18.5 C
Bangalore
Monday, December 16, 2019

ಉಪವಾಸ ಸತ್ಯಾಗ್ರಹ ಕೈಬಿಡುವಂತೆ ಹಾರ್ದಿಕ್​ಗೆ ಎಚ್​ಡಿಡಿ ಸೇರಿ ಹಲವು ನಾಯಕರ ಮನವಿ

Latest News

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಕಾಲೇಜ್ ಆವರಣದಲ್ಲಿ ಮದ್ಯದ ಸದ್ದು

ಮೊಳಕಾಲ್ಮೂರು: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜಿನ ಆವರಣ ಭದ್ರತೆ ಕೊರತೆಯ ಕಾರಣಕ್ಕೆ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದೆ. ಈಚೆಗೆ ಕೆಲ ಕಿಡಿಗೇಡಿಗಳು ಕಾಲೇಜಿನ ಆವರಣದಲ್ಲಿರುವ...

<< ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಲು ಪತ್ರ >>

ಅಹಮದಾಬಾದ್: ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪಾಟೀದಾರ್​ ಮೀಸಲು ಹೋರಾಟ ಸಮಿತಿ ಮುಖಂಡ ಹಾರ್ದಿಕ್​ ಪಟೇಲ್​ ಅವರಿಗೆ ಎಚ್.ಡಿ.ದೇವೇಗೌಡ, ಅಖಿಲೇಶ್​ ಯಾದವ್​ ಸೇರಿ ಹಲವು ರಾಜಕೀಯ ಮುಖಂಡರು ಬೆಂಬಲ ನೀಡಿದ್ದಾರೆ. ಅಲ್ಲದೆ, ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುವಂತೆ ಸಲಹೆಯನ್ನೂ ನೀಡಿದ್ದಾರೆ.

ಪಾಟೀದಾರ್ ಸಮುದಾಯದವರಿಗೆ ಸರ್ಕಾರಿ ಕೆಲಸ ಹಾಗೂ ಶಿಕ್ಷಣದಲ್ಲಿ ಮೀಸಲಾತಿ, ಕೃಷಿ ಸಾಲಮನ್ನಾಕ್ಕೆ ಆಗ್ರಹಿಸಿ ಹಾರ್ದಿಕ್​ ಪಟೇಲ್​ ಅವರು ಆ.25ರಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು ಈಗಾಗಲೇ ಅಸ್ವಸ್ಥರಾಗಿದ್ದಾರೆ. ಅವರಿಗೆ ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಎಚ್​.ಡಿ.ದೇವೇಗೌಡ ಅವರು ಪತ್ರ ಬರೆದಿದ್ದು, ನಿಮ್ಮ ಆರೋಗ್ಯದ ದೃಷ್ಟಿಯಿಂದ ದಯವಿಟ್ಟು ಉಪವಾಸ ಸತ್ಯಾಗ್ರಹ ಕೊನೆಗೊಳಿಸಿ ಎಂದು ಮನವಿ ಮಾಡಿದ್ದಾರೆ.

ಪ್ರಧಾನಿ ಮಧ್ಯಸ್ಥಿಕೆಗೆ ಮನವಿ

ಮತ್ತೊಂದು ಪತ್ರವನ್ನು ಪ್ರಧಾನಿ ಮೋದಿಯವರಿಗೆ ಬರೆದಿದ್ದು, ಹಾರ್ದಿಕ್​ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಕೂಡಲೇ ಮಧ್ಯ ಪ್ರವೇಶ ಮಾಡಿ ಎಂದು ಒತ್ತಾಯಿಸಿದ್ದಾರೆ. ಹಾಗೇ ಹಾರ್ದಿಕ್​ ಸತ್ಯಾಗ್ರಹ ಕೊನೆಗೊಳಿಸಲು ಕ್ರಮ ಕೈಗೊಂಡು ಅವರ ಬೇಡಿಕೆಯನ್ನು ಈಡೇರಿಸುವಂತೆ ಕೇಂದ್ರವನ್ನು ಒತ್ತಾಯಿಸಿ ಎಂದು ಗುಜರಾತ್​ ಮುಖ್ಯಮಂತ್ರಿ ವಿಜಯ್​ ರುಪಾಣಿಯವರಿಗೂ ಹೇಳಿದ್ದಾರೆ ಎನ್ನಲಾಗಿದೆ.

ಉಪವಾಸ ಸತ್ಯಾಗ್ರಹದ ಹಾದಿ ತುಳಿದ ಹಾರ್ದಿಕ್​ ಪಟೇಲ್​ ಅವರ ಧೈರ್ಯ, ಆತ್ಮಸ್ಥೈರ್ಯವನ್ನು ಹೊಗಳಿದ ಎಚ್​ಡಿಡಿ “ಹಾರ್ದಿಕ್ ಅವರೇ ನೀವು ಇನ್ನೂ ಯುವಕರು. ನಿಮ್ಮ ಸೇವೆ ದೇಶಕ್ಕೆ ಬೇಕು. ನೀವಿನ್ನೂ ಹಲವು ಹೋರಾಟಗಳನ್ನು ಮಾಡುವುದು ಇದೆ. ನಿಮ್ಮ ಆರೋಗ್ಯ ಈಗಾಗಲೇ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಕೂಡಲೇ ಉಪವಾಸವನ್ನು ಅಂತ್ಯಗೊಳಿಸಿ. ನಿಮ್ಮ ಬೇಡಿಕೆಗಳನ್ನು ಪಡೆಯಲು ನಡೆಸುತ್ತಿರುವ ಹೋರಾಟಕ್ಕೆ ನಾವೆಲ್ಲ ಬೆಂಬಲ ನೀಡುತ್ತೇವೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

ಅಲ್ಲದೆ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್​ ಯಾದವ್​ ಕೂಡ ಉಪವಾಸ ಸತ್ಯಾಗ್ರಹ ಕೈಬಿಡುವಂತೆ ಹಾರ್ದಿಕ್ ಗೆ ಮನವಿ ಮಾಡಿದ್ದು ಈ ಕುರಿತು ಟ್ವೀಟ್​ ಮಾಡಿದ್ದಾರೆ. ಜನರಿಗೆ ನಿಮ್ಮ ನಾಯಕತ್ವದ ಅಗತ್ಯವಿದೆ. ನಿಮ್ಮನ್ನು ನಂಬಿಕೊಂಡು ತುಂಬ ಜನ ಇದ್ದಾರೆ ಎಂದಿದ್ದಾರೆ.
ಹಾರ್ದಿಕ್ ಪಟೇಲ್​ ಅವರಿಗೆ ನಮ್ಮ ಬೆಂಬಲ ಸದಾ ಇರುತ್ತದೆ. ಅವರಿಗೆ ದೇವರು ಶಕ್ತಿ ಕೊಡಲಿ. ಎಲ್ಲ ರೈತರು, ಸಮಾಜದವರೂ ಹಾರ್ದಿಕ್ ಅವರ ಜತೆಗಿದ್ದೇವೆ ಎಂದು ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಟ್ವೀಟ್​ ಮಾಡುವ ಮೂಲಕ ತಿಳಿಸಿದ್ದಾರೆ.

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...