ಸಂತ್ರಸ್ತರಿಗೆ ಶೀಘ್ರ ಪರಿಹಾರ ವಿತರಣೆ

ಶಾಸಕ ಕೆ.ಎಸ್.ಲಿಂಗೇಶ್ ಭರವಸೆ

ವಿಜಯವಾಣಿ ಸುದ್ದಿಜಾಲ ಬೇಲೂರು
ವರುಣ ಆರ್ಭಟದಿಂದ ತಾಲೂಕಿನಲ್ಲಿ ಸುಮಾರು 300ಕ್ಕೂ ಹೆಚ್ಚು ಮನೆಗಳು ಹಾಗೂ 1200 ಹೆಕ್ಟೇರ್ ಜಮೀನಿನಲ್ಲಿ ಬೆಳೆದಿದ್ದ ಬೆಳೆ ನಾಶವಾಗಿದ್ದು, ಸಂತ್ರಸ್ತರಿಗೆ ತಾಲೂಕು ಆಡಳಿತದಿಂದ ತ್ವರಿತವಾಗಿ ಪರಿಹಾರ ಕೊಡಿಸಲಾಗುವುದು ಎಂದು ಶಾಸಕ ಕೆ.ಎಸ್.ಲಿಂಗೇಶ್ ಹೇಳಿದರು.
ಪಟ್ಟಣದಲ್ಲಿ ಕುಸಿದು ಬಿದ್ದಿದ್ದ ಮನೆಗಳ ಮಾಲೀಕರಿಗೆ ತಾಲೂಕು ಆಡಳಿತದಿಂದ ತಾತ್ಕಾಲಿಕ ಪರಿಹಾರದ ಚೆಕ್ ವಿತರಿಸಿ ಮಾತನಾಡಿದರು.
ನಿರಂತರ ಮಳೆಯಿಂದ ಪಟ್ಟಣದಲ್ಲಿ 25ಕ್ಕೂ ಹೆಚ್ಚು ಮನೆಗಳು ಕುಸಿದು ಬಿದ್ದಿದ್ದರೆ, 18ಕ್ಕೂ ಹೆಚ್ಚು ಮನೆಗಳು ಹಾನಿಗೊಂಡಿವೆ. ಈಗಾಗಲೇ ಪುರಸಭೆ ಇಂಜಿನಿಯರ್, ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲಿಸಿ ನಷ್ಟದ ಅಂದಾಜು ಪಟ್ಟಿ ತಯಾರಿಸಿದ್ದಾರೆ. ಸದ್ಯ ಮನೆಯ ನಿರ್ಮಾಣಕ್ಕೆ ತಾತ್ಕಾಲಿಕವಾಗಿ ಪರಿಹಾರ ನೀಡಲಾಗುತ್ತಿದೆ ಎಂದರು.
ತಹಸೀಲ್ದಾರ್ ನಟೇಶ್, ಪುರಸಭೆ ಮಾಜಿ ಅಧ್ಯಕ್ಷ ಶ್ರೀನಿಧಿ, ಪುರಸಭೆ ಮುಖ್ಯಾಧಿಕಾರಿ ಮಂಜುನಾಥ್, ಕಂದಾಯ ಇಲಾಖೆ ಆರ್‌ಐ ರವಿಕುಮಾರ್, ಗುಂಡಣ್ಣ ಇನ್ನಿತರರಿದ್ದರು.

Leave a Reply

Your email address will not be published. Required fields are marked *