ಹರಿಯಾಣ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ; ವಿನೇಶ್‌ ಫೋಗಟ್​ಗೆ ಪ್ರತಿಸ್ಪರ್ಧಿ ಯಾರು ಗೊತ್ತಾ?

vinesh

ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆಗೆ ಬಿಜೆಪಿಯು 21 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಸಿಪಿಐ ನಾಯಕ ಸೀತಾರಾಂ ಯೆಚೂರಿ ಆರೋಗ್ಯ ಸ್ಥಿತಿ ಗಂಭೀರ, ವೆಂಟಿಲೇಟರ್​ನಲ್ಲಿ ಚಿಕಿತ್ಸೆ

90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಬಿಜೆಪಿ ಈವರೆಗೆ 87 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಇತ್ತೀಚೆಗಷ್ಟೇ ಕಾಂಗ್ರೆಸ್‌ ಸೇರ್ಪಡೆಯಾದ ಕುಸ್ತಿಪಟು ವಿನೇಶ್‌ ಫೋಗಟ್‌ ವಿರುದ್ಧ ಜುಲಾನಾ ಕ್ಷೇತ್ರದಿಂದ ಕ್ಯಾಪ್ಟನ್‌ ಯೋಗೇಶ್‌ ಬೈರಾಗಿ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.  ಕ್ಯಾಪ್ಟನ್ ಯೋಗೇಶ್ ಬೈರಾಗಿ ಅವರು ತಮ್ಮ ಫೇಸ್‌ಬುಕ್ ಖಾತೆಯ ಪ್ರಕಾರ ಬಿಜೆಪಿಯ ಯುವ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಮತ್ತು ಪಕ್ಷದ ಹರಿಯಾಣ ಸ್ಪೋರ್ಟ್ಸ್ ಸೆಲ್‌ನ ಸಹ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಬಿಜೆಪಿ ಫಿರೋಜ್‌ಪುರ ಜಿರ್ಕಾ ಮತ್ತು ಪುನಾಹಾನಾ ವಿಧಾನಸಭಾ ಕ್ಷೇತ್ರಗಳಿಂದ ನಸೀಮ್ ಅಹ್ಮದ್ ಮತ್ತು ಐಜಾಜ್ ಖಾನ್ ಅವರನ್ನು ಕಣಕ್ಕಿಳಿಸಿದೆ. ಪ್ರದೀಪ್ ಸಾಂಗ್ವಾನ್ ಬರೋಡಾದಿಂದ ಸ್ಪರ್ಧಿಸಲಿದ್ದಾರೆ.

67 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬುಧವಾರ ಬಿಡುಗಡೆ ಮಾಡಿತ್ತು. ಈ ಪಟ್ಟಿಯಲ್ಲಿ ಮುಖ್ಯಮಂತ್ರಿ ನಾಯಬ್ ಸಿಂಗ್ ಸೈನಿ ಅವರು ಕುರುಕ್ಷೇತ್ರ ಜಿಲ್ಲೆಯ ಲಾಡವಾ ಕ್ಷೇತ್ರದಿಂದ ಕಣಕ್ಕೆ ಇಳಿಸಿತ್ತು. ಸೈನಿ ಅವರು ಈಗ ಕರನಾಲ್ ಪ್ರತಿನಿಧಿಸುತ್ತಿದ್ದಾರೆ.

ಈ ಬಾರಿ ಅಧಿಕಾರದ ಗದ್ದುಗೆ ಹಿಡಿಯಲು ಪಣ ತೊಟ್ಟಿರುವ ಬಿಜೆಪಿ ಪಕ್ಷದ ನಿಷ್ಠಾವಂತರಿಗೆ ಟಿಕೆಟ್‌ ನೀಡಿದೆ. ಪಕ್ಷದ ಹಿರಿಯ ನಾಯಕ ಅನಿಲ್ ವಿಜ್​ ಅವರು ಅಂಬಾಲಾ ಕೈಂಟ್ ಕ್ಷೇತ್ರದಿಂದ ಮತ್ತೆ ಕಣಕ್ಕೆ ಇಳಿಯಲಿದ್ದಾರೆ. ಮಾಜಿ ಸಂಸದ ಶರ್ಮಾ ಅವರು ಗೋಹನಾ ಕ್ಷೇತ್ರದಿಂದ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ. ಬಿಜೆಪಿ ಬಿಡುಗಡೆ ಮಾಡಿದ ಮೊದಲ ಪಟ್ಟಿಯಲ್ಲಿ ಕಾಂಗ್ರೆಸ್​ನಿಂದ ಬಂದ ಪ್ರಬಲ ರಾಜಕೀಯ ಕುಟುಂಬಗಳ ಕುಡಿಗಳಿಗೂ ಮಣೆ ಹಾಕಲಾಗಿದೆ. ಮಾಜಿ ಸಿಎಂ ಭಜನ್ ಲಾಲ್ ಅವರ ಮೊಮ್ಮಗ ಭವ್ಯ ಬಿಷ್ಣೋಯ್ ಅವರಿಗೆ ಟಿಕೆಟ್ ನೀಡಲಾಗಿದೆ. ಮಾಜಿ ಸಿಎಂ ಬನ್ಸಿಲಾಲ್ ಅವರ ಮೊಮ್ಮಗಳು ಶ್ರತಿ ಚೌಧರಿ ಅವರು ಕೂಡ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ.

ಚುನಾವಣಾ ಆಯೋಗವು ಹರಿಯಾಣ ವಿಧಾನಸಭಾ ಚುನಾವಣೆಯ ಮತದಾನದ ದಿನವನ್ನು ಅಕ್ಟೋಬರ್ 1ರಿಂದ ಅಕ್ಟೋಬರ್ 5ಕ್ಕೆ ಪರಿಷ್ಕರಿಸಿತ್ತು. ಜೊತೆಗೆ ಜಮ್ಮು ಮತ್ತು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆಗಳ ಮತ ಎಣಿಕೆಯನ್ನು ಅಕ್ಟೋಬರ್ 8ಕ್ಕೆ ಮುಂದೂಡಿದೆ.

ವಿನೇಶ್ ಫೋಗಟ್ ಚುನಾವಣೆಯಲ್ಲಿ ಸ್ಪರ್ಧಿಸುವುದು ಇಷ್ಟವಿಲ್ಲ; ಒಲಿಂಪಿಕ್ಸ್ ಚಿನ್ನ ಬಗ್ಗೆ ಗಮನ ಹರಿಸಬೇಕಿತ್ತು: ಮಹಾವೀರ್ ಫೋಗಟ್!

Share This Article

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…

ಹಾವು ಕಚ್ಚಿದಾಗ ಮಾಡುವ ಈ ಒಂದು ತಪ್ಪಿನಿಂದ ಪ್ರಾಣ ಹೋಗುತ್ತೆ ಎಚ್ಚರ! ಈ ರೀತಿ ಮಾಡೋದನ್ನು ತಪ್ಪಿಸಿ | Snakes

ಕೊಲ್ಲಂ: ಹಾವುಗಳು ( Snakes ) ಕಚ್ಚಿದ ಸಂದರ್ಭದಲ್ಲಿ ಯಾವ ಹಾವು ಕಚ್ಚಿತ್ತು ಎಂಬುದನ್ನು ತಿಳಿದುಕೊಳ್ಳಲು…