ನವದೆಹಲಿ: ಮುಂಬರುವ ಹರಿಯಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಗುರುವಾರ ಇನ್ನೂ ಎಂಟು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
ಇದನ್ನೂ ಓದಿ: ಗಣೇಶ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ; ಪೊಲೀಸ್ ಠಾಣೆ ಎದುರು ಹಿಂದೂಗಳಿಂದ ಪ್ರತಿಭಟನೆ
ಈ ಮೂಲಕ ಆಮ್ ಆದ್ಮಿ ಜೊತೆ ಮೈತ್ರಿ ಇಲ್ಲ ಅಂತ ಹೇಳಿದ್ದು, ಸಿಪಿಐ(ಎಂ) ಜೊತೆ ಮೈತ್ರಿ ಮಾಡಿಕೊಂಡಿದೆ. ಕಾಂಗ್ರೆಸ್ ಪಕ್ಷ 89 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದು ಸಿಪಿಐ (ಎಂ)ಗೆ ಒಂದು ಕ್ಷೇತ್ರವನ್ನು ಬಿಟ್ಟುಕೊಟ್ಟಿದೆ.
ಒಟ್ಟು 90 ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಆರು ಪಟ್ಟಿಗಳ ಮೂಲಕ 89 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಇಲ್ಲಿನ ಭಿವಾನಿ ವಿಧಾನಸಭಾ ಕ್ಷೇತ್ರವನ್ನು ಸಿಪಿಐ(ಎಂ)ಗೆ ಬಿಟ್ಟುಕೊಟ್ಟಿದೆ.
ಬುಧವಾರ ರಾತ್ರಿ ಕಾಂಗ್ರೆಸ್ ತನ್ನ 40 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಘೋಷಿಸಿದ ಕೆಲವೇ ಗಂಟೆಗಳ ನಂತರ ನಾಲ್ಕನೇ ಪಟ್ಟಿ ಘೋಷಣೆ ಮಾಡಿದೆ. ಕೈತಾಲ್‌ನಿಂದ ಕಾಂಗ್ರೆಸ್ ಪಕ್ಷದ ಸಂಸದ ರಣದೀಪ್ ಸುರ್ಜೇವಾಲಾ ಅವರ ಪುತ್ರ ಆದಿತ್ಯ ಸುರ್ಜೇವಾಲಾ ಅವರನ್ನು ಕಣಕ್ಕಿಳಿಸಿದೆ.
ಅಂಬಾಲಾ ಕ್ಯಾಂಟ್‌ನಿಂದ ಪರಿಮಳ್ ಪಾರಿ, ಪಾಣಿಪತ್ ಗ್ರಾಮಾಂತರ ಕ್ಷೇತ್ರದಿಂದ ಸಚಿನ್ ಕುಂದು, ನರ್ವಾನಾ (ಎಸ್‌ಸಿ) ಸ್ಥಾನದಿಂದ ಸತ್ಬೀರ್ ದುಬ್ಲೇನ್ ಮತ್ತು ಟಿಗಾಂವ್‌ನಿಂದ ರೋಹಿತ್ ನಗರ್ ಅವರನ್ನು ಕಣಕ್ಕಿಳಿಸಿದೆ.
ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಮತ್ತು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಉದಯ್ ಭಾನ್ ಅವರ ಸಮ್ಮುಖದಲ್ಲಿ ಇತ್ತೀಚೆಗೆ ಕಾಂಗ್ರೆಸ್ ಸೇರಿದ ಪತ್ರಕರ್ತ ಸರ್ವ ಮಿತ್ರ ಕಾಂಬೋಜ್ ಅವರನ್ನು ಸಿರ್ಸಾ ಜಿಲ್ಲೆಯ ರಾನಿಯಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ.
ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸುವುದರೊಂದಿಗೆ, ಕಾಂಗ್ರೆಸ್ ಸಿಪಿಐ(ಎಂ) ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧೆ ಮಾಡುತ್ತಿದೆ.
ಹರಿಯಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷಗಳ (ಎಎಪಿ) ನಡುವೆ ಸೀಟು ಹಂಚಿಕೆ ಮಾತುಕತೆ ನಡೆದಿತ್ತು. ಕಾಂಗ್ರೆಸ್ ಪಕ್ಷದ ಬಹುತೇಕ ನಾಯಕರು ಎಎಪಿ ಜೊತೆ ಮೈತ್ರಿ ಮಾಡಿಕೊಳ್ಳವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಅಂತಿಮವಾಗಿ ಮೈತ್ರಿ ಮಾತುಕತೆಗೆ ಅಂತ್ಯ ಹಾಡಿ ಕಾಂಗ್ರೆಸ್ 89 ಸ್ಥಾನಗಳಿಗೆ ಅಭ್ಯರ್ಥಿಗಳನ್ನ ಹೆಸರನ್ನು ಘೋಷಿಸಿದೆ.
ಭಾರತದ ಚುನಾವಣಾ ಆಯೋಗವು ಹರಿಯಾಣ ವಿಧಾನಸಭಾ ಚುನಾವಣೆಯ ಮತದಾನದ ದಿನವನ್ನು ಅಕ್ಟೋಬರ್ 1ರಿಂದ ಅಕ್ಟೋಬರ್ 5ಕ್ಕೆ ಪರಿಷ್ಕರಿಸಿತ್ತು. ಜೊತೆಗೆ ಜಮ್ಮು ಮತ್ತು ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆಗಳ ಮತ ಎಣಿಕೆಯನ್ನು ಅಕ್ಟೋಬರ್ 8ಕ್ಕೆ ಮುಂದೂಡಿದೆ.
ಪ್ರಧಾನಿ ಮೋದಿ ಸರ್ಕಾರದ ಮಹತ್ವದ ನಿರ್ಧಾರ; 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ