ಹರಿಹರ: ರೈತ ವಿರೋಧಿ ರಾಜ್ಯ ಕಾಂಗ್ರೆಸ್ ಸರ್ಕಾರದ ಲ್ಯಾಂಡ್ ಜಿಹಾದ್ ಹಾಗೂ ವಕ್ಫ್ ಅಕ್ರಮ ವಿರೋಧಿಸಿ ಹರಿಹರ ತಾಲೂಕು ಭಾರತೀಯ ಜನತಾ ಪಕ್ಷದಿಂದ ಶಾಸಕ ಬಿ.ಪಿ.ಹರೀಶ್ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ಗ್ರೇಡ್-2 ತಹಸೀಲ್ದಾರ್ ಪುಷ್ಪಾವತಿ ಅವರಿಗೆ ಮನವಿ ಸಲ್ಲಿಸಲಾಯಿತು.
ನಗರದ ಹಳೇ ತರಕಾರಿ ಮಾರುಕಟ್ಟೆಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ, ಶಿವಮೊಗ್ಗ ಮುಖ್ಯ ರಸ್ತೆಯ ಮೂಲಕ ರಾಣಿ ಚನ್ನಮ್ಮ ವೃತ್ತ, ಗಾಂಧಿ ವೃತ್ತ ಮೂಲಕ ತಾಲೂಕು ಕಚೇರಿಗೆ ತಲುಪಿತು. ಮೆರವಣಿಗೆಯುದ್ದಕ್ಕೂ ರಾಜ್ಯ ಸರ್ಕಾರ, ಮುಖ್ಯಮಂತ್ರಿ, ವಕ್ಫ್ ಸಚಿವರ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನೆಯಲ್ಲಿ ನಗರ ಘಟಕ ಅಧ್ಯಕ್ಷ ಅಜಿತ್ ಸಾವಂತ್, ಗ್ರಾಮಾಂತರ ಘಟಕ ಅಧ್ಯಕ್ಷ ಎಂ.ಪಿ. ಲಿಂಗರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಣ್ಣೇಶ್ ಐರಣಿ, ನಗರಸಭಾ ಸದಸ್ಯ ಆಟೋ ಹನುಮಂತಪ್ಪ, ಪ್ರಧಾನ ಕಾರ್ಯದರ್ಶಿಗಳಾದ ತುಳಜಪ್ಪ ಭೂತೆ, ಮಂಜನಾಯ್ಕ, ಮಾಹಾಂತೇಶ್, ವೀರೇಶ್, ಮುಖಂಡರಾದ ರಾಜು ರೋಖಡೆ, ಪರಶುರಾಮ್ ಕಾಟ್ವೆ, ಸುನೀಲ್, ಗಿರೀಶ್, ರೂಪಾ ಕಾಟ್ವೆ, ಸಾಕ್ಷಿ ಸಿಂಧೆ, ರೂಪಾ ಶಶಿಕಾಂತ್, ರವಿ ತಾವರಾಗಿ, ರಾಜು ಐರಣಿ, ಸಂತೋಷ್ ಇತರರಿದ್ದರು.