More

    ಗ್ರಾಪಂ ಮತದಾರರೇ ಗಮನಿಸಿ ಈ ಜಿಲ್ಲೆಯಲ್ಲಿ ಮಾತ್ರ ಇವಿಎಂ ಇರೋದು!

    ಹಾಸನ: ರಾಜ್ಯದ ಬೀದರ್ ಜಿಲ್ಲೆ ಹೊರತುಪಡಿಸಿ ಉಳಿದೆಲ್ಲ ಕಡೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಹೇಳಿದರು.

    ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಡಿ. 22 ರಂದು ನಡೆಯುವ ಮೊದಲ ಹಂತದ ಚುನಾವಣೆಗೆ ನಾಲ್ಕು ತಾಲೂಕಿನ 1677 ಸ್ಥಾನಗಳಿಗೆ 5640 ನಾಮಪತ್ರ ಸಲ್ಲಿಕೆಯಾಗಿವೆ. ಮೊದಲ ಹಂತದ ಚುನಾವಣೆಗೆ 5,19,600 ಹಾಗೂ ಎರಡನೇ ಹಂತದಲ್ಲಿ 5,50,945 ಜನರು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ. ಚುನಾವಣಾ ವೀಕ್ಷಕರಾಗಿ ರೇಷ್ಮೆ ಇಲಾಖೆ ಜಂಟಿ ನಿರ್ದೇಶಕಿ ಕೆ.ಟಿ. ಶಾಂತಲಾ ಅವರನ್ನು ಸರ್ಕಾರ ನೇಮಿಸಿದೆ ಎಂದು ಹೇಳಿದರು.

    ಮತದಾರರಿಗೆ ಅಳಿಸಲಾಗದ ಶಾಹಿಯನ್ನು ಎಡಗೈ ಹೆಬ್ಬೆರಳಿಗೆ ಹಾಕಲಾಗುವುದು. ಮತ ಚಲಾಯಿಸಲು ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿ ಅಥವಾ ಪರ್ಯಾಯವಾಗಿ 22 ದಾಖಲೆಗಳಲ್ಲಿ ಯಾವುದಾದರೂ ಒಂದನ್ನು ಹಾಜರುಪಡಿಸಬೇಕು ಎಂದರು.

    ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರದ ಜತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕೆ ಹೊರತು ಚುನಾವಣಾ ಬಹಿಷ್ಕಾರದಂತಹ ತಪ್ಪು ನಿರ್ಧಾರಗಳ ಮೂಲಕ ಸಾಂವಿಧಾನಿಕ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.

    ಕಸ್ತೂರಿ ರಂಗನ್ ವರದಿ ವಿರೋಧಿಸಿ ಸಕಲೇಶಪುರ ತಾಲೂಕಿನ ಹೆತ್ತೂರು, ಹೊಂಗಡಹಳ್ಳ ಹಾಗೂ ಹೆಗ್ಗದ್ದೆ ಗ್ರಾಮ ಪಂಚಾಯಿತಿ ಚುನಾವಣೆಗೆ ಒಂದೂ ನಾಮಪತ್ರ ಸಲ್ಲಿಕೆಯಾಗಿಲ್ಲ. ಪಶ್ಚಿಮಘಟ್ಟದಲ್ಲಿ 50 ಹೆಕ್ಟೇರ್ ವ್ಯಾಪ್ತಿಯಲ್ಲಿ ನಿವೇಶನ ಮಾಡಬಾರದು. ಕಲ್ಲು ಗಣಿಗಾರಿಕೆ ನಡೆಸಬಾರದು ಹಾಗೂ ರೆಡ್ ಕಾರ್ಪೆಟ್ ಕಾರ್ಖಾನೆಗಳಿಗೆ ಅವಕಾಶ ನೀಡಬಾರದು ಎಂದಿದೆ. ಪಶ್ಚಿಮಘಟ್ಟ ಉಳಿವಿಗೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts