ಹುಣಸುವಳ್ಳಿಯಲ್ಲಿ ವಿಶ್ವ ಜಲ ದಿನಾಚರಣೆ

ವಿಜಯವಾಣಿ ಸುದ್ದಿಜಾಲ ಆಲೂರು
ಜೀವಸಂಕುಲದ ಉಳಿವಿಗೆ ನೀರು ಅವಶ್ಯಕವಾಗಿದ್ದು, ಪ್ರತಿಯೊಬ್ಬರು ನೀರನ್ನು ಮಿತವಾಗಿ ಬಳಸಿ ಮುಂದಿನ ಪೀಳಿಗೆಗೂ ಸಿಗುವಂತೆ ಮಾಡಬೇಕು ಎಂದು ಹುಣಸುವಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಹನಾ ತಿಳಿಸಿದರು.
ತಾಲೂಕಿನ ಹುಣಸುವಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಆಯೋಜಿಸಿದ್ದ ವಿಶ್ವಜಲ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಪಂಚದ ಮೂರನೇ ಒಂದು ಭಾಗ ಮಾತ್ರ ಭೂಮಿ ಇದ್ದು, ಉಲಿದೆಲ್ಲ ಭಾಗ ನೀರಿನಿಂದ ಕೂಡಿದೆ. ಆದರೆ ಇದರಲ್ಲಿ ಕುಡಿಯಲು ಯೋಗ್ಯವಾಗಿರುವ ನೀರಿನ ಪ್ರಮಾಣ ಕಡಿಮೆ. ಇತ್ತೀಚಿನ ದಿನಗಳಲ್ಲಿ ಕೊಳಬೆ ಬಾವಿಯನ್ನು ಹೆಚ್ಚಾಗಿ ಕೊರೆಸುತ್ತಿರುವುದರಿಂದ ಅಂತರ್ಜಲ ಪ್ರಮಾಣ ಕಡಿಮೆಯಾಗಿ ನೀರಿಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ನೀರನ್ನು ಮಿತವಾಗಿ ಬಳಸಬೇಕು ಎಂದು ಸಲಹೆ ನೀಡಿದರು.
ಗ್ರಾಪಂ ಕಾರ್ಯದರ್ಶಿ ಸೋಮೇಗೌಡ, ಹರೀಶ್, ಅಂಗನವಾಡಿ ಕಾರ್ಯಕರ್ತೆಯರಾದ ಕವಿತಾ, ಶೋಭಾ, ವಿಜಯಲಕ್ಷ್ಮೀ, ಯಶೋಧಾ ಹಾಜರಿದ್ದರು.