More

    ಹಳೆಯ ಪಿಂಚಣಿ ಪದ್ಧತಿಯೇ ಇರಲಿ, ಗ್ರೇಡ್ 2 ತಹಶೀಲ್ದಾರ್ ಪ್ರಭಾಕರಗೌಡಗೆ ಮನವಿ

    ಹರಪನಹಳ್ಳಿ: ರಾಜ್ಯ ಸರ್ಕಾರಿ ನೌಕರರ ಎನ್‌ಪಿಎಸ್ ಯೋಜನೆ ರದ್ದುಗೊಳಿಸಿ ನಿಶ್ಚಿತ ಪಿಂಚಣಿ( ಓಪಿಎಸ್)ಯನ್ನು ಮುಂದುವರಿಸುವಂತೆ ಒತ್ತಾಯಿಸಿ ಅಖಿಲ ಬಾರತ ವಿದ್ಯಾರ್ಥಿ ಪೆಡರೇಷನ್ (ಎಐಎಸ್‌ಎಫ್) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

    ಎನ್‌ಪಿಎಸ್ ನೌಕರರು ಓಪಿಎಸ್ ಜಾರಿಗಾಗಿ ಬೆಂಗಳೂರಿನಲ್ಲಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು. ಸಂಘಟನೆ ರಾಜ್ಯ ಕಾರ್ಯದರ್ಶಿ ರಮೇಶನಾಯ್ಕ ಮಾತನಾಡಿ, 2006ರಿಂದ ನೇಮಕವಾದ ರಾಜ್ಯ ಸರ್ಕಾರಿ ನೌಕರರಿಗೆ ಎನ್‌ಪಿಎಸ್ ಜಾರಿಗೆ ಬಂದಿರುವುದರಿಂದ ಭದ್ರತೆ ಇಲ್ಲದಂತಾಗಿದೆ. ಆದ್ಧರಿಂದ ಹಳೆಯ ಪಿಂಚಣಿ ಪದ್ಧತಿಯನ್ನೇ ಮುಂದುವರಿಸಬೇಕು ಎಂದರು.

    ಈಗಾಗಲೇ ಹಲವು ರಾಜ್ಯಗಳಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಮತ್ತೆ ಜಾರಿಗೆ ತರಲು ಮುಂದಾಗಿವೆ. ಆದರಿಂದ ರಾಜ್ಯ ಸರ್ಕಾರವು ಸಹ ಎನ್‌ಪಿಎಸ್ ರದ್ದುಗೋಳಿಸಿ ಹಳೆಯ ಪಿಂಚಣಿ ಯೋಜನೆ ಜಾರಿಗೋಳಿಸಬೇಕು. ಒಂದು ವೇಳೆ ಸರ್ಕಾರ ನಿರ್ಲಕ್ಷ್ಯ ದೊರಣೆ ತೋರಿದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts