More

    ರೈತರಿಗೆ ಸೌಲಭ್ಯ ತಲುಪಿಸಲು ಪ್ರಯತ್ನ

    ಹರಪನಹಳ್ಳಿ: ತಾಲೂಕಿನ ರೈತರಿಗೆ ಸರ್ಕಾರದ ಹಾಗೂ ಬ್ಯಾಂಕ್‌ನಿಂದ ಸಿಗುವ ಸೌಲಭ್ಯಗಳನ್ನು ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಬಿಡಿಸಿಸಿ ಬ್ಯಾಂಕ್‌ನ ನೂತನ ನಿರ್ದೇಶಕ ಅರಸೀಕೆರೆಯ ವೈ.ಅಣ್ಣಪ್ಪ ಹೇಳಿದರು.

    ಪಟ್ಟಣದ ವಾಲ್ಮೀಕಿ ನಗರದ ಹಾಲಸ್ವಾಮಿ ಮಠದಲ್ಲಿ ಸೋಮವಾರ ಸನ್ಮಾನ ಸ್ವೀಕರಿಸಿ ಮಾತನಾಡಿದರು. ನಾನು ಗ್ರಾಮ, ತಾಲೂಕು ಮಟ್ಟದಲ್ಲಿ ಸಹಕಾರ ಕ್ಷೇತ್ರದಲ್ಲಿ ಈಗಾಗಲೇ ಕೆಲಸ ಮಾಡಿದ್ದೇನೆ. ಇದೀಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ಗೆ ಆಯ್ಕೆಯಾಗಿರುವುದು ಸಂತಸ ತಂದಿದೆ ಎಂದ ಅವರು, ನನಗೆ 13 ರಿಂದ 14 ಮತಗಳು ಬರುವ ನಿರೀಕ್ಷೆ ಇತ್ತು, ಆದರೆ ನಿರೀಕ್ಷೆಗಿಂತ ಕಡಿಮೆ ವೋಟ್‌ಗಳು ಬಿದ್ದಿವೆ. ಮತದಾರರು ಕೈ ಬಿಟ್ಟರೂ ದೇವರು ಕೈ ಬಿಡಲಿಲ್ಲ ಎಂದು ಲಾಟರಿಯಲ್ಲಿ ಆಯ್ಕೆಯಾಗಿದ್ದಕ್ಕೆ ಉತ್ತರಿಸಿದರು.

    ನಾನು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದು, ಆ ನಿಟ್ಟಿನಲ್ಲಿ ಪ್ರಯತ್ನಿಸುವೆ. ರಾಜಕೀಯದಲ್ಲಿ ಒಂದೊಂದೇ ಮೆಟ್ಟಿಲು ಹತ್ತುತ್ತಿದ್ದು, ಮುಂದೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದರೂ ಅಚ್ಚರಿಯಿಲ್ಲ ಎಂದರು.

    ಹಾಲಸ್ವಾಮಿ ಮಠದ ವೀರಯ್ಯ ಹಾಲಸ್ವಾಮಿ, ಪುರಸಭೆ ಮಾಜಿ ಅಧ್ಯಕ್ಷ ಎಚ್.ಕೆ.ಹಾಲೇಶ, ಪಿಕಾರ್ಡ್ ಬ್ಯಾಂಕ್ ನಿರ್ದೇಶಕ ಪಿ.ಬಿ.ಗೌಡ, ವಾಲ್ಮೀಕಿ ಸಮಾಜದ ಸ್ಥಳೀಯ ಅಧ್ಯಕ್ಷ ಕೋರಿಶೆಟ್ಟಿ ಉಚ್ಚೆಂಗೆಪ್ಪ, ಟಿಎಪಿಸಿಎಂಎಸ್ ನಿರ್ದೇಶಕ ಗಿಡ್ಡಳ್ಳಿ ನಾಗರಾಜ, ಮುಖಂಡರಾದ ಪ್ರಶಾಂತ ಪಾಟೀಲ್, ಬಾಣದ ಅಂಜಿನಪ್ಪ, ನಿಚ್ಚವ್ವನಹಳ್ಳಿ ಗ್ರಾಪಂ ಅಧ್ಯಕ್ಷ ಆನಂದ, ಪುರಸಭೆ ಸದಸ್ಯ ರೊಕ್ಕಪ್ಪ, ಮುತ್ತಿಗೆ ಜಂಬಣ್ಣ, ಸಾಲಿ ಹಾಲಪ್ಪ, ದ್ಯಾಮಜ್ಜಿ ಹನುಮಂತಪ್ಪ, ಕೆಂಗಳ್ಳಿ ಪ್ರಕಾಶ, ಚಿಗಟೇರಿ ಜಂಬಣ್ಣ, ಅರುಣ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts