More

    ಬಿಜೆಪಿ ಭ್ರಷ್ಟಾಚಾರದಿಂದ ಮತದಾರರು ಹೈರಾಣ- ಮಾಜಿ ಶಾಸಕ ಎಚ್.ಪಿ.ರಾಜೇಶ್ ಹೇಳಿಕೆ

    ಹರಪನಹಳ್ಳಿ: ಜಗಳೂರಿನಲ್ಲಿ ಮಾ.10 ರಂದು ನಡೆಯಲಿರುವ ಪ್ರಜಾಧ್ವನಿ ಯಾತ್ರೆ, ಗ್ಯಾರಂಟಿ ಕಾರ್ಡ್ ವಿತರಣೆ ನಡೆಯಲಿದ್ದು ಮಾಜಿ ಸಿಎಂ ಸಿದ್ದರಾಮಯ್ಯ ಬರಲಿದ್ದಾರೆ ಎಂದು ಮಾಜಿ ಶಾಸಕ ಎಚ್.ಪಿ.ರಾಜೇಶ್ ಹೇಳಿದರು.

    ತಾಲೂಕಿನ ಕಮ್ಮತ್ತಹಳ್ಳಿ ಗ್ರಾಮದಲ್ಲಿ ಭಾನುವಾರ ಅರಸೀಕೆರೆ ಬ್ಲಾಕ್ ಕಾಂಗ್ರೆಸ್ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಅರಸೀಕೆರೆ ಹೋಬಳಿಯ 7 ಗ್ರಾಪಂ ವ್ಯಾಪ್ತಿಯ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸಬೇಕು. ಕಾರ್ಯಚಟುವಟಿಕೆಗಳಿಗಾಗಿ ಕಮ್ಮತ್ತಹಳ್ಳಿಯಲ್ಲಿ ಪಕ್ಷದ ಕಚೇರಿ ಆರಂಭಿಸಲಾಗುವುದು ಎಂದರು.

    ಬಿಜೆಪಿ ಆಡಳಿತಾವಧಿಯಲ್ಲಿ ನಡೆದ ಭ್ರಷ್ಟಾಚಾರವನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು. ಸಿರಿಗೆರೆ ಶ್ರೀಗಳ ಆಶೀರ್ವಾದದಿಂದ 57 ಕೆರೆ ತುಂಬಿಸುವ ಯೋಜನೆ ಸಾಕಾರಗೊಂಡಿದೆ. ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಕೆರೆಗಳು ಭರ್ತಿಯಾಗಲು ವಿಳಂವಾಗಿದೆ. 7 ಗ್ರಾಪಂ ವ್ಯಾಪ್ತಿ 4 ಕೆರೆಗಳು ಭರ್ತಿಯಾಗಲಿವೆ ಎಂದರು.

    ಕೆಪಿಸಿಸಿ ತಾಲೂಕು ಉಸ್ತುವಾರಿ ಕಲ್ಲೇಶ್ ರಾಜ್ ಪಟೇಲ್ ಮಾತನಾಡಿ, ರಾಜ್ಯದಲ್ಲಿ ಡಿಕೆ ಶಿವಕುಮಾರ್ ದಕ್ಷಿಣ ಕರ್ನಾಟಕದಲ್ಲಿ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಉತ್ತರ ಕರ್ನಾಟಕದಲ್ಲಿ ಪ್ರಜಾಧ್ವನಿ ಯಾತ್ರೆಯ ಪ್ರವಾಸ ಕೈಗೊಂಡಿದ್ದು, 150 ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಆಗಲಿದೆ ಎಂದರು. ಕೆಪಿಸಿಸಿ ಎಸ್‌ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ ಮಾತನಾಡಿ, ಕಾರ್ಯಕರ್ತರು ಮಾರಾಟವಾಗದೆ ಪಕ್ಷ ನಿಷ್ಠೆ, ಪ್ರಾಮಾಣಿಕತೆಯಿಂದ ದುಡಿಯಬೇಕು ಎಂದರು.

    ಭಾರತ್ ಜೊಡೋ ಪಾದಯಾತ್ರೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ ಕಲ್ಲೇಶ್ ರಾಜ್ ಪಟೇಲ್ ಅವರನ್ನು ಸನ್ಮಾನಿಸಲಾಯಿತು. ಬಾಲೇನಹಳ್ಳಿ ಹಾಗೂ ಕಮ್ಮತ್ತಹಳ್ಳಿ ಗ್ರಾಮದ 6 ಜನ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರಿದರು. ಪ್ರಮುಖರಾದ ಪಲ್ಲಾಗಟ್ಟೆ ಶೇಖರಪ್ಪ, ಕವಲಹಳ್ಳಿ ರವಿಕುಮಾರ್, ಸಲಾಂ ಸಾಹೇಬ್, ಮಾಂತೇಶ್ ನಾಯ್ಕ, ತೌಡೂರು ಕೆಂಚಪ್ಪ, ಬಸವಾಪುರ ರವಿಚಂದ್ರ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts