More

    ಭಾರತ್ ಜೋಡೋ ಯಾತ್ರೆಯಿಂದ ಕಾಂಗ್ರೆಸ್‌ಗೆ ಚೈತನ್ಯ

    ಹರಿಹರ: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಐಕ್ಯತಾ ಯಾತ್ರೆ ಕಾಂಗ್ರೆಸ್ ಪಕ್ಷದಲ್ಲಿ ಹೊಸ ಚೈತನ್ಯ ತಂದಿದೆ ಎಂದು ಎಐಸಿಸಿ ಕಾರ್ಯದರ್ಶಿ, ಕರ್ನಾಟಕ ಉಸ್ತುವಾರಿ ಮಯೂರ್ ಜಯಕುಮಾರ್ ತಿಳಿಸಿದರು.

    ನಗರದ ಎಚ್.ಕೆ.ವೀರಪ್ಪ ಕಲ್ಯಾಣ ಮಂಟಪದಲ್ಲಿ ಭಾನುವಾರ ಕಾಂಗ್ರೆಸ್ ಪಕ್ಷದ ಹಮ್ಮಿಕೊಂಡಿದ್ದ ಭಾರತ್ ಜೋಡೋ ಐಕ್ಯತಾ ಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

    ಕೇರಳದದಿಂದ ಆರಂಭವಾಗಿರುವ 3570 ಕಿ.ಮೀ. ದೂರದ ಭಾರತ್ ಜೋಡೋ ಯಾತ್ರೆಗೆ ಕೇರಳ ಮತ್ತು ತಮಿಳುನಾಡಿನಲ್ಲಿ ಅಭೂತಪೂರ್ವ ಬೆಂಬಲ ಸಿಕ್ಕಿದ್ದು, ಸೆ. 30ಕ್ಕೆ ಗುಂಡ್ಲುಪೇಟೆಯ ಮೂಲಕ ರಾಜ್ಯಕ್ಕೆ ಪ್ರವೇಶಿಸಲಿರುವ ಈ ಯಾತ್ರೆ ಅ. 12ಕ್ಕೆ ದಾವಣಗೆರೆ ಜಿಲ್ಲೆಗೆ ಆಗಮಿಸಲಿದೆ ಎಂದು ಮಾಹಿತಿ ನೀಡಿದರು.

    ಶಾಸಕ ಎಸ್.ರಾಮಪ್ಪ ಮಾತನಾಡಿ, ಅಭಿವೃದ್ಧಿ ಕಡೆಗಣಿಸಿರುವ ಭ್ರಷ್ಟ ಬಿಜೆಪಿ ಆಳ್ವಿಕೆಯ ವಿರುದ್ಧ ಜನರು ಸಾಕಾಗಿದ್ದಾರೆ ಎಂದರು.

    ಪಕ್ಷದ ಜಿಲ್ಲಾಧ್ಯಕ್ಷ ಎಚ್.ಬಿ.ಮಂಜಪ್ಪ ಮಾತನಾಡಿ, ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಅಭೂತಪೂರ್ವ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಅ. 12ಕ್ಕೆ ಹೊನ್ನಾಳಿ ಮೂಲಕ ಜಿಲ್ಲೆಗೆ ಆಗಮಿಸುವ ಭಾರತ್ ಜೋಡೋ ಯಾತ್ರೆ ಅ. 14ರಂದು ದಾವಣಗೆರೆಗೆ ಬರಲಿದೆ. ಜಿಲ್ಲೆಯ ಎಲ್ಲ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಲ್ಳುವ ಮೂಲಕ ಯಾತ್ರೆಗೆ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದರು.

    ಕಾಂಗ್ರೆಸ್ ಪಕ್ಷದ ವೀಕ್ಷಕಿ ಕವಿತಾ ರೆಡ್ಡಿ, ಉಸ್ತುವಾರಿ ಅಮೃತೇಶಸ್ವಾಮಿ, ವಿಜಯಕುಮಾರ್, ಜಿಲ್ಲಾ ವಕ್ತಾರ ಎಂ.ನಾಗೇಂದ್ರಪ್ಪ, ಎ. ಗೋವಿಂದರೆಡ್ಡಿ, ಕುಂಬಳೂರು ವಿರೂಪಾಕ್ಷಪ್ಪ, ನಗರಸಭೆ ಸದಸ್ಯರಾದ ಎಂ.ಎಸ್.ಬಾಬುಲಾಲ್, ಅಬ್ದುಲ್ ಅಲೀಮ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್.ಬಿ. ಹನುಮಂತಪ್ಪ, ಎಂ.ಬಿ.ಅಬಿದಾಲಿ, ನೇತ್ರಾವತಿ ಪ್ಯಾಟಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts