More

  ನುಸುಳುಕೋರರ ತಡೆಗೆ ಸಿಎಎ ಅಸ್ತ್ರ

  ಬೇಲೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಯಾವುದೇ ಜಾತಿ, ಧರ್ಮಕ್ಕೆ ಸಂಬಂಧಿಸಿದ್ದಲ್ಲ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ರೇಣುಕುಮಾರ್ ಹೇಳಿದರು.
  ಪಟ್ಟಣದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಜಾಥಾಗೆ ಶನಿವಾರ ಚಾಲನೆ ನೀಡಿ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ಕಾಯ್ದೆ ಬಗ್ಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ನಾಯಕರು ಇಲ್ಲ ಸಲ್ಲದ ಹೇಳಿಕೆ ನೀಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಜನರು ತಿರುಗಿ ಬೀಳುವಂತೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
  ಅಕ್ರಮ ನುಸುಳುಕೋರರನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಕಾಯ್ದೆ ಜಾರಿ ಮಾಡುತ್ತಿದೆ. ಕಿಡಿಗೇಡಿಗಳ ಮಾತಿಗೆ ಜನರು ಕಿವಿಯಾಗದೆ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರಲು ಸಹಕರಿಸಬೇಕು ಎಂದರು.
  ಬಿಜೆಪಿ ಜಿಲ್ಲಾಧ್ಯಕ್ಷ ನವಿಲೇ ಅಣ್ಣಪ್ಪ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸುರೆಶ್ ಮಾತನಾಡಿದರು. ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಕೊರಟಿಕೆರೆ ಪ್ರಕಾಶ್, ಮಾಜಿ ಶಾಸಕ ಎಚ್.ಎಂ.ವಿಶ್ವನಾಥ್, ಇ.ಎಚ್.ಲಕ್ಷ್ಮಣ್, ಮುಖಂಡರಾದ ಶೋಭಾಗಣೇಶ್, ರಮೇಶ್, ರಾಜು, ವಿಜಯಲಕ್ಷ್ಮೀ ಮತ್ತಿತರರು ಹಾಜರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts