ಸಜ್ಜಾಗಿದೆ.

    ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್​ ಮಾಡುವ ವೇಳೆ ಗಾಯಗೊಂಡಿದ್ದ ಟೀಂ ಇಂಡಿಯಾ ಆಲ್​ರೌಂಡರ್​ ಹಾರ್ದಿಕ್​ ಪಾಂಡ್ಯ ಇನ್ನೂ ಚೇತರಿಸಿಕೊಳ್ಳದ ಕಾರಣ 2023ರ ಏಕದಿನ ವಿಶ್ವಕಪ್​ ಟೂರ್ನಿಯಿಂದ ಹೊರಬಿದ್ದಿದ್ದಾರೆ. ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯ, ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಭಾವನಾತ್ಮಕ ಸಂದೇಶ ಒಂದನ್ನು ಬರೆದುಕೊಂಡಿದ್ದಾರೆ.

    ಇದನ್ನೂ ಓದಿ: ರೇವ್​ ಪಾರ್ಟಿಯಲ್ಲಿ ಹಾವಿನ ವಿಷ ಬಳಕೆ; ಬಂಧಿತ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ

    ನಾನು ವಿಶ್ವಕಪ್ ಟೂರ್ನಿಯನ್ನು ಮಿಸ್ ಮಾಡಿಕೊಳ್ಳಲಿದ್ದೇನೆ ಎನ್ನುವುದನ್ನು ಅರಗಿಸಿಕೊಳ್ಳಲು ಕಷ್ಟವಾಗುತ್ತಿದೆ. ನಾನು ಯಾವಾಗಲೂ ತಂಡದ ಜತೆಗೆ ಇರುತ್ತೇನೆ. ಪ್ರತಿ ಪಂದ್ಯದಲ್ಲೂ, ಪ್ರತಿ ಬಾಲ್‌ಗೂ ಭಾರತ ತಂಡದ ಪರ ಚಿಯರ್ ಮಾಡುತ್ತೇನೆ. ನೀವು ನನ್ನ ಆರೋಗ್ಯ ಚೇತರಿಕೆಯ ಕುರಿತಂತೆ ನೀಡಿದ ಹಾರೈಕೆ, ಪ್ರೀತಿ ವಿಶ್ವಾಸಕ್ಕೆ ಋಣಿಯಾಗಿದ್ದೇನೆ. ಈ ತಂಡವು ವಿಶೇಷವಾದದ್ದಾಗಿದೆ. ಪ್ರತಿಯೊಬ್ಬರು ಹೆಮ್ಮೆ ಪಡುವಂತೆ ನಾವೆಲ್ಲರೂ ಮಾಡಲಿದ್ದೇವೆ. ಪ್ರೀತಿಯಿರಲಿ, ನಿಮ್ಮವ ಹಾರ್ದಿಕ್ ಪಾಂಡ್ಯ ಎಂದು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

    ಗಾಯದ ಸಮಸ್ಯೆಯ ಬಳಿಕ ಟೀಂ ಇಂಡಿಯಾಗೆ ಭರ್ಜರಿ ಕಮ್‌ಬ್ಯಾಕ್ ಮಾಡಿದ್ದ ಹಾರ್ದಿಕ್ ಪಾಂಡ್ಯ, ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾದ ಪ್ರಮುಖ ಆಲ್ರೌಂಡರ್ ಆಗಿ ಗುರುತಿಸಿಕೊಂಡಿದ್ದರು. ಹಾರ್ದಿಕ್​ ಪಾಂಡ್ಯ ಬದಲಿಗೆ ಬಿಸಿಸಿಐ ಬದಲಿ ಆಟಗಾರನನ್ನಾಗಿ ಕನ್ನಡಿಗ ಪ್ರಸಿದ್​ ಕೃಷ್ಣ ಅವರನ್ನು ನೇಮಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts