More

    ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಪ್ರಸ್ತಾವನೆ

    ಹರಪನಹಳ್ಳಿ: ಜನರನ್ನು ಕಚೇರಿಗೆ ಅಲೆದಾಡಿಸದೆ ಅಧಿಕಾರಿಗಳು ಶೀಘ್ರ ಕೆಲಸ ಮಾಡಿಕೊಡಬೇಕೆಂದು ಜಗಳೂರು ಶಾಸಕ ಎಸ್.ವಿ.ರಾಮಚಂದ್ರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

    ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹೊಸಕೋಟೆ ಹಳ್ಳದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕ್ಷೇತ್ರದ ಅರಸೀಕೆರೆ ಹೋಬಳಿ 7 ಗ್ರಾಮಪಂಚಾಯಿತಿ ವ್ಯಾಪ್ತಿ ಜನರ ಸಮಸ್ಯೆಗಳನ್ನು ಶೀಘ್ರ ಪರಿಹರಿಸಬೇಕು ಎಂದರು.

    ತಹಸೀಲ್ದಾರ್ ಡಾ.ಶಿವಕುಮಾರ್ ಬಿರಾದಾರ್ ಮಾತನಾಡಿ, ತಿಂಗಳಿಗೆ ಒಂದು ಗ್ರಾಮವನ್ನು ಆಯ್ಕೆಮಾಡಿಕೊಂಡು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ನಡೆಸಲಾಗುತ್ತಿದೆ. ಈ ವೇಳೆ ವಿವಿಧ ಇಲಾಖೆ ಅಧಿಕಾರಿಗಳು ಮನೆಬಾಗಿಲಿಗೆ ಆಗಮಿಸಿ ಜನರ ಸಮಸ್ಯೆ ಆಲಿಸಲಿದ್ದಾರೆ. ಹೊಸಕೋಟೆ ಗ್ರಾಮಕ್ಕೆ ಸ್ಮಶಾನ, ಶಾಲಾ ಕಟ್ಟಡಕ್ಕೆ ನಿವೇಶನ, ಕಬ್ಬಳ್ಳಿ ಕೋಣನಕಟ್ಟೆ ಸೇರಿದಂತೆ ಚರಂಡಿ ಸಮಸ್ಯೆ, ಬೆಳೆಪರಿಹಾರ, ರಸ್ತೆ ದುರಸ್ತಿಗೆ ಕ್ರಮಕೈಗೊಳ್ಳಲಾಗುವುದು. ಅತಿವೃಷ್ಟಿಯಿಂದ ಭಾಗಶಃ ಹಾನಿಗೊಳಗಾದ ಮನೆಗಳಿಗೆ ಈ ಬಾರಿ ತಾಲೂಕಿನಲ್ಲಿ ಅತಿಹೆಚ್ಚು ಪರಿಹಾರ ಒದಗಿಸಲಾಗಿದೆ ಎಂದು ಮಾಹಿತಿ ನೀಡಿದರು.

    ನಿವೃತ್ತ ಶಿಕ್ಷಕ ಜಾಥಪ್ಪ ಮಾತನಾಡಿ, ಜಗಳೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿ ಹೊಂದಿದ್ದು. ತಾಲೂಕು ಆಡಳಿತ ಹರಪನಹಳ್ಳಿಯಾಗಿರುವುದರಿಂದ 7 ಗ್ರಾಪಂಗಳ ಹಳ್ಳಿಗಳ ಅಭಿವೃದ್ಧಿ ಕುಂಠಿತವಾಗಿದೆ. ನಮ್ಮ ಗ್ರಾಮದ ಸಮಸ್ಯೆ ಪರಿಹರಿಸಬೇಕೆಂದು ಮನವಿ ಮಾಡಿದರು. ಬೆಳೆವಿಮೆ, ಬೆಳೆ ಪರಿಹಾರದ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಬೇಕು. ರೈತರಿಂದ ಬೆಳೆವಿಮೆ ಹಣ ಸಂದಾಯವಾಗಿದ್ದರೂ ಪರಿಹಾರ ಸಿಕ್ಕಿಲ್ಲ ಎಂದರು.

    ಕೆಎಸ್‌ಆರ್‌ಟಿಸಿ ಬಸ್ ಸಂಚಾರವಿಲ್ಲದೆ ಶಾಲಾಮಕ್ಕಳಿಗೆ ಸಂಚಾರಕ್ಕೆ ತೀವ್ರ ಸಮಸ್ಯೆ ಉಂಟಾಗಿದೆ. ಸರ್ಕಾರಿ ಬಸ್ ವ್ಯವಸ್ಥೆ, ಹೊಸಕೋಟೆ ಕೆರೆಗುಡಿಹಳ್ಳಿ, ಮಾದಿಹಳ್ಳಿ ಸಂಪರ್ಕದ ರಸ್ತೆಗಳನ್ನು ದುರಸ್ತಿಗೊಳಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು.

    ಬಳ್ಳಾರಪ್ಪ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಗೊಂದಿ, ಮಲ್ಲಪ್ಪ, ವಿಜಯಲಕ್ಷ್ಮೀ, ಸಿದ್ಧರಾಜ್, ಮಂಜುಳಾ, ಜ್ಯೋತಿ ಕುಮಾರ್, ಉಪತಹಸೀಲ್ದಾರ್ ಕೊಟ್ರಮ್ಮ, ಎಂಆರ್ ಡಬ್ಲುೃ ಧನರಾಜ್, ನಿವೃತ್ತ ಶಿಕ್ಷಕ ಶರಣಪ್ಪ, ಪಿಡಿಒ ಸಂಗಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts