More

    ಹರಪನಹಳ್ಳಿ ಅಭಿವೃದ್ಧಿಗೆ 100 ಕೋಟಿ ರೂ.

    ಹರಪನಹಳ್ಳಿ: ಬಿಜೆಪಿ ಸರ್ಕಾರ ಬಂದ ನಂತರ ಹೆಚ್ಚು ಅನುದಾನ ಬರುತ್ತಿದೆ. ಬಸವರಾಜ ಬೊಮ್ಮಾಯಿ ಸಿಎಂ ಆದ ಮೇಲೆ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಮೂರು ಸಾವಿರ ಕೋಟಿ ರೂ. ಅನುದಾನ ಮೀಸಲಿಟ್ಟಿದ್ದಾರೆ ಎಂದು ಶಾಸಕ ಜಿ.ಕರುಣಾಕರರೆಡ್ಡಿ ಹೇಳಿದರು.

    ತಾಲೂಕು ಆಡಳಿತ ಸೌಧದಲ್ಲಿ ದ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ತಾಲೂಕಿನ ಅಭಿವೃದ್ಧಿಗೆ ಇಲ್ಲಿಯವರೆಗೂ 100 ಕೋಟಿ ರೂ. ಅನುದಾನ ಬಂದಿದೆ. ಇದರಲ್ಲಿ ರಸ್ತೆ, ಹಾಸ್ಟೆಲ್ ನಿರ್ಮಾಣ, ಕುಡಿಯುವ ನೀರು ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಕೈಗೊಂಡಿದ್ದೇವೆ ಎಂದರು. ಸಾಹಿತಿ ಇಸ್ಮಾಯಿಲ್ ಎಲಿಗಾರ ಉಪನ್ಯಾಸ ನೀಡಿದರು. ಕಂದಾಯ ಉಪವಿಭಾಗಾಧಿಕಾರಿ ಟಿ.ವಿ.ಪ್ರಕಾಶ, ತಹಸೀಲ್ದಾರ ಡಾ.ಶಿವಕುಮಾರ ಬಿರಾದಾರ, ಡಿವೈಎಸ್ಪಿ ವಿ.ಎಸ್.ಹಾಲಮೂರ್ತಿರಾವ್ , ಸಿಪಿಐ ನಾಗರಾಜ ಕಮ್ಮಾರ, ಅರಣ್ಯಾಧಿಕಾರಿ ಮಲ್ಲಪ್ಪ, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts