ವಿಚ್ಛೇದನದ ವದಂತಿ ನಡುವೆ ಹಾಟ್ ಬ್ಯೂಟಿ ಜತೆ ಕಾಣಿಸಿಕೊಂಡ ಹಾರ್ದಿಕ್; ಯಾರು ಈಕೆ? ಇಲ್ಲಿದೆ ಅಸಲಿ ಕಹಾನಿ..

hardik
Published on

ನವದೆಹಲಿ: ಟೀಂ ಇಂಡಿಯಾ ಕ್ರಿಕೆಟರ್​ ಹಾರ್ದಿಕ್ ಪಾಂಡ್ಯ ಮತ್ತು ಅವರ ಪತ್ನಿ ನತಾಶಾ ಸ್ಟಾಂಕೋವಿಕ್ ವಿಚ್ಚೇದನ ಪಡೆದಿದ್ದಾರೆ ಎನ್ನುವ ಸುದ್ದಿ ಕೆಲವು ದಿನಗಳಿಂದ ಸೋಶಿಯಲ್​​ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆದರೆ ಈ ಕುರಿತಾಗಿ ಈ ಜೋಡಿ ಎಲ್ಲೂ ಕೂಡಾ ಕಾಣಿಸಿಕೊಂಡಿಲ್ಲ. ಆದರೆ ಈ ಸುದ್ದಿ ಬೆನ್ನಲ್ಲೇ ಮತ್ತೊಂದು ಸುದ್ದಿ ಮುನ್ನೆಲೆಗೆ ಬಂದಿದೆ.

ನತಾಶಾ ಜೊತೆ ವಿಚ್ಛೇದನದ ವದಂತಿಗಳು ಹರಿದಾಡುತ್ತಿರುವಾಗ ಹಾರ್ದಿಕ್ ಪಾಂಡ್ಯ ಹಾಟ್ ಬ್ಯೂಟಿಯೊಂದಿಗೆ ಕಾಣಿಸಿಕೊಂಡಿರುವುದು ಚರ್ಚೆಯ ವಿಷಯವಾಗಿದೆ. ಸದ್ಯ ಇವರಿಬ್ಬರು ಒಟ್ಟಿಗೆ ಇರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಇವುಗಳನ್ನು ನೋಡಿದ ಅಭಿಮಾನಿಗಳು ಮತ್ತು ನೆಟ್ಟಿಗರು ಈ ಹಾಟ್ ಬ್ಯೂಟಿ ಯಾರು ಎಂದು ಕೇಳುತ್ತಿದ್ದಾರೆ.

ಈ ವಿಡಿಯೋದಲ್ಲಿರುವ ಆಕೆ ಬೇರೆ ಯಾರೂ ಅಲ್ಲ, ಪ್ರಸಿದ್ಧ ಮೇಕಪ್ ಕಲಾವಿದೆ ಪ್ರಾಚಿ ಸೋಲಂಕಿ. ಪಾಂಡ್ಯಾ ಅಭಿಮಾನಿ ಹಾಗೂ ಸಾಮಾಜಿಕ ಮಾಧ್ಯಮದ ಪ್ರಭಾವಿ ಕೂಡ. ಇತ್ತೀಚೆಗೆ ಅವರು ಹಾರ್ದಿಕ್ ಪಾಂಡ್ಯ ಜೊತೆ ಕಾಣಿಸಿಕೊಂಡಿದ್ದರು. ಅವರು ಕೃನಾಲ್ ಪಾಂಡ್ಯ  ಕುಟುಂಬದೊಂದಿಗೆ ಚಿತ್ರಗಳನ್ನು ತೆಗೆದುಕೊಂಡರು. ಈ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಇವರಿಬ್ಬರು ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಆದರೆ ಪ್ರಾಚಿ ಸೋಲಂಕಿ ಈಗ ಪಾಂಡ್ಯ ಕುಟುಂಬಕ್ಕೆ ಹಿಂದೆಂದಿಗಿಂತಲೂ ಹೆಚ್ಚು ಹತ್ತಿರವಾಗಿರುವುದರಿಂದ ಹೊಸ ಸುದ್ದಿಗಳು ಬರುತ್ತಿವೆ.

ಹಾರ್ದಿಕ್ ಪಾಂಡ್ಯ ಟಿ20 ವಿಶ್ವಕಪ್ ಗೆದ್ದ ನಂತರವೂ ಅವರ ಪತ್ನಿ ನತಾಶಾ ಸಾಮಾಜಿಕ ಜಾಲತಾಣಗಳಲ್ಲಿ ಒಂದೇ ಒಂದು ಪೋಸ್ಟ್ ಹಾಕಿಲ್ಲ. ಕೆಲವು ನೆಟ್ಟಿಗರು ಪಾಂಡ್ಯ ದಂಪತಿಗಳ ಮಧ್ಯೆ ಎನೋ ಸರಿ ಇದ್ದಂತೆ ಇಲ್ಲ ಎಂದು ಕಾಮೆಂಟ್​​ ಮಾಡುತ್ತಿರುತ್ತಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net