More

  ಸ್ಟೂಡೆಂಟ್ಸ್‌ಗೆ ‘ವಿದ್ಯಾರ್ಥಿ ಉದ್ಯೋಗ ಮಿತ್ರ’ ಸಹಕಾರಿ

  ಹರಪನಹಳ್ಳಿ: ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಮಾನವ ಧರ್ಮ ವಿಜಯೀಭವ ಟ್ರಸ್ಟ್ನಿಂದ ವಿಜಯವಾಣಿ ವಿದ್ಯಾರ್ಥಿ ಉದ್ಯೋಗ ಮಿತ್ರ ಪತ್ರಿಕೆ ಕುರಿತು ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿತ್ತು.

  ಕಾರ್ಯಕ್ರಮದಲ್ಲಿ 13 ಶಾಲೆಗಳಿಂದ ತಲಾ 10 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಇದೇ ಸಂದರ್ಭ ಪ್ರಬಂಧ ಪರೀಕ್ಷೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

  ಟ್ರಸ್ಟ್ ಅಧ್ಯಕ್ಷೆ ಬಿ.ಮಂಜುಳಾ ಮಾತನಾಡಿ, ಅನೇಕ ಸಾಮಾಜಿಕ ಕಾರ್ಯಕ್ರಮಗಳನ್ನು ಟ್ರಸ್ಟ್ ಮಾಡುತ್ತ ಬಂದಿದೆ. ಗ್ರಾಮಾಂತರ ಪ್ರದೇಶದ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ವಿಜಯವಾಣಿ ದಿನಪತ್ರಿಕೆಯ ವಿದ್ಯಾರ್ಥಿ ಉದ್ಯೋಗ ಮಿತ್ರವನ್ನು 13 ಶಾಲೆಗಳಿಗೆ ಉಚಿತವಾಗಿ ನೀಡಲಾಗುತ್ತಿದೆ. 2023ರ ಸೆ.1ರಿಂದ ಪತ್ರಿಕೆ ಉಚಿತವಾಗಿ ನೀಡಲಾಗುತ್ತಿದೆ. ವಿದ್ಯಾರ್ಥಿ ಉದ್ಯೋಗ ಮಿತ್ರ ಪತ್ರಿಕೆಯು ಬಹಳಷ್ಟು ಉಪಯುಕ್ತ ಮಾಹಿತಿಯನ್ನು ಒದಗಿಸುತ್ತಿದ್ದು, ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು. ಕ್ಷೇತ್ರ ಸಮನ್ವಯಾಧಿಕಾರಿ ಹೊನ್ನತ್ತೆಪ್ಪ, ಅಣ್ಣಪ್ಪ, ಸಂದೀಪ್, ಶ್ರೀಕಾಂತ್ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts