More

    ವಂಚನೆ ತಡೆಗೆ ಕಾನೂನು ರಚಿಸಿ- ಕಾಂಗ್ರೆಸ್‌ನ ಕಾರ್ಮಿಕ ವಿಭಾಗ ಒತ್ತಾಯ

    ಹರಪನಹಳ್ಳಿ: ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಕಾರ್ಯಕರ್ತರ ಸಮಾವೇಶ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ಜ.7ರಂದು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲೆಯ ಕಾರ್ಮಿಕ ವಿಭಾಗದ ಅಧ್ಯಕ್ಷ ಎ.ಮೂಸಾ ಸಾಹೇಬ್ ಹೇಳಿದರು.

    ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪಟ್ಟಣದ ವೀರಭದ್ರೇಶ್ವರ ದೇವಸ್ಥಾನ ಮುಂಭಾಗ ನಡೆಯಲಿರುವ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಪ್ರದಾನ ಕಾರ್ಯದರ್ಶಿ ನಸರುಲ್ಲಾ, ಕಾರ್ಮಿಕ ಘಟಕದ ರಾಜ್ಯಧ್ಯಕ್ಷ ಪುಟ್ಟಸ್ವಾಮಿಗೌಡ, ಹಡಗಲಿ ಶಾಸಕ ಪಿ.ಟಿ ಪರಮೇಶ್ವರನಾಯ್ಕ, ರಾಜಸಭಾ ಸದಸ್ಯ ನಸೀರ್‌ಹುಸೇನ್ ವಿದಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬರ್, ಕೆಪಿಸಿಸಿ ವಕ್ತಾರೆ ಕವಿತಾರೆಡ್ಡಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಲೂರು ಅಂಜಪ್ಪ, ಚಿಗಟೇರಿ ಬ್ಲಾಕ್ ಅಧ್ಯಕ್ಷ ಪ್ರೇಮ ಕುಮಾರ್, ಭಾಗವಹಿಸಲಿದ್ದಾರೆ ಎಂದರು.

    ರಾಜ್ಯದಲ್ಲಿ ವ್ಯಾಪಕ ಭ್ರಷ್ಟಚಾರ ನಡೆಸಿರುವ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಕೂಡಲೇ ವಜಾಗೊಳಿಸಬೇಕು. ಬಿಲ್ಡರ್‌ಗಳಿಂದ ಸಣ್ಣಗುತ್ತಿಗೆದಾರರ ಮೇಸ್ತ್ರಿಗಳಿಗೆ ಆಗುತ್ತಿರುವ ಹಣಕಾಸಿನ ವಂಚನೆ ತಡೆಗಟ್ಟಲು ವಿಶೇಷ ಕಾನೂನು ಜಾರಿ ಮಾಡಬೇಕು. ಪರಿಷ್ಕೃತಗೊಂಡಿರುವ ಪಿಂಚಣಿ, ಮದುವೆ, ಹಾಗೂ ಹೆರಿಗೆ ಸಹಾಯಧನವನ್ನು ಈ ಕೂಡಲೇ ಜಾರಿಗೊಳಿಸಬೇಕು. ಬಾಕಿ ಇರುವ ಎಲ್ಲ ಅರ್ಜಿಗಳನ್ನು ಕೂಡಲೇ ಇತ್ಯರ್ಥಗೊಳಿಸಬೇಕು ಎಂಬುದೂ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿ ಸಲ್ಲಿಸಲಾಗುವುದು ಎಂದರು.

    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಲೂರು ಅಂಜಪ್ಪ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಕಾರ್ಮಿಕರ ವಿಭಾಗದ ಕಾರ್ಯಕರ್ತರ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ರಾಷ್ಟ್ರೀಯ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದು, ಈ ಸಮಾವೇಶಕ್ಕೆ ಪಕ್ಷಾತೀತವಾಗಿ ಎಲ್ಲ ಕಾರ್ಮಿಕರು ಹಾಗೂ ಮುಂಚೂಣಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಳ್ಳಬೇಕು ಎಂದರು.

    ಜಿಲ್ಲಾ ಕಾರ್ಮಿಕ ವಿಭಾಗದ ಉಪಾಧ್ಯಕ್ಷ ಎಂ.ಕೆ ರಾಯಲ್ ಸಿದ್ಧಿಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಂತವೀರನಾಯ್ಕ, ಸಂಘಟನಾ ಕಾರ್ಯದರ್ಶಿ ಷಣ್ಮುಖಪ್ಪ, ತಾಲೂಕು ಅಧ್ಯಕ್ಷ ರಾಜುನಾಯ್ಕ, ಪುರಸಭಾ ಸದಸ್ಯ ಜಾಕೀರ್ ಸರ್‌ಕಾವಾಸ್, ತಾಲೂಕು ಉಪಾಧ್ಯಕ್ಷ ಗೌಸ್, ಮುಖಂಡರಾದ ಸೋಮಪ್ಪ, ಎಂ.ಮಾಬುಬಾಸಾ, ಎನ್‌ಎಸ್‌ಯುಐ ಘಟಕದ ಅಧ್ಯಕ್ಷ ಶ್ರೀಕಾಂತ್, ಅಜ್ಜಯ್ಯ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts