More

  ಹಾರ್ದಿಕ್ ಪಾಂಡ್ಯ ಮಾರಕ ದಾಳಿ: ಭಾರತ ತಂಡಕ್ಕೆ 97 ರನ್‌ ಗುರಿ ನೀಡಿದ ಐರ್ಲೆಂಡ್‌!

  ನ್ಯೂಯಾರ್ಕ್​: ಇಲ್ಲಿನ ನಸೌ ಕೌಂಟಿ ಇಂಟರ್‌ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ 8ನೇ ಪಂದ್ಯದಲ್ಲಿ ಭಾರತ ಹಾಗೂ ಐರ್ಲೆಂಡ್‌ ತಂಡಗಳು ಸೆಣಸುತ್ತಿವೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಮೊದಲು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದ್ದಾರೆ.

  ಇದನ್ನೂ ಓದಿ: ಮಧ್ಯಂತರ ಜಾಮೀನು ಅರ್ಜಿ ವಜಾ ಬೆನ್ನಲ್ಲೇ ತಿಹಾರ್ ಜೈಲಿನಲ್ಲಿ ಕೇಜ್ರಿವಾಲ್ ಭೇಟಿಯಾದ ಪತ್ನಿ ಸುನಿತಾ!

  ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಐರ್ಲೆಂಡ್ ತಂಡ, ಟೀಂ ಇಂಡಿಯಾ ವೇಗಿಗಳ ಮಾರಕ ದಾಳಿಗೆ ನಲುಗಿ ಕೇವಲ 96 ರನ್​ಗಳಿಗೆ ಆಲೌಟ್ ಆಗಿದೆ. ಐರ್ಲೆಂಡ್ ತಂಡ ಫೂರ್ಣ 20 ಓವರ್​ಗಳನ್ನು ಆಡಲು ಸಾಧ್ಯವಾಗಲಿಲ್ಲ. ಅಂತಿಮವಾಗಿ 16 ಓವರ್‌ಗಳಿಗೆ ತನ್ನೇಲ್ಲ ವಿಕೆಟ್ ಕಳೆದುಕೊಂಡ ಐರ್ಲೆಂಡ್ 96 ರನ್‌ ಕಲೆಹಾಕಲಷ್ಟೇ ಶಕ್ತವಾಯಿತು. ಉಪನಾಯಕ ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾ ಪರ ಅತಿ ಹೆಚ್ಚು 3 ವಿಕೆಟ್ ಕಬಳಿಸಿದರು.

  ಟೀಂ ಇಂಡಿಯಾ: ರೋಹಿತ್‌ ಶರ್ಮಾ (C), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್‌ ಪಂತ್‌ (WK), ಶಿವಂ ದುಬೆ, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್‌ ಬುಮ್ರಾ, ಅರ್ಷದೀಫ್‌ ಸಿಂಗ್‌, ಮೊಹಮ್ಮದ್ ಸಿರಾಜ್‌

  ಐರ್ಲೆಂಡ್‌‌ : ಪಾಲ್ ಸ್ಟಿರ್ಲಿಂಗ್ (C), ಆಂಡ್ರ್ಯೂ ಬಾಲ್ಬಿರ್ನಿ, ಲೋರ್ಕನ್ ಟಕರ್ (WK), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಗರೆಥ್ ಡೆಲಾನಿ, ಮಾರ್ಕ್ ಅಡೇರ್, ಬ್ಯಾರಿ ಮೆಕಾರ್ಥಿ, ಜೋಶುವಾ ಲಿಟಲ್, ಬೆಂಜಮಿನ್ ವೈಟ್.

  ಉತ್ತರಾಖಂಡದಿಂದ ರಾಜ್ಯದ ಚಾರಣಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ: ಸಿಎಂ ಸಿದ್ದರಾಮಯ್ಯ

  See also  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಪ್ರತಿಭಟನೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts