More

    ಬೇಡಿಕೆ ಈಡೇರಿಕೆಗೆ ಸರ್ಕಾರಿ ನೌಕರರ ಆಗ್ರಹ

    ಹರಿಹರ: ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹರಿಹರ ತಾಲೂಕು ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಶಾಸಕ ಎಸ್.ರಾಮಪ್ಪ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.

    ಕೇಂದ್ರ ಸರ್ಕಾರಿ ನೌಕರರಂತೆ ನಮಗೂ ಸಮಾನ ವೇತನ ಹಾಗೂ ಭತ್ಯೆ ಜಾರಿಗೊಳಿಸಬೇಕು. ನೌಕರರ ಹಿತದೃಷ್ಟಿಯಿಂದ ಪ್ರತಿ 5 ವರ್ಷಗಳಿಗೊಮ್ಮೆ ವೇತನ ಹಾಗೂ ಭತ್ಯೆ ಪರಿಷ್ಕರಿಸಬೇಕೆಂದು ಆಗ್ರಹಿಸಿದರು.

    ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಪದ್ಧತಿ ಮುಂದುವರಿಸಬೇಕು, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು, ಪ್ರಾಥಮಿಕ ಶಾಲೆಯಲ್ಲಿನ ಪದವೀಧರ ಶಿಕ್ಷಕರ ಅನುಭವ ಮತ್ತು ವಿದ್ಯಾರ್ಹತೆ ಪರಿಗಣಿಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಲ್ಲದೆ ಪದೋನ್ನತಿ ನೀಡಬೇಕು, ಶಿಕ್ಷಕರ ವರ್ಗಾವಣೆ ನೀತಿಯಲ್ಲಿನ ನ್ಯೂನತೆ ಸರಿಪಡಿಸಬೇಕು, ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಸಿಎಂ ಮೇಲೆ ಒತ್ತಡ ಹಾಕಬೇಕು ಎಂದು ಶಾಸಕರಲ್ಲಿ ಮನವಿ ಮಾಡಿದರು.

    ನೌಕರರ ಸಂಘದ ತಾಲೂಕು ಅಧ್ಯಕ್ಷ ರೇವಣಸಿದ್ದಪ್ಪ ಅಂಗಡಿ, ಕಾರ್ಯದರ್ಶಿ ಡಿ.ಟಿ.ಮಂಜಪ್ಪ, ಖಜಾಂಚಿ ಪಿ.ಶಿವಮೂರ್ತಿ, ಗೌರವಾಧ್ಯಕ್ಷ ಎಂ.ಉಮ್ಮಣ್ಣ, ವಿಜಯ ಮಹಾಂತೇಶ್, ಡಿ.ಟಿ.ತಿಪ್ಪಣ್ಣರಾಜು, ಡಿ.ಎಂ.ಮಂಜುನಾಥಯ್ಯ, ಎಚ್.ಚಂದ್ರಪ್ಪ, ಪ್ರಕಾಶ್, ಯು.ಆರ್.ರಮೇಶ್, ಜಿ.ಎಚ್.ಶಿವಕುಮಾರ್, ಶರಣಕುಮಾರ ಹೆಗಡೆ, ಗದಿಗೆಪ್ಪ ವೈ.ಹಳೇಮನಿ, ಬಿ.ಚಂದ್ರಪ್ಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts