More

    ಹಾಸ್ಟೆಲ್ ಸೌಲಭ್ಯ ಒದಗಿಸಿ; ಎಐಎಸ್‌ಎಫ್ ನೇತೃತ್ವದಲ್ಲಿ ಅರಸೀಕೆರೆಯಲ್ಲಿ ಪ್ರತಿಭಟನೆ

    ಹರಪನಹಳ್ಳಿ: ಸರ್ಕಾರಿ ಹಾಸ್ಟೆಲ್ ಸೌಲಭ್ಯಕ್ಕಾಗಿ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಫೆಡರೇಷನ್ (ಎಐಎಸ್‌ಎಫ್) ನೇತೃತ್ವದಲ್ಲಿ ಸೋಮವಾರ ಅರಸೀಕೆರೆ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು.

    ಗ್ರಾಮದ ಸರ್ಕಾರಿ ಆಸ್ಪತ್ರೆ ವೃತ್ತದಿಂದ ಪ್ರಮುಖ ರಸ್ತೆಗಳ ಮೂಲಕ ನೂರಾರು ಪ್ರತಿಭಟನಾನಿರತ ವಿದ್ಯಾರ್ಥಿಗಳು ಘೋಷಣೆ ಕೂಗುತ್ತಾ ನಿಲ್ದಾಣದಲ್ಲಿ ಬಹಿರಂಗ ಸಭೆ ನಡೆಸಿ, ನಂತರ ಉಪತಹಸೀಲ್ದಾರ್ ಕೊಟ್ರಮ್ಮ, ಬಿಸಿಎಂ ಅಧಿಕಾರಿ ವಿಜಯಲಕ್ಷ್ಮೀ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಇಬ್ರಾಹಿಂ ಸಾಹೇಬ್ ಅವರಿಗೆ ಮನವಿ ಸಲ್ಲಿಸಿದರು.

    ಸಿಪಿಐ ತಾಲೂಕು ಕಾರ್ಯದರ್ಶಿ ಗುಡಿಹಳ್ಳಿ ಹಾಲೇಶ ಮಾತನಾಡಿ, ಅರಸೀಕೆರೆ ಹೋಬಳಿಯಲ್ಲಿ ವೃತ್ತಿಪರ ಕಾಲೇಜು, ಪಿಯುಸಿ, ಪದವಿ ಕಾಲೇಜುಗಳು ಆರಂಭವಾಗಿವೆ. ದಾಖಲಾತಿ ಏರಿಕೆಯಾಗುತ್ತಿವೆ. ಉನ್ನತ ಮಟ್ಟದ ಅಧಿಕಾರಿಗಳನ್ನು, ಶಾಸಕ, ಸಂಸದರನ್ನು ರಾಜ್ಯಕ್ಕೆ ಕೊಡುಗೆಯಾಗಿ ನೀಡಿದೆ. ಆದರೆ, ವಿದ್ಯಾರ್ಥಿಗಳಿಗೆ ಸುಸಜ್ಜಿತ ಹಾಸ್ಟೆಲ್‌ಗಳಿಲ್ಲದೆ ಇರುವುದು ವಿಷಾದದ ಸಂಗತಿ ಎಂದರು.

    ಎಐಎಸ್‌ಎಫ್ ರಾಜ್ಯ ಕಾರ್ಯದರ್ಶಿ ರಮೇಶ್ ನಾಯ್ಕ ಮಾತನಾಡಿ, ಹೋಬಳಿ ಕೇಂದ್ರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಮಾತ್ರವಿದೆ. ಎಲ್ಲ ವರ್ಗದ ವಿದ್ಯಾರ್ಥಿನಿಯರಿಗೆ, ಬಿಸಿಎಂ ಇಲಾಖೆಯ ವಸತಿ ನಿಲಯಗಳಿಲ್ಲ, ಪಕ್ಕದ ಹಳ್ಳಿಗಳಿಂದ ಸಮರ್ಪಕ ಸಾರಿಗೆ ಸೌಕರ್ಯವೂ ಇಲ್ಲ. ಮತ್ತೊಂದೆಡೆ ಸೂಕ್ತ ಹಾಸ್ಟೆಲ್ ಸೌಲಭ್ಯಗಳಿಲ್ಲದೆ ವಿದ್ಯಾರ್ಥಿಗಳು ದುಬಾರಿ ವೆಚ್ಚದಲ್ಲಿ ಶಿಕ್ಷಣ ಪಡೆಯುವ ಅನಿವಾರ್ಯತೆ ಎದುರಾಗಿದೆ. ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಬಿಸಿಎಂ ಮತ್ತು ಸಮಾಜಕಲ್ಯಾಣ ಇಲಾಖೆಯಡಿ ಸುಸಜ್ಜಿತ ಹಾಸ್ಟೆಲ್ ಸೌಲಭ್ಯ ಕಲ್ಪಿಸಬೇಕು. ಮಂಜೂರಾಗಿರುವ ಪಜಾತಿ ವಿದ್ಯಾರ್ಥಿನಿಯರ ವಸತಿ ನಿಲಯ ಕಟ್ಟಡಕ್ಕೆ ಶೀಘ್ರ ಶಂಕುಸ್ಥಾಪನೆ ನೆರವೇರಿಸಬೇಕು. ಇಲ್ಲವಾದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

    ಗ್ರಾಪಂ ಅಧ್ಯಕ್ಷೆ ರೇಖಾ, ವಕೀಲ ಕೊಟ್ರೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿ ಚಂದ್ರಪ್ಪ, ಸಂಸದ ವೈ.ದೇವೇಂದ್ರಪ್ಪ ನಿವಾಸದಲ್ಲಿ ಮನವಿ ಸಲ್ಲಿಸಲಾಯಿತು. ಡಿಎಸ್‌ಎಸ್ ಮುಖಂಡ ಕಬ್ಬಳ್ಳಿ ಮೈಲಪ್ಪ, ಪ್ರಗತಿ ಪರ ಹೊರಾಟಗಾರರಾದ ಕಬ್ಬಳ್ಳಿ ಬಸವರಾಜ್, ಬೂದಿಹಾಳ್ ಮೂಗಪ್ಪ, ಯರಬಳ್ಳಿ ಅಂಜಿನಪ್ಪ, ಶೇಖರಪ್ಪ, ಎಐಎಸ್ ಎಫ್ ರಾಜ್ಯ ಸಹಕಾರ್ಯದರ್ಶಿ ಮಾದಿಹಳ್ಳಿ ಮಂಜುನಾಥ್, ಎಂ.ಎಚ್.ಕೊಟ್ರಯ್ಯ, ತಾಲೂಕು ಸಂಚಾಲಕರಾದ ಡಿ.ಎಚ್.ಅರುಣ, ದೊಡ್ಡಬಸವರಾಜ್, ದರ್ಶನ್, ಚೈತ್ರ, ಶ್ವೇತಾ, ರೇಖಾ, ಲಕ್ಷ್ಮೀಬಾಯಿ, ಕಾವ್ಯಾ, ಗೀತಾಬಾಯಿ, ಸೌಜನ್ಯಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts