More

    ಭಾರತ್ ಗೌರವ್ ಯಾತ್ರೆ ಆಗಸ್ಟ್ ಕೊನೆಗೆ ಆರಂಭ

    ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಮಾಹಿತಿ

    ಹರಪನಹಳ್ಳಿ: ರಾಜ್ಯದ ಯಾತ್ರಿಕರನ್ನು ಕಾಶಿಗೆ ಕರೆದೊಯ್ಯುವ ಭಾರತ್ ಗೌರವ್ ಯಾತ್ರೆ ರೈಲನ್ನು ಮೈಸೂರಿನಲ್ಲಿ ಮಾರ್ಪಾಡು ಮಾಡುವ ಕೆಲಸ ಅಂತಿಮ ಹಂತದಲ್ಲಿದ್ದು ಆಗಸ್ಟ್ ಕೊನೆಯ ವಾರದಲ್ಲಿ ಮೊದಲ ರೈಲು ಪ್ರಯಾಣ ಆರಂಭವಾಗುವ ಸಾಧ್ಯತೆ ಇದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದರು. ಐಆರ್‌ಟಿಸಿಯೊಂದಿಗೆ ಒಪ್ಪಂದ ಮಾಡಿಕೊಳ್ಳುವ ಸಂಬಂಧ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಈ ಹಿಂದೆ ಮಾತುಕತೆ ನಡೆಸಲಾಗಿದೆ. ಸಿ.ದರ್ಜೆ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ‘ಕಾಯಕಲ್ಪ’ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಆಯಾ ಜಿಲ್ಲಾಧಿಕಾರಿಗಳಿಂದ ಪಟ್ಟಿ ಪಡೆದುಕೊಳ್ಳಲಾಗಿದೆ. ಕೆಲವೇ ದಿನಗಳಲ್ಲಿ ತುರ್ತು ಅಗತ್ಯ ಇರುವ ದೇವಸ್ಥಾನಗಳ ಜೀರ್ಣೋದ್ಧಾರಕ್ಕಾಗಿ ಅನುದಾನ ಬಿಡುಗಡೆ ಮಾಡಲಾಗುವುದು. ದಾನಿಗಳ ನೆರವಿಗೂ ಅವಕಾಶವಿದೆ ಎಂದರು.

    ತಾಲೂಕಿನ ಉಚ್ಛಂಗಿದುರ್ಗಕ್ಕೆ ಬರುವ ಯಾತ್ರಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ‘ದೈವ ಸಂಕಲ್ಪ’ ಯೋಜನೆಯಡಿ ಸೇರಿಸಲಾಗಿದೆ. ಎರಡನೇ ಪಟ್ಟಿಯಲ್ಲಿ ಈ ಬಗ್ಗೆ ಪ್ರಕಟಿಸಲಾಗುವುದು. ಯಾತ್ರಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ 2.5 ಕೋಟಿ ರೂ. ವೆಚ್ಚದಲ್ಲಿ ವಸತಿ ಗೃಹ ನಿರ್ಮಾಣಕ್ಕೆ ಅನುಮತಿ ನೀಡಲಾಗಿದೆ. ಈ ಬಗ್ಗೆ ವಿಸ್ತೃತ ಯೋಜನೆ ರೂಪಿಸುವಂತೆ ಡಿಸಿಗೆ ಸೂಚಿಸಲಾಗಿದೆ. ಯಾತ್ರಾರ್ಥಿಗಳು ಬೆಟ್ಟ ಹತ್ತುವಾಗ ಆರೋಗ್ಯ ಸಮಸ್ಯೆ ಎದುರಾದರೆ ಚಿಕಿತ್ಸೆ ಒದಗಿಸಲು ಶುಶ್ರೂಷಕರನ್ನು ನೇಮಿಸಲು ವಿನಂತಿಸಿದ್ದಾರೆ. ಈ ಬಗ್ಗೆ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

    ಪ್ರವೀಣ್ ನೆಟ್ಟಾರು ಮತ್ತಿತರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ತಪ್ಪಿಸ್ಥರಿಗೆ ಕಾನೂನು ರೀತ್ಯಾ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts