blank

ಅಜ್ಞಾನದ ಕತ್ತಲು ತೊಲಗಿಸುತ್ತಿರುವ ನಿರಂಜನ ಪೀಠ

blank

ಅರಸೀಕೆರೆ: ರಾಜಕಾರಣಿಗಳು ಧರ್ಮ ಮಾರ್ಗದಲ್ಲಿ ಸಾಗಲು ಮಠಮಾನ್ಯಗಳ ಹರಗುರು ಚರಮೂರ್ತಿಗಳ ಆಶೀರ್ವಾದವಿದೆ ಎಂದು ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಹೇಳಿದರು.
ತಾಲೂಕಿನ ಮಾಡಾಳು ಗ್ರಾಮದ ನಿರಂಜನ ಪೀಠದಲ್ಲಿ ಶನಿವಾರ ಆಯೋಜಿಸಿದ್ದ ಲಿಂಗೈಕ್ಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರ 13ನೇ ವರ್ಷದ ಪುಣ್ಯ ಸಂಸ್ಮರಣೆ ಹಾಗೂ 20ನೇ ಅರಿವಿನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅರಿವೆ, ಅನ್ನ, ಅಕ್ಷರ ನೀಡುವ ಮೂಲಕ ಅಜ್ಞಾನದ ಕತ್ತಲು ಕಳೆಯುತ್ತಿರುವ ನಿರಂಜನ ಪೀಠದ ಶ್ರೀಗಳ ಕೊಡುಗೆ ಅಪಾರವಾಗಿದೆ. ತಾಯಂದಿರು ಮಕ್ಕಳನ್ನು ಸನ್ಮಾರ್ಗದಲ್ಲಿ ನಡೆಯಲು ಪ್ರೋತ್ಸಾಹ ನೀಡಬೇಕು ಎಂದರು.
ಸಾಣೆಹಳ್ಳಿ ಶಾಖಾ ಮಠದ ಡಾ.ಶ್ರೀ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಮಾಡಾಳು ಪೀಠದ ಶ್ರೀ ರುದ್ರಮುನಿ ಸ್ವಾಮೀಜಿ, ಕೋಳಗುಂದ ಕೇದಿಗೆ ಮಠದ ಶ್ರೀ ಜಯಚಂದ್ರಶೇಖರ ಸ್ವಾಮೀಜಿ, ಪಾಂಡೋಮಟ್ಟಿ ವಿರಕ್ತ ಮಠದ ಶ್ರೀ ಗುರುಬಸವ ಸ್ವಾಮೀಜಿ, ಬೂದಿಹಾಳ್ ವಿರಕ್ತಮಠದ ಶಶಿಶೇಖರ ಸ್ವಾಮೀಜಿ, ಗೋಡೇಕೆರೆ ಶ್ರೀ ಮಠದ ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ, ಶಾಸಕರಾದ ಕೆ.ಎಂ.ಶಿವಲಿಂಗೇಗೌಡ, ಬೆಳ್ಳಿಪ್ರಕಾಶ್,ಪ್ರೀತಂ ಗೌಡ, ಜಿಪಂ ಅಧ್ಯಕ್ಷೆ ಬೆಳ್ಳಿಪ್ರಕಾಶ್ , ಜಿಪಂ ಅಧ್ಯಕ್ಷೆ ಶ್ವೇತಾ ದೇವರಾಜ್, ಜಿಪಂ ಸದಸ್ಯರಾದ ಜಿ.ಮರಿಸ್ವಾಮಿ, ಮಾಡಾಳು ಸ್ವಾಮಿ, ಕಾಂಗ್ರೆಸ್ ಮುಖಂಡ ಜಿ.ಬಿ.ಶಶಿಧರ್, ಕಂದಾಯ ಉಪವಿಭಾಗಾಧಿಕಾರಿ ಸಿ.ಎಲ್.ಶಿವಕುಮಾರ್, ಮಾಡಾಳು ಗ್ರಾಪಂ ಅಧ್ಯಕ್ಷ ಚಂದ್ರಶೇಖರ್, ಬಿಜೆಪಿ ಮುಖಂಡರಾದ ಜಿವಿಟಿ ಬಸವರಾಜ್, ಕೆ.ವಿ.ಎನ್.ಶಿವು, ತಾಪಂ ಇಒ ನಟರಾಜ್,ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಮಂಡಳಿ ಸದಸ್ಯ ಸಿದ್ದೇಶ್ ನಾಗೇಂದ್ರ,ರಾಜ್ಯ ಉಪಾಧ್ಯಕ್ಷ ನಂಜುಂಡೇಶ್, ಎನ್.ಡಿ.ಪ್ರಸಾದ್, ಕಾಟೀಕೆರೆ ಪ್ರಸನ್ನಕುಮಾರ್, ಅಣ್ಣಾಯ್ಕನಹಳ್ಳಿ ವಿಜಯಕುಮಾರ್ ವೇದಿಕೆಯಲ್ಲಿದ್ದರು. ಸಾಹಿತಿ ಎಂ.ಚಿದಾನಂದ ಮೂರ್ತಿ ನಿಧನಕ್ಕೆ ಸಂತಾಪ ಸೂಚಿಸಲಾಯಿತು.

blank

ಸತತ ಪರಿಶ್ರಮ ಹಾಗೂ ಹೋರಾಟದ ಮೂಲಕವೇ ಬಿ.ಎಸ್.ಯಡಿಯೂರಪ್ಪ ಅವರು ನಾಲ್ಕನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರದ ಸೂತ್ರ ಹಿಡಿದಿದ್ದಾರೆ.ತಮಗೆ ಸಿಕ್ಕ ಅಧಿಕಾರದ ಅವಧಿಯಲ್ಲಿ ಬಡವರು, ಶೋಷಿತರು,ದೀನ- ದಲಿತರ ಏಳಿಗೆಗೆ ಶ್ರಮಿಸುತ್ತಿದ್ದಾರೆ. ಬಿಎಸ್‌ವೈ ಹೋರಾಟದ ಫಲವಾಗಿ ಕಣಕಟ್ಟೆ ಹೋಬಳಿ ವ್ಯಾಪ್ತಿಯ ಹಲವು ಕೆರೆಗಳಿಗೆ ಹೇಮಾವತಿ ನೀರು ಹರಿದು ಬಂದಿದೆ.
ಬಿ.ವೈ.ವಿಜಯೇಂದ್ರ
ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ

Share This Article
blank

ಬೆಳಗ್ಗೆ ಚಹಾ ಕುಡಿಯಿರಿ..ಆದ್ರೆ ಈ ಅಭ್ಯಾಸವನ್ನು ಸ್ವಲ್ಪ ಬದಲಾಯಿಸಿ! tea

tea : ನಮ್ಮಲ್ಲಿ ಹಲವರಿಗೆ ಪ್ರತಿದಿನ ಬೆಳಿಗ್ಗೆ ಚಹಾ ಕುಡಿಯುವ ಅಭ್ಯಾಸವಿರುತ್ತದೆ. ಆದರೆ ತೂಕ ಇಳಿಸಿಕೊಳ್ಳಲು…

ಬಿಸಾಡುವ ಮುನ್ನ ತಿಳಿಯಿರಿ Watermelon Seeds ಪವರ್​​: ಇದರಲ್ಲಿದೆ 5 ನಂಬಲಾಗದ ಆರೋಗ್ಯ ಪ್ರಯೋಜನೆಗಳು

Watermelon Seeds: ಬೇಸಿಗೆಯಲ್ಲಿ ಬಿಸಿಲು ಜೋರಾದ ತಕ್ಷಣ ದೇಹವನ್ನು ತಂಪಾಗಿಸಲು ನಾವು ಹೆಚ್ಚಾಗಿ ಕಲ್ಲಂಗಡಿಯನ್ನು ಆಶ್ರಯಿಸುತ್ತೇವೆ.…

blank