ಹೊಟ್ಟೆನೋವು ತಾಳಲಾರದೆ ಮಹಿಳೆ ಆತ್ಮಹತ್ಯೆ

ಆಲೂರು : ತಾಲೂಕಿನ ಕೆ. ಹೊಸಕೋಟೆ ಹೋಬಳಿ ಕುಡಿದೆಲೆ ಗ್ರಾಮದಲ್ಲಿ ಹೊಟ್ಟೆ ನೋವು ತಾಳಲಾರದೆ ಮಹಿಳೆಯೊಬ್ಬರು ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗ್ರಾಮದ ನಿವಾಸಿ ಸಣ್ಣಪ್ಪ ಎಂಬುವರ ಪತ್ನಿ ಸುಶೀಲಾ (50) ಆತ್ಮಹತ್ಯೆ ಮಾಡಿಕೊಂಡವರು. 15 ದಿನಗಳಿಂದ ವಿಪರೀತ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಸಾಕಷ್ಟು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ. ತೀವ್ರ ಹೊಟ್ಟೆ ನೋವಿನಿಂದ ಬೇಸತ್ತ ಮಹಿಳೆ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *