23.2 C
Bangalore
Saturday, December 14, 2019

ಕಾಫಿಗೆ ಮುಂಗಾರಿನ ಬಿಸಿ

Latest News

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡಣೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡಣೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

16 ಯುವಕರ ಮೇಲೆ ಪ್ರಕರಣ ದಾಖಲು

ಬಾದಾಮಿ: ದ್ವಿಚಕ್ರ ವಾಹನಕ್ಕೆ ಹಾದು ಹೋಗಲು ಅವಕಾಶ ನೀಡಲಿಲ್ಲ ಎಂಬ ಕ್ಷುಲಕ ಕಾರಣಕ್ಕೆ ಇಬ್ಬರು ಯುವಕರ ಮಧ್ಯೆ ಆರಂಭವಾದ ಜಗಳ ಶನಿವಾರ ವಿಕೋಪಕ್ಕೆ...

ಮೆಟ್ರೋಗೆ ಹಾರಿ ಗಂಡ ಮೃತಪಟ್ಟ ಒಂದು ಗಂಟೆಯಲ್ಲೇ ಮನೆಯಲ್ಲಿ ನೇಣು ಬಿಗಿದುಕೊಂಡ ಹೆಂಡತಿ, ಮಗಳು!

ನವದೆಹಲಿ: ಗಂಡ ಮೆಟ್ರೋಗೆ ಹಾರಿ ಮೃತಪಟ್ಟ ಗಂಟೆಯೊಳಗೆ ಮನೆಯಲ್ಲಿ ಹೆಂಡತಿ ಮತ್ತು ಮಗಳು ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ. ದೆಹಲಿಯ ಜವಹರ ಲಾಲ್​ ನೆಹರು ಮೆಟ್ರೋ ನಿಲ್ದಾಣದಲ್ಲಿ ಬೆಳಗ್ಗೆ...

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಬಿರುಸಿನಿಂದ ಸುರಿಯುತ್ತಿರುವ ಮುಂಗಾರು ಮಳೆ ಕಾಫಿ ಬೆಳೆಗಾರರನ್ನು ಕಂಗಾಲಾಗಿಸಿದ್ದು, ಭಾರಿ ಪ್ರಮಾಣದ ಬೆಳೆನಷ್ಟಕ್ಕೆ ದೂಡುವ ಲಕ್ಷಣಗಳು ಕಾಣಿಸುತ್ತಿವೆ.

ಒಂದು ವಾರದಿಂದ ಸಕಲೇಶಪುರ, ಆಲೂರು, ಬೇಲೂರಿನ ಪಶ್ಚಿಮಘಟ್ಟದಂಚಿನ ಪ್ರದೇಶಗಳು ಹಾಗೂ ಅರಕಲಗೂಡು ತಾಲೂಕಿನ ಮಲ್ಲಿಪಟ್ಟಣ ಭಾಗದಲ್ಲಿ ಭಾರಿ ಬಿರುಗಾಳಿಯೊಂದಿಗೆ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಮಲೆನಾಡು ಭಾಗದ ಹಳ್ಳಕೊಳ್ಳಗಳೆಲ್ಲ ಉಕ್ಕಿ ಹರಿಯುತ್ತಿದ್ದು, ಹಲವೆಡೆ ಕಾಫಿ ತೋಟಗಳೇ ಜಲಾವೃತಗೊಂಡಿವೆ.

1996ರ ನಂತರ ಇದೇ ಮೊದಲ ಬಾರಿಗೆ ಜುಲೈನಲ್ಲಿ ಒಂದೇ ದಿನಕ್ಕೆ ಐದಾರು ಇಂಚು ಮಳೆ ಸುರಿಯುತ್ತಿದ್ದು, ಕಾಫಿ ಬೆಳೆಗಾರರನ್ನು ಚಿಂತೆಗೆ ದೂಡಿದೆ. ಉತ್ತಮ ಮುಂಗಾರುಪೂರ್ವ ಹೂವು ಅರಳುವ ಹಾಗೂ ಬ್ಯಾಕಪ್ ಮಳೆ ರೈತರನ್ನು ಖುಷಿಯಾಗಿಸಿತ್ತು. ಸಂಪೂರ್ಣ ಮಳೆಯಾಶ್ರಿತ ಬೆಳೆಗಾರರೂ ಆರೇಳು ವರ್ಷಗಳ ನಂತರ ಹೆಚ್ಚಿನ ಫಸಲು ಕಾಣುವ ನಿರೀಕ್ಷೆಯಲ್ಲಿದ್ದರು.

ಆದರೆ, ಅನಿರೀಕ್ಷಿತವಾಗಿ ಬಿರುಸುಗೊಂಡಿರುವ ಮುಂಗಾರು ಬೆಳೆಗಾರರಿಗೆ ಆಘಾತವುಂಟು ಮಾಡಿದೆ. ಮಳೆಯ ಬಿರುಸಿಗೆ ಕಾಫಿ ಕಾಯಿ ಉದುರುಲಾರಂಭಿಸಿದೆ. ಇನ್ನೊಂದೆಡೆ ಕಾಫಿ ಬೆಳೆಗಾರರಿಗೆ ನಾಲ್ಕೈದು ವರ್ಷಗಳಿಂದ ಆಶಾಭಾವ ಮೂಡಿಸಿದ್ದ ಮೆಣಸು ಬೆಳೆಯೂ ಕೈಕೊಡುವ ಲಕ್ಷಣಗಳು ಗೋಚರಿಸಲಾರಂಭಿಸಿದೆ. ಗಾಳಿ, ಮಳೆಯ ಹೊಡೆತಕ್ಕೆ ಮೆಣಸಿನ ದಾರ, ಕಾಯಿಗಳು ನೆಲಕಚ್ಚಲಾರಂಭಿಸಿದ್ದು, ಇದೇ ಪ್ರಮಾಣದಲ್ಲಿ ಮಳೆ ಮುಂದುವರಿದರೆ ಇಡೀ ವರ್ಷದ ಬೆಳೆಯೇ ತಮ್ಮ ಕೈಬಿಡಬಹುದು ಎನ್ನುವ ಆತಂಕ ಬೆಳೆಗಾರರನ್ನು ಕಾಡಲಾರಂಭಿಸಿದೆ.

ಕಡಿದಾದ ಹಾಗೂ ತಗ್ಗುಪ್ರದೇಶದಲ್ಲಿರುವ ನೂರಾರು ಎಕರೆ ಕಾಫಿ ತೋಟಗಳು ಹಳ್ಳಗಳ ಸ್ವರೂಪ ಪಡೆದಿವೆ. ಮೇಘ ಸ್ಫೋಟವಾದಂತೆ ಸುರಿಯುತ್ತಿರುವ ಮಳೆ ನೀರು ಹರಿದು ಹೋಗಲು ಸಾಕಷ್ಟು ಸಮಯಾವಕಾಶ ದೊರಕದಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಸಂಗ್ರಹವಾಗುತ್ತಿದೆ. ಕೆಲವೆಡೆ ಎತ್ತರದ ಪ್ರದೇಶಗಳ ತೋಟದಿಂದ ನದಿಯ ರೂಪದಲ್ಲಿ ಮಳೆ ನೀರು ಹರಿದು ಬರುತ್ತಿದೆ.

ಇನ್ನು ತಗ್ಗು ಪ್ರದೇಶದಲ್ಲಿರುವ ತೋಟಗಳಲ್ಲಿ ನೀರು ಸಂಗ್ರಹವಾಗಿ ಕಾಫಿ, ಏಲಕ್ಕಿ, ಅಡಕೆ ಗಿಡ, ಮರಗಳು ಬುಡ ಸಮೇತ ಕೊಚ್ಚಿ ಹೋಗುತ್ತಿವೆ. ಇದೆಲ್ಲದರಿಂದ ಭಾರಿ ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸುತ್ತಿದ್ದು, ತೋಟಗಳನ್ನು ಮರುನಿರ್ಮಿಸಲು ಹಲವು ವರ್ಷಗಳೇ ಬೇಕಾಗುತ್ತದೆ. ಅಲ್ಲಿಯವರೆಗೆ ಇತ್ತ ಜೀವನ ಸಾಗಿಸಲು ಆಸರೆಯಾಗಿದ್ದ ತೋಟವೂ ಇಲ್ಲ, ಅತ್ತ ಪ್ರತಿದಿನ ತೋಟ ನಿರ್ವಹಣೆಗೆ ಹಣ ವೆಚ್ಚ ಮಾಡಬೇಕಾದ ಅನಿವಾರ್ಯತೆಗೆ ಬೆಳೆಗಾರರು ಸಿಲುಕುತ್ತಿದ್ದಾರೆ.

ಎರಡು ವರ್ಷಗಳಿಂದ ಸತತವಾಗಿ ಕುಸಿತ ಕಂಡಿರುವ ಕಾಫಿ ಮಾರುಕಟ್ಟೆ ಈ ವರ್ಷ ಚೇತರಿಸಿಕೊಳ್ಳಬಹುದು ಎಂಬ ಬೆಳೆಗಾರರ ನಿರೀಕ್ಷೆಯೂ ಹುಸಿಯಾಗಿದ್ದು, ಒಂದು ಚೀಲ ಅರೇಬಿಕಾ ಪಾರ್ಚ್‌ಮೆಂಟ್ ಬೆಲೆ 6,500 ರೂ.ಗಳಿಗೆ ಇಳಿದಿದೆ. ಕೇಂದ್ರ ಸರ್ಕಾರ ಆಮದು ಸುಂಕ ಹೆಚ್ಚಿಸಿದ ನಂತರ ಚೇತರಿಸಿಕೊಳ್ಳಬಹುದು ಎಂಬ ಆಶಾಭಾವ ಮೂಡಿಸಿದ್ದ ಕಾಳು ಮೆಣಸು ಮಾರುಕಟ್ಟೆಯೂ ಕಾಫಿಯ ಹಾದಿಯನ್ನೇ ಹಿಡಿದಿದೆ. ಇದರಿಂದ ಬೆಳೆಗಾರರು ಲಾಭ ಕಾಣುವುದಿರಲಿ ಸಾಲ ಮಾಡಿ ತೋಟ ಹಾಗೂ ಕುಟುಂಬ ನಿರ್ವಹಣೆ ಮಾಡಬೇಕಾದ ಸ್ಥಿತಿ ಬಂದೊದಗಿದೆ. ಇದೇ ಸ್ಥಿತಿ ಮುಂದುವರಿದರೆ ಕಾಫಿ ಬೆಳೆಗಾರರ ಆತ್ಮಹತ್ಯೆ ಸರಣಿ ಆರಂಭವಾದರೂ ಆಶ್ಚರ್ಯವಿಲ್ಲ ಎನ್ನುತ್ತಾರೆ ಬಾಗೆ ಗ್ರಾಮದ ಕಾಫಿ ಬೆಳೆಗಾರ ಧಾರೇಶ್.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...