More

    ಹೆಡ್ಗೇವಾರ್‌ಗೆ ರಣಹೇಡಿ ಎಂದ ಹರಿಪ್ರಸಾದ್

    ಶಿವಮೊಗ್ಗ: ಕೇಶವ್ ಬಲಿರಾಮ್ ಹೆಡ್ಗೇವಾರ್ ತರಹದ ಹೇಡಿಗಳನ್ನು ನಮ್ಮ ಮಕ್ಕಳ ಪಠ್ಯದಲ್ಲಿರಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಘ ಪರಿವಾರದ ಸಿದ್ಧಾಂತಗಳೂ ಯಾವುದೇ ಇಲಾಖೆಯಲ್ಲಿ ತೂರಲು ಬಿಡುವುದಿಲ್ಲ. ಹೆಡ್ಗೇವಾರ್ ತರಹದ ರಣಹೇಡಿಗಳ ಪಠ್ಯ ಇನ್ಮುಂದೆ ಪಠ್ಯಪುಸ್ತಕಗಳಲ್ಲಿ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
    ಬಿಜೆಪಿ ಅನೈತಿಕ ಸರ್ಕಾರ ಮಾಡಿದ ಮೇಲೆ ರಾಜ್ಯದಲ್ಲಿ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದೆ. ನಾಲ್ಕು ವರ್ಷ ಇವರ ಆಡಳಿತ ನೋಡಿದ್ದೇನೆ. ಕೃಷಿ, ಕಾರ್ಮಿಕ, ಶಿಕ್ಷಣ ಇಲಾಖೆಯಲ್ಲಿ ಸಂಪೂರ್ಣ ಕೇಸರೀಕರಣ ಮಾಡಲು ಹೊರಟಿದ್ದರು. ಭಾರತ ಸಾವಿರಾರು ವರ್ಷಗಳಿಂದಲೂ ಜಾತ್ಯಾತೀತ ರಾಷ್ಟ್ರವಾಗಿ ಉಳಿದುಕೊಂಡಿದೆ. ಇದನ್ನು ಬಿಜೆಪಿ ಬುಡಮೇಲು ಮಾಡಲು ಹೊರಟಿತ್ತು. ಎಲ್ಲೆಲ್ಲಿ ಸಂಘಪರಿವಾರದ ತತ್ವಸಿದ್ಧಾಂತಗಳನ್ನು ತೂರಲು ಹೊರಟಿದ್ದರೋ ಅದನ್ನು ಸರಿಪಡಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತದೆ ಎಂದರು.
    ಹೆಡ್ಗೇವಾರ್ ಸ್ವಾತಂತ್ರ್ಯ ಹೋರಾಟಗಾರ ಎಂದು ಸಾಬೀತು ಮಾಡಲಿ ಎಂದು ಸವಾಲು ಹಾಕಿದ ಅವರು, ಬ್ರಿಟೀಷರ ಕ್ಷಮಾಪಣೆ ಕೇಳಿದ ನಕಲಿ ಸ್ವಾತಂತ್ರ್ಯ ಹೋರಾಟಗಾರಿಗೆಲ್ಲ ಮನ್ನಣೆ ನೀಡಲು ಸಾಧ್ಯವಿಲ್ಲ. ಯಾರೋ ಬಿಜೆಪಿಯ ಕೆಲವರು ನಾಥುರಾಮ್ ಗೋಡ್ಸೆ ಕೂಡ ಸ್ವಾತಂತ್ರ್ಯ ಹೋರಾಟಗಾರ ಎಂದಿದ್ದಾರೆ. ಅವರ ಸ್ವಾತಂತ್ರ್ಯ ಹೋರಾಟಗಾರರಿಗೆ ನಮಗೂ ವ್ಯತ್ಯಾಸವಿದೆ ಎಂದು ಕಿಡಿಕಾರಿದರು.

    ಬಿಜೆಪಿ ಅಥವಾ ಸಂಘಪರಿವಾರದವರು ಅವರದ್ದೇ ಆದ ಗ್ರಂಥಗಳಲ್ಲಿ ಆರು ಬಾರಿ ಕ್ಷಮಾಪಣಾ ಪತ್ರ ಕೊಟ್ಟಿರೋದಾಗಿ ಉಲ್ಲೇಖಿಸಿದ್ದಾರೆ. ಬ್ರಿಟೀಷರಿಗೆ ಯಾಕೆ ಕ್ಷಮಾಪಣಾ ಪತ್ರ ನೀಡಿದ್ದರು ಎಂದು ಸ್ಪಷ್ಟಪಡಿಸಬೇಕು. ಇಂತಹ ಹೇಡಿಗಳನ್ನು ಮಕ್ಕಳು ಓದುವ ಪಠ್ಯಪುಸ್ತಕದಲ್ಲಿ ಇಡಬಾರದು. ಬಿಜೆಪಿಯವರು ಅದನ್ನೇ ಚುನಾವಣೆ ಅಜೆಂಡಾ ಮಾಡಿಕೊಳ್ಳುವುದು ಬಹಳ ಸಂತೋಷ. ಆದರೆ ಅದನ್ನೇ ಮುಂದಿಟ್ಟುಕೊಂಡು ಮಕ್ಕಳ ಭವಿಷ್ಯದ ಜತೆ ಚೆಲ್ಲಾಟ ಆಡುವುದು ಸರಿಯಲ್ಲ ಎಂದು ಹರಿಪ್ರಸಾದ್ ಹೇಳಿದರು.

    ಬಿಜೆಪಿ ಶಾಂತಿ ನೆಲೆಸುವಂತೆ ಮಾಡಲಿ:
    ಕರಾವಳಿ, ಮಲೆನಾಡಿನಲ್ಲಿ ನೈತಿಕ ಪೊಲೀಸ್ ಗಿರಿ ಹೆಚ್ಚಿದೆ. ಭಜರಂಗದಳ ವಿರುದ್ಧ ನಾವು ಸಮರ ಸಾರಿದ್ದೆವು. ಬಿಜೆಪಿ ಅದನ್ನು ಅಜೆಂಡಾ ಮಾಡಿಕೊಂಡರೂ ಜನ ತಿರಸ್ಕರಿಸಿದರು. ರಾಜ್ಯದ ಜನತೆ ಸ್ಪಷ್ಟವಾಗಿ ತೀರ್ಪು ನೀಡಿದ್ದಾರೆ. ಇವನ್ನು ಬಿಟ್ಟು ಜನರಿಗೆ ಒಳಿತಾಗುವ ಕೆಲಸ ಬಿಜೆಪಿ ಮಾಡಬೇಕು. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಲೆ ನೀಡಬೇಕು ಎಂದು ಹರಿಪ್ರಸಾದ್ ಸಲಹೆ ನೀಡಿದರು.
    ಸಮರ್ಥರಿಗೆ ಸಚಿವ ಸ್ಥಾನ ಸಿಕ್ಕಿದೆಯಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆ ಬಗ್ಗೆ ನಾನು ಕಮೆಂಟ್ ಮಾಡುವುದಿಲ್ಲ. ನಾನೂ ಸಚಿವ ಸ್ಥಾನದ ಬಗ್ಗೆ ಆಸಕ್ತಿ ಹೊಂದಿಲ್ಲ. ಗ್ಯಾರಂಟಿಗಳ ಬಗೆ ಜನರಲ್ಲಿ ಗೊಂದಲ ಬೇಡ. ಜುಲೈ ಹೊತ್ತಿಗೆ ಎಲ್ಲವೂ ಬಗೆಹರಿಯಲಿದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts