ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ

ಹಾಸನ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರೋಹಿಣಿ ಸಿಂಧೂರಿ ಅವರನ್ನು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಹಾಸನದ ನೂತನ ಜಿಲ್ಲಾಧಿಕಾರಿಯಾಗಿ ಅಕ್ರಂ ಪಾಷಾ ಅವರನ್ನು ನೇಮಕ ಮಾಡಲಾಗಿದೆ. ರೋಹಿಣಿ ಸಿಂಧೂರಿ ಅವರನ್ನು 2017ರ ಜುಲೈ 23 ರಂದು ಹಾಸನ ಡಿಸಿಯಾಗಿ ನೇಮಕ ಮಾಡಲಾಗಿತ್ತು. ಆದರೆ, 2018ರ ಫೆಬ್ರವರಿ 6 ರಂದು ಅವರನ್ನು ವರ್ಗಾವಣೆ ಮಾಡಲಾಗಿತ್ತು.

ರೋಹಿಣಿ ಸಿಂಧೂರಿ ವರ್ಗಾವಣೆ ವಿರುದ್ಧ ಕಾನೂನು ಹೋರಾಟ ಮಾಡಿ ಗೆಲುವು ಸಾಧಿಸಿ ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದರು. ಆದರೆ, ಈಗಲೂ ರಾಜ್ಯ ಸರ್ಕಾರ ಅವಧಿಗೂ ಮುನ್ನವೇ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಅಕ್ರಂ ಪಾಷಾ ಶುಕ್ರವಾರ ಸಂಜೆ ಹಾಸನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.

One Reply to “ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ”

Comments are closed.