More

    ನಾಯಕನಾಗಿ ಅನಪೇಕ್ಷಿತ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ

    ಹೈದರಾಬಾದ್​: ಮಾರ್ಚ್​ 27ರಂದು ಇಲ್ಲಿನ ರಾಜೀವ್​ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ನ 08ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್​ ಬೃಹತ್​ ಮೊತ್ತ ದಾಖಲಿಸುವುದರ ಜೊತೆಗೆ 31ರನ್​ಗಳ ಭರ್ಜರಿ ಜಯ ದಾಖಲಿಸಿದೆ. ಟೂರ್ನಿಯಲ್ಲಿ ಸತತ ಎರಡನೇ ಸೋಲು ಕಂಡ ಮುಂಬೈ ಇಂಡಿಯನ್ಸ್​ ಪುಟಿದೇಳುವ ತವಕದೊಂದಿಗೆ ಮುಂದಿನ ಪಂದ್ಯಕ್ಕೆ ತಯಾರಿ ನಡೆಸುತ್ತಿದೆ.

    17ನೇ ಆವೃತ್ತಿಯಲ್ಲಿ ಟ್ರೋಫಿ ಗೆಲ್ಲುವ ಹುಮ್ಮಸ್ಸಿನೊಂದಿಗೆ ಹಾರ್ದಿಕ್​ ಪಾಂದ್ಯ ನೇತೃತ್ವದಲ್ಲಿ ಕಣಕ್ಕಿಳಿದಿದ್ದ ಮುಂಬೈ ಇಂಡಿಯನ್ಸ್​ ತಂಡವು ಆಡಿರುವ ಎರಡು ಪಂದ್ಯಗಳಲ್ಲಿ ಸೋಲುಂಡಿದ್ದು, 2008ರ ನಂತರ ಮುಂಬೈ ಇಂಡಿಯನ್ಸ್​ ನೂತನ ನಾಯಕನ ಅಡಿಯಲ್ಲಿ ಸೀಸನ್​ ಆರಂಭಿಕ ಎರಡೂ ಪಂದ್ಯಗಳನ್ನು ಸೋತಿದೆ.

    ಹಾರ್ದಿಕ್​ ಪಾಂಡ್ಯ ನಾಯಕತ್ವದ ಅಡಿಯಲ್ಲಿ ಐದು ಬಾರಿಯ ಚಾಂಪಿಯನ್ಸ್​ ಮುಂಬೈ ಇಂಡಿಯನ್ಸ್ ಸತತ ಎರಡು ಸೋಲು ಕಂಡಿದ್ದು, ಹಾರ್ದಿಕ್​ ಪಾಂಡ್ಯ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್​ಗೆ ಗೆಲುವು ಮರೀಚಿಕೆಯಾದಂತೆ ಕಾಣುತ್ತಿದೆ. ಇತ್ತ ಮುಂಬೈ ತಂಡದ ನಾಯಕನಾಗಿ ಆಡಿದ ಎರಡೂ ಪಂದ್ಯಗಳನ್ನು ಸೋತಿರುವ ಹಾರ್ದಿಕ್ ಪಾಂಡ್ಯ ತನ್ನ ಖಾತೆಗೆ ಬೇಡದ ದಾಖಲೆಯೊಂದನ್ನು ಹಾಕಿಕೊಂಡಿದ್ದಾರೆ.

    Hardik Pandya

    ಇದನ್ನೂ ಓದಿ: ಬೆಂಗಳೂರು ಜಲಕ್ಷಾಮ; ಕನ್ನಡದಲ್ಲಿಯೇ ಟ್ವೀಟ್​ ಮಾಡಿ ಪರಿಹಾರ ತಿಳಿಸಿದ ಮೆಗಾಸ್ಟಾರ್​

    ವಾಸ್ತವವಾಗಿ ಮುಂಬೈ ಇಂಡಿಯನ್ಸ್ ತಂಡವು ಮೊದಲ ಬಾರಿಗೆ ತಂಡವನ್ನು ಮುನ್ನಡೆಸುತ್ತಿದ್ದ ಹರ್ಭಜನ್ ಸಿಂಗ್ ಅವರ ನಾಯಕತ್ವದಲ್ಲಿ 2008 ರ ಐಪಿಎಲ್ ಸೀಸನ್ ಆಡಿತ್ತು. ಆದರೆ ತಂಡವು ಸೀಸನ್​ನ ಮೊದಲ ಮೂರು ಪಂದ್ಯಗಳಲ್ಲಿ ಸತತ ಸೋಲುಗಳನ್ನು ಎದುರಿಸಬೇಕಾಯಿತು. ಆ ನಂತರ ತಂಡ ಮೊದಲ ಪಂದ್ಯ ಸೋತರೂ ನಂತರದ ಮ್ಯಾಚ್​ಗಳಲ್ಲಿ ಗೆಲುವಿನ ಟ್ರ್ಯಾಕ್​ಗೆ ಮರಳುತ್ತಿತ್ತು. ಆದರೆ, ಇದೀಗ ಮುಂಬೈ ತಂಡ ನೂತನ ನಾಯಕ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಸತತ ಎರಡು ಪಂದ್ಯಗಳಲ್ಲಿ ಸೋಲು ಕಂಡಿದೆ. ಈ ಮೂಲಕ ಪಾಂಡ್ಯ ಮೊದಲ ಬಾರಿಗೆ ಈ ಫ್ರಾಂಚೈಸಿಯ ನಾಯಕರಾಗಿ ಐಪಿಎಲ್ ಸೀಸನ್​ನ ಮೊದಲ 2 ಪಂದ್ಯಗಳಲ್ಲಿ ಸೋತಿದ್ದಾರೆ.

    ನಾಯಕತ್ವದಲ್ಲಿ ಮಾತ್ರವಲ್ಲದೆ ಹಾರ್ದಿಕ್ ಆಟಗಾರನಾಗಿಯೂ ಕಳಪೆ ಪ್ರದರ್ಶನ ನೀಡುತ್ತಿದ್ದಾರೆ. ಮೊದಲ ಪಂದ್ಯದಲ್ಲಿ 30 ರನ್ ನೀಡಿ ಯಾವುದೇ ವಿಕೆಟ್ ಪಡೆಯಲು ಸಾಧ್ಯವಾಗದ ಹಾರ್ದಿಕ್ ಬ್ಯಾಟ್‌ನಿಂದ 11 ರನ್ ಗಳಿಸಲಷ್ಟೇ ಶಕ್ತರಾದರು. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ತಮ್ಮ 4 ಓವರ್‌ಗಳಲ್ಲಿ 46 ರನ್ ನೀಡಿ 1 ವಿಕೆಟ್ ಮಾತ್ರ ಕಬಳಿಸಲು ಶಕ್ತರಾದರು. ತಂಡ 278 ರನ್‌ಗಳ ದೊಡ್ಡ ಗುರಿಯನ್ನು ಬೆನ್ನಟ್ಟಿದ ಸಂದರ್ಭದಲ್ಲಿ ಹಾರ್ದಿಕ್ 20 ಎಸೆತಗಳಲ್ಲಿ 24 ರನ್ ಗಳಿಸಿ ಪೆವಿಲಿಯನ್​ನತ್ತ ಮುಖ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts