More

    ಹಾರ್ದಿಕ್ ಮುಂದೆ ಈಗ ಓಪನರ್ಸ್‌ ಆಯ್ಕೆ ಮಾಡುವ ಸವಾಲು; ಹೇಗಿರಲಿದೆ ಭಾರತ ತಂಡ? ಯಾರಿರಲಿದ್ದಾರೆ ಟಿ-20 ಟೀಮ್‌ನಲ್ಲಿ?

    ನವದೆಹಲಿ: ಟಿ20 ವಿಶ್ವಕಪ್ ಬಳಿಕ ಮೊದಲ ಅಂತಾರಾಷ್ಟ್ರೀಯ ಪಂದ್ಯ ಆಡಲು ಟೀಂ ಇಂಡಿಯಾ ಸಜ್ಜಾಗಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯಂತಹ ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಹಾರ್ದಿಕ್ ನಾಯಕತ್ವದಲ್ಲಿ ತಂಡ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ 20ಐ ಸರಣಿಯನ್ನು ಆಡಲಿದೆ. ಇದು ನ.18ರಿಂದ (ಶುಕ್ರವಾರ) ಪ್ರಾರಂಭವಾಗಲಿದೆ.

    ವೆಲ್ಲಿಂಗ್ಟನ್‌ನ ಸ್ಕೈ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯದಲ್ಲಿ ಟೀಂ ಇಂಡಿಯಾ ತನ್ನ ಯುವ ಆಟಗಾರರನ್ನು ನೆಚ್ಚಿಕೊಂಡು ಶುಭಾರಂಭ ಮಾಡಲಿದೆ. ಅದಕ್ಕೂ ಮೊದಲು ಕೋಚ್ ವಿವಿಎಸ್ ಲಕ್ಷ್ಮಣ್ ಮತ್ತು ನಾಯಕ ಹಾರ್ದಿಕ್ ಮುಂದಿರುವ ದೊಡ್ಡ ಸವಾಲು ಎಂದರೆ ಆಡುವ 11 ಜನರ ಆಯ್ಕೆ ಮಾಡುವುದು.

    ತಂಡದಲ್ಲಿ ಯಾರು ಆಡಲಿದ್ದಾರೆ ಎನ್ನುವುದು ಬಹುತೇಕ ಖಚಿತವಾಗಿದೆ. ಆದರೆ ಆರಂಭಿಕ ಜೋಡಿ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಅನುಪಸ್ಥಿತಿಯಲ್ಲಿ ಆರಂಭಿಕ ಸ್ಥಾನಕ್ಕಾಗಿ ಸ್ಪರ್ಧೆ ಏರ್ಪಡಬಹುದು. ಹಾರ್ದಿಕ್ ಪಾಂಡ್ಯ ತಂಡದ ನಾಯಕರಾಗಿದ್ದು ರಿಷಬ್ ಪಂತ್ ಉಪನಾಯಕರಾಗಿದ್ದಾರೆ. ಇವರಿಬ್ಬರೂ ಆಡುವುದು ಖಚಿತವಾಗಿದೆ. ಇದಲ್ಲದೇ ತಂಡದಲ್ಲಿ ಸೂರ್ಯಕುಮಾರ್ ಯಾದವ್ ಕೂಡ ಆಟವಾಡಲಿದ್ದಾರೆ. ವಿರಾಟ್ ಕೊಹ್ಲಿ ಬದಲಿಗೆ ಶ್ರೇಯಸ್ ಅಯ್ಯರ್ ಸೇರ್ಪಡೆಯಾಗಲಿದ್ದಾರೆ. ಇದೇ ವೇಳೆ ಸ್ಟಾರ್ ಸ್ಪಿನ್ನರ್ ಯುಜುವೇಂದ್ರ ಚಹಾಲ್ ಅವರನ್ನು ಆಡಿಸಲು ನಿರ್ಧರಿಸಲಾಗಿದೆ. ಅಕ್ಷರ್ ಪಟೇಲ್ ಬದಲಿಗೆ ಸುಂದರ್ ಕಣಕ್ಕಿಳಿದಿದ್ದು, ವೇಗದ ಬೌಲಿಂಗ್ ನಲ್ಲಿ ಆರ್ಷ್​ದೀಪ್ ಸಿಂಗ್ ಸ್ಥಾನ ಖಚಿತವಾಗಿದೆ.

    ಟೀಂ ಇಂಡಿಯಾದ ಇಡೀ ತಂಡ:
    ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ಉಪನಾಯಕ ಮತ್ತು ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಸಿಂಗ್ ಯಾದವ್, ಅರಹಲ್‌ದೀಪ್ ಯಾದವ್, ಪಟೇಲ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್

    ಯಾರ್​ ಯಾರು ಆಡಬಹುದು?
    ದೀಪಕ್ ಹೂಡಾ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವೈಸ್ ಕ್ಯಾಪ್ಟನ್ ಡಬ್ಲ್ಯುಕೆ), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಉಮ್ರಾನ್ ಮಲಿಕ್, ಅರ್ಶ್ದೀಪ್ ಸಿಂಗ್ ಮತ್ತು ಮೊಹಮ್ಮದ್ ಸಿರಾಜ್. 

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts